ಬೆಳಗಾವಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆ ಧ್ವಜಸ್ತಂಭ ನೆಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು

ರಾಜ್ಯೋತ್ಸವ ಹಿನ್ನೆಲೆಯಲ್ಲಿ ಧ್ವಜಸ್ತಂಭ ನೆಡುತ್ತಿರುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿರುವ ಘಟನೆ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ನಡೆದಿದೆ. ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮೃತ ಪ್ರಜ್ವಲ್ ಮತ್ತು ಗೆಳೆಯರು ವಕ್ಕುಂದ ಗ್ರಾಮದ ಬಸ್ ನಿಲ್ದಾಣದ ಮುಂದೆ ಧ್ವಜಸ್ತಂಭ ನೆಡಲು ತಯಾರಿ ನಡೆಸಿದ್ದರು.

ಬೆಳಗಾವಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆ ಧ್ವಜಸ್ತಂಭ ನೆಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವು
ಮೃತ ಪ್ರಜ್ವಲ್​
Follow us
| Updated By: ವಿವೇಕ ಬಿರಾದಾರ

Updated on: Oct 29, 2023 | 10:57 AM

ಬೆಳಗಾವಿ ಅ.29: ಗಡಿ ಜಿಲ್ಲೆ, ಕುಂದಾನಗರಿ ಬೆಳಗಾವಿಯಲ್ಲಿ (Belagavi) ಕನ್ನಡ ರಾಜ್ಯೋತ್ಸವವನ್ನು (Kannada Rajyotsava) ಪ್ರತಿವರ್ಷ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷವಾದ ಹಿನ್ನೆಲೆಯಲ್ಲಿ ಈ ಬಾರಿ ಮತ್ತಷ್ಟು ಜೋರಾಗಿ ಆಚರಿಸಲು ಜಿಲ್ಲೆಯಾದ್ಯಂತ ಸಡಗರದ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಆದರೆ ರಾಜ್ಯೋತ್ಸವ ಸಿದ್ಧತೆ ವೇಳೆಯೇ ದುರಂತವೊಂದು ಸಂಭವಿಸಿದೆ.

ರಾಜ್ಯೋತ್ಸವ ಹಿನ್ನೆಲೆಯಲ್ಲಿ ಧ್ವಜಸ್ತಂಭ ನೆಡುತ್ತಿರುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿರುವ ಘಟನೆ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ನಡೆದಿದೆ. ಪ್ರಜ್ವಲ್ ಚನ್ನಗೌಡ ಮುನೇಪ್ಪನವರ (18) ಮೃತ ದುರ್ದೈವಿ. ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪ್ರಜ್ವಲ್ ಮತ್ತು ಗೆಳೆಯರು ವಕ್ಕುಂದ ಗ್ರಾಮದ ಬಸ್ ನಿಲ್ದಾಣದ ಮುಂದೆ ಧ್ವಜಸ್ತಂಭ ನೆಡಲು ತಯಾರಿ ನಡೆಸಿದ್ದರು.

ಇದನ್ನೂ ಓದಿ: ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು, ಒಂದೇ ಕುಟುಂಬದ ಮೂವರ ಸಾವು

ಶನಿವಾರ ಸಂಜೆ ಧ್ವಜಸ್ತಂಭ ನೆಡುವ ಸಂದರ್ಭದಲ್ಲಿ ಅಲ್ಲಿಯೇ ಹಾದು ಹೋಗಿದ್ದ,ಸರ್ವಿಸ್ ವೈಯರ್​ಗೆ ಕಂಬ ತಾಗಿದೆ. ಇದರಿಂದಾಗ ಧ್ವಜಸ್ತಂಭ ಹಿಡಿದಿದ್ದ ಪ್ರಜ್ವಲ್​​ಗೆ ವಿದ್ಯುತ್ ಪ್ರವಹಿಸಿದೆ. ಇದರಿಂದ ಕುಸಿದು ಬಿದ್ದ ಆತನನ್ನು ಸ್ಥಳೀಯರು ತಕ್ಷಣ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಪ್ರಜ್ವಲ್​​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಮೃತ ಪ್ರಜ್ವಲ್ ಅಗ್ನಿವೀರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು. ದೈಹಿಕ ಪರೀಕ್ಷೆಗಾಗಿ ತಾಯಾರಾಗುತ್ತಿದ್ದನು. ಆದರೆ ವಿಧಿಯಾಟದಿಂದ ಅವಘಡ ಸಂಭವಿಸಿದ್ದು, ಮನೆ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ