ಮಹಿಳೆಯನ್ನ ವಿವಸ್ತ್ರಗೊಳಿಸಿದ ಪ್ರಕರಣ: ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ‌ ಹೈಕೋರ್ಟ್

ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್(High Court) ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡು, ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿದೆ. ಜೊತೆಗೆ ಮಾಧ್ಯಮಗಳಲ್ಲಿ ಸಂತ್ರಸ್ತೆಯ ಫೋಟೋ, ಸಂದರ್ಶನ ಬಿತ್ತರಿಸದಂತೆ ನಿರ್ಬಂಧ ಹೇರಿ ಆದೇಶಿಸಲಾಗಿದೆ.

ಮಹಿಳೆಯನ್ನ ವಿವಸ್ತ್ರಗೊಳಿಸಿದ ಪ್ರಕರಣ: ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ‌ ಹೈಕೋರ್ಟ್
ಹೈಕೋಟ್​
Follow us
Ramesha M
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 12, 2023 | 6:04 PM

ಬೆಂಗಳೂರು, ಡಿ.12:  ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್(High Court) ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡು, ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿದೆ. ಭಾರತ, ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿದೆ. ಕರ್ನಾಟಕದಂತಹ ಪ್ರಗತಿಪರ ರಾಜ್ಯದಲ್ಲಿ ಇಂತಹ ಘಟನೆ ಕಳವಳಕಾರಿಯಾಗಿದೆ. ಜೊತೆಗೆ ಮಾಧ್ಯಮಗಳಲ್ಲಿ ಸಂತ್ರಸ್ತೆಯ ಫೋಟೋ, ಸಂದರ್ಶನ ಬಿತ್ತರಿಸದಂತೆ ನಿರ್ಬಂಧ ಹೇರಲಾಗಿದೆ. ಕೆಲ ಮಾಧ್ಯಮಗಳಲ್ಲಿ ಸಂತ್ರಸ್ತೆಯ ಫೋಟೋ, ವಿಡಿಯೋ ಬಿತ್ತರಿಸಲಾಗುತ್ತಿದೆ. ಇದರಿಂದ ಸಂತ್ರಸ್ತೆ ಘನತೆಗೆ ಧಕ್ಕೆಯಾಗುವ ಹಿನ್ನೆಲೆಯಲ್ಲಿ ನಿರ್ಬಂಧಿಸಲಾಗಿದೆ. ಆದರೆ, ಘಟನೆಯ ಸುದ್ದಿ ಪ್ರಸಾರಕ್ಕೆ ಯಾವುದೇ ನಿರ್ಬಂಧವಿಲ್ಲ‌ ಎಂದು ಹೈಕೋರ್ಟ್​ನ ಮುಖ್ಯ ನ್ಯಾಯಾಧೀಶರಾದ  ಪ್ರಸನ್ನ ಬಿ.ವರಾಳೆ ಹಾಗೂ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಆದೇಶಿಸಿದೆ.

ಏನಿದು ಪ್ರಕರಣ?

ಇದೇ ತಿಂಗಳ 11 ರಂದು ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಾನವ ಸಮಾಜವೇ ತಲೆ ತಗ್ಗಿಸುವ ಘಟನೆಯೊಂದು ನಡೆದಿತ್ತು. ಓರ್ವ ಮಹಿಳೆಯನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿತ್ತು. ಬಳಿಕ ಈ ಘಟನೆಗೆ ಸಂಬಂಧಪಟ್ಟಂತೆ 7 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದರು. ಇನ್ನು ಇಷ್ಟಕ್ಕೆಲ್ಲಾ ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದ. ಇದರಿಂದ ಆಕ್ರೋಶಗೊಂಡ ಯುವತಿಯ ಕುಟುಂಬಸ್ಥರು, ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಅಮಾನವೀಯ ವರ್ತನೆ ತೋರಿದ್ದರು.

ಇದನ್ನೂ ಓದಿ:ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಬೆಳಗಾವಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್

ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬೆಳಗಾವಿ ನಗರ ಪೊಲೀಸ್ ಕಮಿಷನರ್​​ ಸಿದ್ದರಾಮಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಮಾತನಾಡಿದ್ದ ಅವರು, ಪ್ರಕರಣ ಸಂಬಂಧ ಮಹಿಳೆಯರು ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. ಪರಾರಿಯಾದ ಮತ್ತಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸ್ತಿದ್ದೇವೆ. ಮಹಿಳೆಯನ್ನ ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ ಎಂದು ಗೊತ್ತಾಗಿದೆ. ಮಾಹಿತಿ ಬಂದ ಕೂಡಲೇ ನಮ್ಮ ಸಿಬ್ಬಂದಿ ಬಂದು ತಕ್ಷಣ ಮಹಿಳೆ ರಕ್ಷಣೆ ಮಾಡಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ ಎಂದಿದ್ದರು. ಇದೀಗ ಹೈಕೋರ್ಟ್​ ಸೂಕ್ತ ತನಿಖೆಗೆ ಆಗ್ರಹಿಸಿ ಸರ್ಕಾರಕ್ಕೆ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:55 pm, Tue, 12 December 23

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್