AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಮುಂದುವರಿದ ಸಾವಿನ ಸರಣಿ: ಮೃತ ಕೃಷ್ಣಮೃಗಗಳ ಸಂಖ್ಯೆ 29ಕ್ಕೆ ಏರಿಕೆ

ಬೆಳಗಾವಿಯ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಸಾವಿನ ಸಂಖ್ಯೆ 29ಕ್ಕೆ ಏರಿದೆ. ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದ್ದು, ಮೃತ ದೇಹಗಳ ಮಾದರಿಯ ಪ್ರಯೋಗಾಲಯ ವರದಿ ಮಂಗಳವಾರ ಬರುವ ನಿರೀಕ್ಷೆ ಇದೆ. ಗಳಲೆ ರೋಗದಿಂದ ಕೃಷ್ಣ ಮೃಗಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಮುಂದುವರಿದ ಸಾವಿನ ಸರಣಿ: ಮೃತ ಕೃಷ್ಣಮೃಗಗಳ ಸಂಖ್ಯೆ 29ಕ್ಕೆ ಏರಿಕೆ
ಕೃಷ್ಣಮೃಗ ಸಾವು
Sahadev Mane
| Edited By: |

Updated on:Nov 16, 2025 | 12:54 PM

Share

ಬೆಳಗಾವಿ, ನವೆಂಬರ್​ 16: ತಾಲೂಕಿನ ಭೂತರಾಮನಹಟ್ಟಿ ಬಳಿಯಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಮತ್ತೊಂದು ಕೃಷ್ಣಮೃಗ ಇಂದು ಸಾವನ್ನಪ್ಪಿದೆ. ಆ ಪೈಕಿ ಮೃಪಟ್ಟ ಒಟ್ಟು ಕೃಷ್ಣಮೃಗಗಳ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ನ.13ರಂದು ಕಿರು ಮೃಗಾಲಯದಲ್ಲಿ 8 ಕೃಷ್ಣ ಮೃಗಗಳು ಮೃತಪಟ್ಟಿದ್ದರೆ, ನಿನ್ನೆ ಒಂದೇ ದಿನ 20 ಸಾವನ್ನಪ್ಪಿದ್ದವು.

ಮಂಗಳವಾರ ಕೈಸೇರಲಿದೆ ಲ್ಯಾಬ್​​ ವರದಿ

ಕೃಷ್ಣಮೃಗಗಳ ಸಾವಿನ ಸಂಬಂಧ ವೈದ್ಯ ಡಾ.ಚಂದ್ರಶೇಖರ್ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದು, ಮೃತ ಕೃಷ್ಣ ಮೃಗಗಳ ಕಿಡ್ನಿ, ಹಾರ್ಟ್, ಲಿವರ್, ರಕ್ತ ಎಲ್ಲವನ್ನೂ ಸ್ಯಾಂಪಲ್ ಪಡೆದಿದ್ದೇವೆ. ಅವು ಲ್ಯಾಬ್​ಗೆ ರವಾನೆಯಾಗಲಿದ್ದು, ಮಂಗಳವಾರದ ಹೊತ್ತಿಗೆ ಕೃಷ್ಣಮೃಗಗಳ ಸಾವಿನ ಕುರಿತ ವರದಿ ಬರಲಿದೆ. ಬಳಿಕ ಅದನ್ನು ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಅವರಿಗೆ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷ್ಣಮೃಗಗಳ ಸಾವಿನ ಕೇಸ್​​​, ಗೊಂದಲ ಮೂಡಿಸಿರುವ ಅರಣ್ಯ ಅಧಿಕಾರಿಗಳ ಹೇಳಿಕೆ

‘ಸಿಬ್ಬಂದಿ ತಪ್ಪು ಕಂಡುಬಂದರೆ ಕ್ರಮ’

ಇನ್ನು, ಗಳಲೆ ರೋಗದಿಂದ ಕೃಷ್ಣ ಮೃಗಗಳು ಮೃತಪಟ್ಟಿರುವ ಶಂಕೆ ಇದೆ ಎಂದು ಟಿವಿ9ಗೆ ಮೃಗಾಲಯಗಳ ಸದಸ್ಯ ಕಾರ್ಯದರ್ಶಿ ಸುನೀಲ್ ತಿಳಿಸಿದ್ದಾರೆ. ಇಂದು ಬೆಳಗ್ಗೆ ವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮೃಗಾಲಯ ಕೂಡ ಪರಿಶೀಲನೆ ಆಗಿದೆ. ಘಟನೆಯಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ಕಂಡು ಬಂದಿಲ್ಲ. 8 ಕೃಷ್ಣಮೃಗಗಳು ಮೃತಪಟ್ಟ ಸಂದರ್ಭದಲ್ಲಿಯೇ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಅದಾಗಿಯೂ ಎಲ್ಲಿಯಾದರೂ ಸಿಬ್ಬಂದಿ ತಪ್ಪು ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಈ ನಡುವೆ ಕೃಷ್ಣಮೃಗಗಳು ಮೃತಪಟ್ಟ ಪ್ರಕರಣ ವಿಚಾರವಾಗಿ ಅರಣ್ಯ ಸಚಿವ ಈಶ್ವರ್​ ಖಂಡ್ರೆ ಅವರ ದಿಕ್ಕನ್ನು ಅರಣ್ಯ ಇಲಾಖೆ ಅಧಿಕಾರಿಗಳು ತಪ್ಪಿಸಿದ್ರಾ ಎನ್ನುವ ಅನುಮಾನ ವ್ಯಕ್ತವಾಗಿತ್ತು. ಆಹಾರದಿಂದ ಉಂಟಾದ ಸಮಸ್ಯೆಯಲ್ಲಿ ಕೃಷ್ಣ ಮೃಗಗಳ ಸಾವಾಗಿದೆ ಎಂದು ಸಚಿವರಿಗೆ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದರೆ, ಪ್ರಾಥಮಿಕ ಮಾಹಿತಿ ಪ್ರಕಾರ ಬ್ಯಾಕ್ಟೀರಿಯಾ ಇನ್ಫೆಕ್ಷನ್​ನಿಂದ ಅವು ಮೃತಪಟ್ಟಿವೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದರು. ಎಫ್​​ಎಸ್​​ಎಲ್​ಗೂ ಸ್ಯಾಂಪಲ್​ ಕಳುಹಿಸಿದ್ದೇವೆ ಎಂದು ಹೇಳುತ್ತಿದ್ದು, ಪ್ರಯೋಗಾಲಯದ ವರದಿ ಬರುವ ಮುನ್ನವೇ ಬ್ಯಾಕ್ಟೀರಿಯಾ ಇನ್ಫೆಕ್ಷನ್​ ಎಂದು ಅಧಿಕಾರಿಗಳು ಹೇಳಿದ್ದೇಗೆ ಎನ್ನುವ ಪ್ರಶ್ನೆ ಉದ್ಭವಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:46 pm, Sun, 16 November 25

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ