ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ, ಘಟನೆ ತಡೆದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ಸಾರ್ವಜನಿಕರಿಗೆ ಸನ್ಮಾನ

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡುವುದನ್ನು ತಡೆಯಲು ಯತ್ನಿಸಿದ್ದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದ ಸಾರ್ವಜನಿಕರಿಗೆ ಬೆಳಗಾವಿ ನಗರ ಪೊಲೀಸರು ಸನ್ಮಾನಿಸಿ, ಪ್ರಶಂಸನೀಯ ಪತ್ರ ನೀಡಿ ಅಭಿನಂದಿಸಿದ್ದಾರೆ.

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ, ಘಟನೆ ತಡೆದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ಸಾರ್ವಜನಿಕರಿಗೆ ಸನ್ಮಾನ
ಬೆಳಗಾವಿ ಪೊಲೀಸ್​
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 30, 2023 | 10:07 AM

ಬೆಳಗಾವಿ, ಡಿಸೆಂಬರ್​​ 30: ಬೆಳಗಾವಿ (Belagavi) ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡುವುದನ್ನು ತಡೆಯಲು ಯತ್ನಿಸಿದ್ದ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದ ಸಾರ್ವಜನಿಕರಿಗೆ ಬೆಳಗಾವಿ ನಗರ ಪೊಲೀಸರು (Belagavi City Police) ಸನ್ಮಾನಿಸಿ, ಪ್ರಶಂಸನೀಯ ಪತ್ರ ನೀಡಿ ಅಭಿನಂದಿಸಿದ್ದಾರೆ. ನಗರದ ಪೊಲೀಸ್ ಮೈದಾನದಲ್ಲಿ ಜನರಲ್ ಪೊಲೀಸ್ ಪರೇಡ್ ನಡೆಯಿತು.

ಬಳಿಕ ವಂಟಮೂರಿ ಗ್ರಾಮದ ನಿವಾಸಿ ಜಹಾಂಗೀರ್ ತಹಶಿಲ್ದಾರ, ವಾಸೀಂಮ್ ಮಕಾನದಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಹೊಳಿಕಾರ್ ಅವರಿಗೆ ಸನ್ಮಾನಿಸಲಾಯಿತು. ಈ ವೇಳೆ ಕೋರ್ಟ್ ನೀಡಿದ್ದ ಪ್ರಶಂಸನೀಯ ಪತ್ರವನ್ನು ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅವರು ಜಹಾಂಗೀರ್ ಎಂಬುವವರಿಗೆ ನೀಡಿ ಗೌರವಿಸಿದರು. ಮೂವರಿಗೆ ತಲಾ ಐದು ಸಾವಿರ ರೂಪಾಯಿ ನಗದು ಬಹುಮಾನ ವಿತರಿಸಲಾಯಿತು.

ಇನ್ನು ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿ ಘಟನೆ ತಡೆದ ಕಾಕತಿ ಠಾಣೆಯ ಪಿಎಸ್ಐ ಮಂಜುನಾಥ್ ಹುಲಕುಂದ ಸೇರಿ ಆರು ಜನ ಸಿಬ್ಬಂದಿಗೂ ಸನ್ಮಾನಿಸಲಾಯಿತು.

ಇದನ್ನೂ ಓದಿ: ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆಯ ಫೋಟೊ, ಸಂದರ್ಶನ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ದೇಶನ

ವಂಟಮೂರಿ ಗ್ರಾಮದಲ್ಲಿ ನಡೆದಿದ್ದ ಘಟನೆ ತಡೆದವರಿಗೆ ಸನ್ಮಾನ ಮಾಡಿದ್ದೇವೆ. ವಂಟಮೂರಿ ಗ್ರಾಮದ ಮೂವರು ಸಾರ್ವಜನಿಕರಿಗೆ ಸನ್ಮಾನ ಮಾಡಿದ್ದೇವೆ. ಕೋರ್ಟ್ ನೀಡಿದ್ದ ಪ್ರಶಂಸನೀಯ ಪತ್ರ ಕೂಡ ನೀಡಿ ಗೌರವಿಸಿದ್ದೇವೆ. ಕಾಕತಿ ಠಾಣೆ ಪಿಎಸ್ಐ ಸೇರಿ ಆರು ಜನರಿಗೆ ಸನ್ಮಾನ ಮಾಡಿದ್ದೇವೆ. ಪಿಎಸ್ಐಗೆ ಐದು ಸಾವಿರ ನಗದು, ಉಳಿದು ಐದು ಜನ ಸಿಬ್ಬಂದಿಗೆ ನಾಲ್ಕು ಸಾವಿರ ಬಹುಮಾನ ನೀಡಿದ್ದೇವೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಹೇಳಿದರು.

ಮಾಹಿತಿ ನೀಡಿದ್ದ ಮೂರು ಜನ ಸಾರ್ವಜನಿಕರಿಗೆ ಎನೂ ಆಗದಂತೆ ರಕ್ಷಣೆ ನೀಡುತ್ತೇವೆ‌. ಘಟನೆ ನಡೆದಾಗ ಭಯ ಪಡದೇ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿ ಅಂತಾ ಕಮಿಷನರ್ ಮನವಿ ಮಾಡಿದರು.

ಏನಿದು ಪ್ರಕರಣ

ಇದೇ ತಿಂಗಳ 11 ರಂದು ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಓರ್ವ ಮಹಿಳೆಯನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಲಾಗಿತ್ತು. ಬಳಿಕ ಘಟನೆಗೆ ಸಂಬಂಧಪಟ್ಟಂತೆ 7 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಪ್ರಿಯತಮೆ ಜೊತೆ ಪ್ರಿಯತಮ ಓಡಿ ಹೋಗಿದ್ದರಿಂದ ಆಕ್ರೋಶಗೊಂಡ ಯುವತಿಯ ಕುಟುಂಬಸ್ಥರು, ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯ ವರ್ತನೆ ತೋರಿದ್ದರು. ರಾಜ್ಯವೇ ತಲೆತಗ್ಗಿಸುವಂತ ಘಟನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್