ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಕೇಸ್​: 5 ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದ ಜೆಪಿ ನಡ್ಡಾ

ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಅಮಾನವೀಯ ಘಟನೆ ನಡೆದಿತ್ತು. ಸದ್ಯ ಈ ಪ್ರಕರಣ ಕುರಿತಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿಯೊಂದನ್ನು ರಚನೆ ಮಾಡಿದ್ದು, ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಕೇಸ್​: 5 ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದ ಜೆಪಿ ನಡ್ಡಾ
ಜೆಪಿ ನಡ್ಡಾ, ಘಟನೆ ನಡೆದ ಸ್ಥಳದಲ್ಲಿ ಪೊಲೀಸ್​ ಪರಿಶೀಲನೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Dec 15, 2023 | 7:14 PM

ಬೆಳಗಾವಿ, ಡಿಸೆಂಬರ್​​​ 15: ಮಹಿಳೆ (Woman) ಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಅಮಾನವೀಯ ಘಟನೆ ಬೆಳಗಾವಿ (belagavi) ತಾಲೂಕಿನ ವಂಟಮೂರಿ ಗ್ರಾಮದಲ್ಲಿ ನಡೆದಿತ್ತು. ಸದ್ಯ ಈ ಕುರಿತಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿಯೊಂದನ್ನು ರಚನೆ ಮಾಡಿದ್ದು, ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಘಟನೆಯನ್ನು ಖಂಡಿಸಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಇಂತಹ ಘೋರ ಅಪರಾಧಗಳು ನಡೆಯುತ್ತಿವೆ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮಹಿಳೆಯರ ಮೇಲೆ ಇಂತಹ ಘೋರ ಅಪರಾಧಗಳು ನಿಯಮಿತವಾಗಿ ನಡೆಯುತ್ತಿವೆ. ಇಂತಹ ಅಪರಾಧಗಳನ್ನು ದೇಶದ ಎಲ್ಲೆಡೆ ಕಾಂಗ್ರೆಸ್ ಸರ್ಕಾರ ತಡೆಗಟ್ಟುವಲ್ಲಿ ತನ್ನ ಬೇಜವಾಬ್ದಾರಿಯನ್ನು ತೋರಿಸಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಸಮಿತಿಯಲ್ಲಿ ಯಾರೆಲ್ಲಾ ಇದ್ದಾರೆ?

  • ಸಂಸದೆ ಅಪ್ರಜಿತಾ ಸಾರಂಗಿ
  • ಸಂಸದೆ ಸುನೀತಾ ದುಗ್ಗಲ್
  • ಸಂಸದೆ ಲಾಕೆಟ್ ಚಟರ್ಜಿ
  • ಸಂಸದೆ ರಂಜಿತಾ ಕೋಲಿ
  • ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ

ಮಹಿಳೆ ಮಗ ದುಂಡಪ್ಪ ನಾಯಕ್ ಮತ್ತು ಪ್ರಿಯಾಂಕ ಓಡಿ ಹೋಗಿದ್ದರು. ಇದರಿಂದ ಕೆರಳಿದ ಪ್ರಿಯಾಂಕಾ ಕುಟುಂಬಸ್ಥರು ದುಂಡಪ್ಪ ಮನೆಗೆ ನುಗ್ಗಿ ದಾಂಧಲೆ ಮಾಡಿದ್ದಾರೆ. ಮಹಿಳೆ ಬಟ್ಟೆ ಬಿಚ್ಚಿ, ಮೆರವಣಿಗೆ ನಡೆಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದರು. ಮನೆಯನ್ನ ಸಂಪೂರ್ಣವಾಗಿ ಧ್ವಂಸಗೊಳಿಸಿದ್ದರು. ಮನೆ ಮೇಲೆ ಕಲ್ಲು ತೂರಿ ಕಿಟಿಕಿ ಗಾಜುಯ ಪುಡಿಪುಡಿ ಮಾಡಿದ್ದರು. ಮನೆಯ ಮೇಲ್ಛಾವಣಿಯನ್ನೂ ಹಾನಿ ಮಾಡಿದ್ದರು. ಘಟನೆ ಬಳಿಕ ಗಾಯಾಳು ಮಹಿಳೆಯನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಹೈಕಮಾಂಡ್​ ಸೂಚನೆ ಬೆನ್ನಲ್ಲೇ ಸರ್ಕಾರದ ವಿರುದ್ಧ ಬಿಜೆಪಿ ಧರಣಿ; ಕೇಂದ್ರ ತಂಡ ಬೆಳಗಾವಿಗೆ ಭೇಟಿ

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ಮಹಿಳೆ ಆರೋಗ್ಯ ವಿಚಾರಿಸಿದ್ದರು. ಸಂತ್ರಸ್ತೆಯಿಂದ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದರು. ಬಳಿಕ ಘಟನೆ ನಡೆದ ವಂಟಮೂರಿ ಗ್ರಾಮಕ್ಕೂ ಪರಮೇಶ್ವರ್ ಭೇಟಿ ನೀಡಿದ್ದರು. ಯುವಕನ ಮನೆಯಲ್ಲಿ ಪರಿಶೀಲಿಸಿದ್ದರು. ದುಂಡಪ್ಪ ಅಜ್ಜಿಯಿಂದ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದರು.

ಇದನ್ನೂ ಓದಿ: ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ 4 ಮಹಿಳೆಯರು ಹಿಂಡಲಗಾ ಜೈಲಿಗೆ ಶಿಫ್ಟ್

ಬಳಿಕ ಮಾತನಾಡಿದ್ದ ಅವರು, ಈ ಘಟನೆಯನ್ನ ಯಾರು ಸಹ ನಿರೀಕ್ಷೆ ಮಾಡಿರಲಿಲ್ಲ. ಇದು ಯಾರಿಗೂ ಗೌರವ ತರುವ ಕೆಲಸ ಅಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಹೇಳಿದ್ದರು.

ಗುರುವಾರ ಹೈಕೋರ್ಟ್ ರಾಜ್ಯ ಕಾಂಗ್ರೆಸ್​​ ಸರ್ಕಾರಕ್ಕೆ ಚಾಟಿ ಬೀಸಿದೆ. ಅಂತಹ ಘಟನೆ ನಡೆಯಲು ಯಾಕೆ ಸರ್ಕಾರ ಅವಕಾಶ ಕೊಟ್ಟಿತು. ಪೊಲೀಸ್ ಗಸ್ತು ಯಾಕೆ ಇರಲಿಲ್ಲ. ಸರ್ಕಾರ ಏನು ಕ್ರಮ ತೆಗೆದುಕೊಂಡಿದೆ ಅಂತಾ ನ್ಯಾಯಾಲಯ ಪ್ರಶ್ನೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:11 pm, Fri, 15 December 23

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​