ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು; ಸಿದ್ದರಾಮಯ್ಯ
ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದ ಯುವಕ ಪ್ರೀತಿಸಿದ್ದ ಯುವತಿ ಜೊತೆ ರವಿವಾರ (ಡಿ.10) ಓಡಿ ಹೋಗಿದ್ದಾನೆ. ಇದರಿಂದ ಕೋಪಗೊಂಡ ಯುವತಿ ಕಡೆಯವರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ, ನಡುರಸ್ತೆಯಲ್ಲಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ.
ಬೆಳಗಾವಿ, ಡಿಸೆಂಬರ್ 11: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು (Woman) ಬೆತ್ತಲೆಗೊಳಿಸಿ ಹಲ್ಲೆ (Assault) ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ, ಕುಟುಂಬಕ್ಕೆ ನ್ಯಾಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಟ್ವೀಟ್ ಮಾಡಿದ್ದಾರೆ. “ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು” ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಫೋಸ್ಟ್ ಮಾಡಿದ್ದಾರೆ.
ಪ್ರಕರಣ ಸಂಬಂಧ ಹಲ್ಲೆಗೊಳಗಾದ ಪತಿ ಲಗಮನ್ನ ಮಾತನಾಡಿ, ನಿನ್ನೆ (ಡಿ.10) ಸಂಜೆ ನಾನು ಮಹಾರಾಷ್ಟ್ರಕ್ಕೆ ಡ್ರೈವಿಂಗ್ ಕೆಲಸಕ್ಕೆ ಹೋಗಿದ್ದೆ. ಪತ್ನಿ ಮೇಲೆ ಹಲ್ಲೆ ಮಾಡಿದ ಬಗ್ಗೆ ಅಕ್ಕಪಕ್ಕದ ಮನೆಯವರು ಹೇಳಿದರು. ಕೂಡಲೇ ಆ್ಯಂಬುಲೆನ್ಸ್ಗೆ ಕರೆ ಮಾಡಿ ನಾನೇ ಕಳಿಸಿದೆ. ಮುಂಜಾನೆ ನಾಲ್ಕೂವರೆವರೆಗೂ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ. ನಮ್ಮ ಮಗ ಪ್ರೀತಿ ಮಾಡಿದ ಹುಡುಗಿ ಕರೆದುಕೊಂಡು ಹೋಗಿದ್ದಾನೆ. ನನ್ನ ಮಗ ಎಲ್ಲಿದ್ದಾನೆ ಅನ್ನೋದು ನಮಗೂ ಗೊತ್ತಿಲ್ಲ. ನಮಗೆ ರಕ್ಷಣೆ ಬೇಕು, ತಪ್ಪು ಮಾಡಿದವರಿಗೆ ಗಲ್ಲು ಶಿಕ್ಷೆ ಆಗಬೇಕು ಎಂದರು.
ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.
ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ…
— CM of Karnataka (@CMofKarnataka) December 11, 2023
ಇದನ್ನೂ ಓದಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಬೆಳಗಾವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್
ಏನಿದು ಘಟನೆ
ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದ ಯುವಕ ಪ್ರೀತಿಸಿದ್ದ ಯುವತಿ ಜೊತೆ ರವಿವಾರ (ಡಿ.10) ಓಡಿ ಹೋಗಿದ್ದಾನೆ. ಇದರಿಂದ ಕೋಪಗೊಂಡ ಯುವತಿ ಕಡೆಯವರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ, ನಡುರಸ್ತೆಯಲ್ಲಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೆ ಮಹಿಳೆಯರು ಸೇರಿದಂತೆ ಏಳು ಜನರನ್ನು ಬಂಧಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ