Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯನ್ನು ಬೆತ್ತಲುಗೊಳಿಸಿ ಹಲ್ಲೆ: ಲಕ್ಷ್ಮೀ ಹೆಬ್ಬಾಳ್ಕರ್​ ಕಾಲಿಗೆ ಬಿದ್ದು ನ್ಯಾಯಕ್ಕಾಗಿ ಮೊರೆಯಿಟ್ಟ ಕುಟುಂಬ

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿತ್ತು. ಓರ್ವ ಮಹಿಳೆಯನ್ನು ಬೆತ್ತಲೆಗೊಳಿಸಿ, ನಡುರಸ್ತೆಯಲ್ಲಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಲಾಗಿತ್ತ. ಸದ್ಯ ಮಹಿಳೆಯನ್ನು ಬೆಳಗಾವಿ ಬಿಮ್ಸ್​ಗೆ ದಾಖಲಿಸಲಾಗಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಮಹಿಳೆಯನ್ನು ಬೆತ್ತಲುಗೊಳಿಸಿ ಹಲ್ಲೆ: ಲಕ್ಷ್ಮೀ ಹೆಬ್ಬಾಳ್ಕರ್​ ಕಾಲಿಗೆ ಬಿದ್ದು ನ್ಯಾಯಕ್ಕಾಗಿ ಮೊರೆಯಿಟ್ಟ ಕುಟುಂಬ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಕಾಲಿಗೆ ಬಿದ್ದ ಮಹಿಳೆ
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ವಿವೇಕ ಬಿರಾದಾರ

Updated on: Dec 11, 2023 | 4:52 PM

ಬೆಳಗಾವಿ, ಡಿಸೆಂಬರ್​​​ 11: ಬೆಳಗಾವಿ (Belagavi) ತಾಲೂಕಿನ ವಂಟಮೂರಿ ಗ್ರಾಮದ ಯುವಕ ಪ್ರೀತಿಸಿದ್ದ ಯುವತಿ ಜೊತೆ ರವಿವಾರ (ಡಿ.10) ಓಡಿ ಹೋಗಿದ್ದನು. ಇದರಿಂದ ಕೋಪಗೊಂಡ ಯುವತಿ ಕಡೆಯವರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ, ನಡುರಸ್ತೆಯಲ್ಲಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದರು. ಪ್ರಕರಣ ಸಂಬಂಧ ಪೊಲೀಸರು (Police) ಈಗಾಗಲೆ ಮಹಿಳೆಯರು ಸೇರಿದಂತೆ ಏಳು ಜನರನ್ನು ಬಂಧಿಸಿದ್ದಾರೆ. ಇನ್ನು ಹಲ್ಲೆಗೊಳಗಾದ ಮಹಿಳೆಯನ್ನು (Woman) ಬೆಳಗಾವಿ ಬಿಮ್ಸ್​​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಮ್ಸ್​ ಆಸ್ಪತ್ರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar)​ ಭೇಟಿ ನೀಡಿ, ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿದರು. ಘಟನೆ ಬಗ್ಗೆ ಮಹಿಳೆ ಪತಿ ಲಗಮಣ್ಣ ಗಡ್ಕರಿಯಿಂದ ಮಾಹಿತಿ ಪಡೆದರು.

ಈ ವೇಳೆ ಸಂತ್ರಸ್ತ ಮಹಿಳೆ ಕುಟುಂಬಸ್ಥರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಕಾಲಿಗೆ ಬಿದ್ದು ನ್ಯಾಯಕ್ಕಾಗಿ ಮನವಿ ಮಾಡಿದರು. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

ಇದನ್ನೂ ಓದಿ: ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು; ಸಿದ್ದರಾಮಯ್ಯ

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಇಡೀ ಮಾನವ ಕುಲ ತಲೆ ತಗ್ಗಿಸುವ ಕೆಲಸ ಇದು. ನಿನ್ನೆ (ಡಿ.11) ರಾತ್ರಿ ಘಟನೆಯಾದ ಮೇಲೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯವೆಸಗಿದವರ ವಿರುದ್ಧ ಕಾನೂನಿನಡಿ ಕಠಿಣ ಶಿಕ್ಷೆ ಆಗಬೇಕು. ನನ್ನ ತಾಲೂಕಿನಲ್ಲೇ ಇಂತಹ ಘಟನೆ ಆಗಿದ್ದು ಖೇದಕರ ಎಂದು ಹೇಳಿದರು.

ತಿಳಿವಳಿಕೆ ಇದ್ದವರು ಏಕೆ ಇಂತಹ ತಪ್ಪು ಮಾಡುತ್ತಾರೆ ಗೊತ್ತಾಗುತ್ತಿಲ್ಲ. ಮಹಿಳೆ ಮನಸ್ಸಿಗೆ ಘಾಸಿಯಾಗಿದೆ, ನಾನು ಅವರ ಬೆಂಬಲಕ್ಕಿದ್ದೇನೆ. ಸಖಿ ಒನ್ ಸ್ಟಾಪ್ ಅಡಿಯಲ್ಲಿ ಸಂತ್ರಸ್ತ ಮಹಿಳೆ ಪರವಾಗಿ ವಾದಿಸಲು ನಾವೇ ವಕೀಲರನ್ನು ನೀಡುತ್ತೇವೆ. ಅನ್ಯಾಯಕ್ಕೊಳಗಾದ ಮಹಿಳೆಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ. ಮಹಿಳೆಯ ಕುಟುಂಬದ ಬೇಡಿಕೆ ಏನಿದ್ದರೂ ಅದನ್ನು ಇಡೇರಿಸುತ್ತೇನೆ. ಅನ್ಯಾಯಕ್ಕೊಳಗಾದ ಮಹಿಳೆಯ ಕುಟುಂಬದ ಜತೆ ಸರ್ಕಾರ ಇದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ