AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಇಎಸ್ ಕರಾಳ ದಿನ ಮೆರವಣಿಗೆ ವಿಫಲ: ಕನ್ನಡದ ಪರ ದೃಢವಾಗಿ ನಿಂತ ಬೆಳಗಾವಿಯ ಯುವಸಮೂಹ

ಬೆಳಗಾವಿ ನಗರದ ಯುವಸಮೂಹವಂತೂ ಕಾರ್ಯಕ್ರಮದಿಂದ ಸಂಪೂರ್ಣ ದೂರ ಸರಿದಿದ್ದು ಎದ್ದು ಕಂಡಿತ್ತು

ಎಂಇಎಸ್ ಕರಾಳ ದಿನ ಮೆರವಣಿಗೆ ವಿಫಲ: ಕನ್ನಡದ ಪರ ದೃಢವಾಗಿ ನಿಂತ ಬೆಳಗಾವಿಯ ಯುವಸಮೂಹ
ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಿದ್ದ ಕರಾಳ ದಿನಾಚರಣೆಯಲ್ಲಿ ಕೇವಲ ಬೆರಳೆಣಿಕೆಯಷ್ಟು ಜನರು ಪಾಲ್ಗೊಂಡಿದ್ದರು.
TV9 Web
| Edited By: |

Updated on: Nov 01, 2022 | 12:43 PM

Share

ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿಯು ಪ್ರತಿವರ್ಷದಂತೆ ಈ ವರ್ಷವೂ ನವೆಂಬರ್ 1ರಂದು ಕರಾಳ ದಿನಾಚರಣೆ ಆಯೋಜಿಸಿತ್ತು. ಆದರೆ ಹೆಚ್ಚು ಜನರು ಸೇರಲಿಲ್ಲ. ಹೀಗಾಗಿ ಎಂಇಎಸ್ ಕಾರ್ಯಕ್ರಮ ಸಂಪೂರ್ಣ ವಿಫಲವಾಯಿತು. ಕರಾಳದಿನದ ಮೆರವಣಿಗೆಯಲ್ಲಿಯೂ ಹೆಚ್ಚು ಜನರು ಪಾಲ್ಗೊಳ್ಳಲಿಲ್ಲ. ನಗರದ ಯುವಸಮೂಹವಂತೂ ಕಾರ್ಯಕ್ರಮದಿಂದ ಸಂಪೂರ್ಣ ದೂರ ಸರಿದಿದ್ದು ಎದ್ದು ಕಂಡಿತ್ತು. ಕರಾಳ ದಿನಾಚರಣೆಗೆ ಮಹಾರಾಷ್ಟ್ರದ ಶಿವಸೇನೆ ನಾಯಕರನ್ನು ಎಂಇಎಸ್ ಆಹ್ವಾನಿಸಿತ್ತು. ಆದರೆ ಮಹಾರಾಷ್ಟ್ರ ನಾಯಕರನ್ನು ಕರ್ನಾಟಕದ ಗಡಿ ಪ್ರವೇಶಿಸಲು ಪೊಲೀಸರು ಅವಕಾಶ ನೀಡಲಿಲ್ಲ. ಬಹುತೇಕರನ್ನು ಗಡಿಯಲ್ಲಿಯೇ ತಡೆದು ವಾಪಸ್ ಕಳಿಸಲಾಯಿತು.

ಶಿವಸೇನೆಯ ಕೊಲ್ಲಾಪುರ ಘಟಕದ ಅಧ್ಯಕ್ಷ ವಿಜಯ ದೇವಣೆ ಬೆಳಗಾವಿ ಪ್ರವೇಶಿಸಲು ಬಹುಕಾಲ ಕಾದು ನಿಂತರು. ಕುಗನೊಳ್ಳಿ ಚೆಕ್ ಪೋಸ್ಟ್ ಮೂಲಕ ಕರ್ನಾಟಕ ಪ್ರವೇಶಿಸಿದ್ದ ಅವರು, ಶಿನೋಳ್ಳಿ ಮಾರ್ಗವಾಗಿ ಬೆಳಗಾವಿ ಪ್ರವೇಶಿಸಲು ಯತ್ನಿಸಿದರು. ಶಿನೋಳ್ಳಿ ಚೆಕ್ ಪೋಸ್ಟ್ ಬಳಿಯೂ ಪೊಲೀಸರು ಬಂದೋಬಸ್ತ್ ಬಿಗಿ ಮಾಡಿದ್ದರು.

ಗಡಿ ವಿವಾದದ ಅಂತಿಮ ವಿಚಾರಣೆ

ನವೆಂಬರ್ 23ರಂದು ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದದ ಅಂತಿಮ ವಿಚಾರಣೆ ನಡೆಯಲಿದೆ. ಇದೇ ವಿಷಯವನ್ನು ಕರಪತ್ರಗಳಲ್ಲಿ ಪ್ರಸ್ತಾಪಿಸಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಯು ಸಾವಿರಾರು ಸಂಖ್ಯೆಯಲ್ಲಿ ಕರಾಳ ದಿನಾಚರಣೆಯಲ್ಲಿ ಪಾಲ್ಗೊಳ್ಳಬೇಕೆಂದು ಮರಾಠಿ ಭಾಷಿಕರಿಗೆ ಕರೆ ನೀಡಿತ್ತು. ಸಾಮಾಜಿಕ ಜಾಲತಾಣಗಳಲ್ಲಿಯೂ ಎಂಇಎಸ್ ಪರ ಇರುವವರು ಈ ಅಂಶಗಳನ್ನೇ ಪ್ರಸ್ತಾಪಿಸಿ ಪೋಸ್ಟ್​ಗಳನ್ನು ಹಾಕಿಕೊಂಡಿದ್ದರು. ಕರಾಳ ದಿನಾಚರಣೆಗೆ ಅನುಮತಿ ನೀಡದಂತೆ ಕನ್ನಡಪರ ಸಂಘಟನೆಗಳು ಆಗ್ರಹಿಸಿದ್ದವು. ಇದನ್ನು ಲೆಕ್ಕಿಸದ ಎಂಇಎಸ್ ಸಂಭಾಜಿ ಉದ್ಯಾನದಿಂದ ಮರಾಠಾ ಮಂದಿರದವರೆಗೆ ಜಾಥಾ ನಡೆಸಲು ಮುಂದಾಗಿತ್ತು. ಆದರೆ ನಗರದ ಮರಾಠಿ ಭಾಷಿಕರು ಸೌಹಾರ್ದಕ್ಕೆ ಒತ್ತುಕೊಟ್ಟ ಹಿನ್ನೆಲೆಯಲ್ಲಿ ಈ ಪ್ರಯತ್ನವು ವಿಫಲವಾಯಿತು.

ಬಿಗಿ ಭದ್ರತೆ

ಬೆಳಗಾವಿಯಲ್ಲಿ ಕರಾಳ ದಿನಾಚರಣೆಗೆ ಎಂಇಎಸ್​ ಸಿದ್ಧತೆ ನಡೆಸಿದ್ದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಮಹಾರಾಷ್ಟ್ರದ ಗಡಿಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಹಾಕಿದ್ದರು. ಬೆಳಗಾವಿ ನಗರದಲ್ಲಿ ಬೆಳಗಾವಿ ಪೊಲೀಸ್ ಆಯುಕ್ತ ಬೋರಲಿಂಗಯ್ಯ ನೇತೃತ್ವದಲ್ಲಿ ಭದ್ರತೆ ಕಲ್ಪಿಸಲಾಗಿತ್ತು. ಇದಕ್ಕಾಗಿ 3 ಡಿಸಿಪಿ, 12 ಎಸಿಪಿ, 52 ಇನ್ಸ್​​ಪೆಕ್ಟರ್​, 2,500 ಕಾನ್ಸ್​ಟೇಬಲ್, 9 ಸಿಎಆರ್​ ತುಕಡಿ, 10 ಕೆಎಸ್​​ಆರ್​ಪಿ ತುಕಡಿ ನಿಯೋಜಿಸಲಾಗಿತ್ತು. 35 ವಿಡಿಯೊ ಕ್ಯಾಮೆರಾ, 8 ಡ್ರೋನ್, 300 ಸಿಸಿಕ್ಯಾಮೆರಾಗಳ ಕಣ್ಗಾವಲು ಇತ್ತು.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು