ಬೆಳಗಾವಿ ಮಹಿಳೆ ಮೇಲೆ ಹಲ್ಲೆ ಪ್ರಕರಣ; ಸಂತ್ರಸ್ತೆ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ
ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬಕ್ಕೆ ಬೆಳಗಾವಿ(Belagavi) ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi) ಅವರು ಸಿಎಂ ಸಿದ್ದರಾಮಯ್ಯ ನಿಧಿಯಿಂದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ್ದಾರೆ.
ಬೆಳಗಾವಿ, ಡಿ.19: ನಗರದ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬಕ್ಕೆ ಬೆಳಗಾವಿ(Belagavi) ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ(Satish Jarkiholi) ಅವರು ಸಿಎಂ ಸಿದ್ದರಾಮಯ್ಯ ನಿಧಿಯಿಂದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ ಐದು ಲಕ್ಷದ ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 2 ಎಕರೆ ಜಮೀನು ಮಂಜೂರಾಗಿದೆ ಎಂದು ಹೇಳಿದರು.
ಇನ್ನು ಸಿಐಡಿ ತನಿಖೆಗೂ ಮುನ್ನವೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೂ ಪ್ರಕರಣವನ್ನು ಸರ್ಕಾರ ತನಿಖೆಯನ್ನು ಸಿಐಡಿಗೆ ಒಪ್ಪಿಸಿದೆ. ತನಿಖೆ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಸಿಐಡಿಗೆ ಕೊಟ್ಟಿದ್ದಾರೆ.ಇಂತಹದೊಂದು ಘಟನೆ ಆಗಬಾರದಿತ್ತು, ಆದರೆ ನಮ್ಮ ಭಾಗದಲ್ಲಿ ಆಗಿದೆ. ಮುಂದೆ ಇಂತಹ ಘಟನೆ ಆಗದಂತೆ ಎಲ್ಲರೂ ಪ್ರಯತ್ನ ಮಾಡೋಣ ಎಂದುಸ ಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಇದನ್ನೂ ಓದಿ:ಬೆಳಗಾವಿ ರೀತಿ ಹಾವೇರಿಯಲ್ಲೂ ಹೀನ ಕೃತ್ಯ: ಪ್ರೀತಿಸಿ ಓಡಿ ಹೋದರೆಂದು ಯುವಕನ ಸೋದರ ಮಾವನ ಅರೆಬೆತ್ತಲೆಗೊಳಿಸಿ ಹಲ್ಲೆ
ಘಟನೆ ವಿವರ
ವಂಟಮೂರಿ ಗ್ರಾಮದಲ್ಲಿ ಪ್ರೀತಿಸುತ್ತಿದ್ದ ಜೋಡಿಯೊಂದು ಓಡಿ ಹೋಗಿತ್ತು. ಇದರಿಂದ ಆಕ್ರೋಶಗೊಂಡಿದ್ದ ಯುವತಿಯ ಕುಟುಂಬುಸ್ಥರು ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದರು. ಪ್ರಕರಣ ಸಂಬಂಧ ಏಳು ಆರೋಪಿಗಳನ್ನು ಕಾಕತಿ ಪೊಲೀಸರು ಬಂಧಿಸಿದ್ದರು. ಈ ನಡುವೆ ಪ್ರಕರಣದ ತನಿಖೆಯನ್ನುಸಿಐಡಿಗೆ ಒಪ್ಪಿಸುವಂತೆ ಒತ್ತಾಯಗಳು ಕೇಳಿಬಂದ ಹಿನ್ನಲೆ ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ರಾಜ್ಯ ಸರ್ಕಾರವು ಡಿ.17 ರಂದು ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ಆದೇಶಿಸಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ