ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರ
ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರದಿಂದ ಭಾನುವಾರ ಆದೇಶ ಹೊರಡಿಸಲಾಗಿದೆ.
ಬೆಳಗಾವಿ, ಡಿಸೆಂಬರ್ 17: ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆ (woman) ಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರದಿಂದ ಭಾನುವಾರ ಆದೇಶ ಹೊರಡಿಸಲಾಗಿದೆ. ನಿನ್ನೆಯೇ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿರುವ ಸರ್ಕಾರ, ಅಧಿಕೃತವಾಗಿ ಇಂದು ಬೆಂಗಳೂರಿನ ಸಿಐಡಿ ಕಚೇರಿಗೆ ತೆರಳಿ ಕೇಸ್‌ನ ಕಡತಗಳನ್ನು ತನಿಖಾಧಿಕಾರಿ ಹಾಗೂ ಎಸಿಪಿ ಗಿರೀಶ್ ಹಸ್ತಾಂತರಿಸಲಿದ್ದಾರೆ.
ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಗದಗದಲ್ಲಿ ಮಾತನಾಡಿದ್ದು, ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಪ್ರಕರಣದ ತನಿಖೆ ಮಾಡಲು ನಮ್ಮ ಪೊಲೀಸರೇ ಸಮರ್ಥರಿದ್ದಾರೆ. ಸಾಕ್ಷ್ಯ ಸಂಗ್ರಹಿಸಿ ಶಿಕ್ಷೆ ಕೊಡಿಸಲು ಪೊಲೀಸರೇ ತಯಾರಾಗಿದ್ದಾರೆ ಎಂದು ಹೇಳಿದ್ದರು.
ಇದನ್ನೂ ಓದಿ: ಹೊಸ ವಂಟಮುರಿ ಘಟನೆಯಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಸಿದ್ದರಾಮಯ್ಯ
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ ಬೆಳಗಾವಿಗೆ ಆಗಮಿಸಿದ್ದು, ಡಿಎಸ್ಪಿ ಮಟ್ಟದ ಅಧಿಕಾರಿಗಳ ತಂಡದಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ನಾಳೆ ಬೆಳಗಾವಿಗೆ NHRC ಡಿಐಜಿ ಸುನೀಲ್ ಕುಮಾರ್ ಮೀನಾ ಆಗಮಿಸಲಿದ್ದು, ಈ ಹಿನ್ನೆಲೆ ಜಿಲ್ಲೆಯ ಸರ್ಕ್ಯೂಟ್ ಹೌಸ್ನಲ್ಲೇ ಪೊಲೀಸರಿಂದ ಮಾಹಿತಿ ಪಡೆಯಲಾಗಿದೆ.
ಪ್ರಕರಣದ ತನಿಖಾಧಿಕಾರಿ ಎಸಿಪಿ ಗಿರೀಶ್ ಕರೆಸಿಕೊಂಡು ಘಟನೆ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ನಡೆದ ಬಳಿಕ ಪೊಲೀಸರು ಏನೆಲ್ಲಾ ಮಾಡಿದ್ದಾರೆ, ಬಳಿಕ ಯಾವೆಲ್ಲ ಕ್ರಮ ಕೈಕೊಂಡಿದ್ದಾರೆ ಎಂದು ಮಾಹಿತಿ ಪಡೆದುಕೊಂಡಿದ್ದಾರೆ.
ಪ್ರಕರಣ ಕುರಿತಾಗಿ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಉಳಿದ ಇಬ್ಬರಿಗೆ ಹುಡುಕಾಟ ನಡೆಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಹೋಗಲು ತಡ ಮಾಡಿದ್ದ ಕಾಕತಿ ಸಿಪಿಐ ವಿಜಯ್ ಸಿನ್ನೂರ್ ಅವರನ್ನ ಅಮಾನತು ಮಾಡಲಾಗಿದೆ.
ಇದನ್ನೂ ಓದಿ: ಬೆಳಗಾವಿ ಮಹಿಳೆ ಹಲ್ಲೆ ಪ್ರಕರಣ; ಸಂತ್ರಸ್ತೆಗೆ ಎರಡು ಎಕರೆ ಜಮೀನು ಮಂಜೂರು
ಸಂತ್ರಸ್ತೆಗೆ ನೆರವುಗಳ ಮೇಲೆ ನೆರವು ಘೋಷಣೆ ಮಾಡಲಾಗಿದೆ. ಮೊನ್ನೆಯಷ್ಟೇ ರಾಜ್ಯ ಸರ್ಕಾರ ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ನಿನ್ನೆ ಜಮೀನು ಮಂಜೂರು ಮಾಡಲಾಗಿದೆ. ಸಚಿವ ಬಿ.ನಾಗೇಂದ್ರ ನಿರ್ದೇಶನ ಮೇಲೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ 2.3 ಎಕರೆ ಜಮೀನು ಕೊಡಲಾಗಿದೆ.
ಇದೇ ಘಟನೆ ಈಗ ರಾಜಕೀಯ ತಿರುವು ಪಡೆದುಕೊಂಡಿದೆ. ಅತ್ತ ಸತ್ಯಶೋಧನಾ ಸಮಿತಿ ಸ್ಥಳದಲ್ಲಿ ಸತ್ಯ ಶೋಧನ ನಡೆಸಿದ್ದರೆ, ಇತ್ತ ಬಿಜೆಪಿ ಕಾರ್ಯಕರ್ತರು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:05 pm, Sun, 17 December 23