ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ನೀಡಿದ ಮಾನವ ಹಕ್ಕುಗಳ ಆಯೋಗ

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚನೆ ನೀಡಿದೆ.

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ನೀಡಿದ ಮಾನವ ಹಕ್ಕುಗಳ ಆಯೋಗ
ಘಟನೆ ನಡೆದ ಸ್ಥಳದಲ್ಲಿ ಪೊಲೀಸ್​ ಪರಿಶೀಲನೆ
Edited By:

Updated on: Dec 15, 2023 | 10:06 PM

ಬೆಳಗಾವಿ, ಡಿಸೆಂಬರ್​ 15: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (Human Rights Commission) ದಿಂದ ನೋಟಿಸ್ ಜಾರಿ ಮಾಡಲಾಗಿದೆ. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ. ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ರಾಷ್ತ್ರೀಯ ಮಾನವ ಹಕ್ಕುಗಳ ಆಯೋಗ ಸೂಚಿಸಿದೆ.

ತನಿಖೆಯ ಪ್ರಗತಿ, ಬಂಧನ, ಪರಿಹಾರ ನೀಡಿದ ಬಗ್ಗೆ ಮಾಹಿತಿ ನೀಡಿ. ಇಂತಹ ಘಟನೆ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಕೇಸ್​: 5 ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದ ಜೆಪಿ ನಡ್ಡಾ

ಸದ್ಯ ಈ ಪ್ರಕರಣ ಕುರಿತಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿಯೊಂದನ್ನು ರಚನೆ ಮಾಡಿದ್ದು, ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಜೆ.ಪಿ.ನಡ್ಡಾ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಇದು ಸಿಎಂ ಸಿದ್ದರಾಮಯ್ಯ ಅವರ ಆಕ್ರೋಶಕ್ಕೂ ಕಾರಣವಾಗಿದ್ದು, ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಸಾಲು ಸಾಲು ದೌರ್ಜನ್ಯದ ಪ್ರಕರಣಗಳು ನಡೆಯುತ್ತಿದ್ದಾಗ ಕಣ್ಣು ಮುಚ್ಚಿ ಕೂತಿದ್ದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿದ್ದೆಗಣ್ಣಿಗೆ ಬೆಳಗಾವಿಯಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರ ಮೇಲೆ ನಡೆದಿರುವ ದೌರ್ಜನ್ಯ ಮಾತ್ರ ಕಾಣಿಸಿಕೊಂಡು ಅದರಲ್ಲಿ ರಾಜಕೀಯ ಬೇಳೆ ಬೇಯಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:  ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಬಿಜೆಪಿ ಪ್ರತಿಭಟನೆಗೆ ಕರೆ ನೀಡುತ್ತಿದ್ದಂತೆ ಎಚ್ಚೆತ್ತ ಸರ್ಕಾರ, ಸಂತ್ರಸ್ತೆಗೆ ಪರಿಹಾರ ಘೋಷಣೆ

ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡುತ್ತಿದ್ದಂತೆ ಎಚ್ಚೆತ್ತ ಸರ್ಕಾರ ಸಂತ್ರಸ್ತೆ ಮಹಿಳೆಗೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಸಿಎಂ ಪರಿಹಾರ ಘೋಷಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದಲೂ 50 ಸಾವಿರ ರೂಪಾಯಿ ಪರಿಹಾರ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:57 pm, Fri, 15 December 23

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us