AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಗಾಂಜಾ, ಸಿಗರೇಟ್, ಬಿಯರ್: ಇಸ್ಪೀಟ್ ಆಡುತ್ತಿರುವ ಕೈದಿಗಳ ವಿಡಿಯೋ ವೈರಲ್

ಬೆಳಗಾವಿಯ ಹಿಂಡಲಗಾ ಜೈಲಿನ ಕರಾಳಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ, ಜೈಲಿನ ಹೈಫೈ ಜೀವನ ಅನಾವರಣಗೊಂಡಿದ್ದು, ಕೈದಿಗಳು ಹಣ ಇಟ್ಟು ಇಸ್ಪೀಟ್ ಆಡುತ್ತಿರುವ ವಿಡಿಯೋ ವೈರಲ್ ಆಗಿದೆ. ಜೈಲಿಗೆ ಗಾಂಜಾ, ಸಿಗರೇಟ್, ಬಿಯರ್ ಪೂರೈಕೆಯಾಗುತ್ತಿರುವುದು ತಿಳಿದುಬಂದಿದೆ.

Sahadev Mane
| Edited By: |

Updated on: Dec 09, 2024 | 9:48 AM

Share

ಬೆಳಗಾವಿ, ಡಿಸೆಂಬರ್ 9: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ, ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಎಣ್ಣೆ ಪಾರ್ಟಿ ವಿಡಿಯೋ ವೈರಲ್ ಪ್ರಕರಣದ ಬೆನ್ನಲ್ಲೇ ಇದೀಗ ಬೆಳಗಾವಿಯ ಹಿಂಡಲಗಾ ಜೈಲಿನ ಕರಾಳ ಮುಖ ಅನಾವರಣಗೊಂಡಿದೆ. ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹೊತ್ತಿನಲ್ಲೇ ಹಿಂಡಲಗಾ ಜೈಲಿನ ಕರ್ಮಕಾಂಡ ಬಯಲಾಗಿದೆ.

ಹಿಂಡಲಗಾ ಜೈಲಿನಲ್ಲಿ ಕೈದಿಗಳು ಬಿಂದಾಸ್​ ಆಗಿ ಮೊಬೈಲ್​ ಬಳಸುತ್ತಿರುವುದು, ಗಾಂಜಾ ಸೇವಿಸುತ್ತಿರುವುದು, ಸಿಗರೇಟ್ ಸೇದುವುದು ಬೆಳಕಿಗೆ ಬಂದಿದೆ. ಜೈಲಿಗೆ ಬಿಯರ್ ಸೇರಿದಂತೆ ಎಲ್ಲವೂ ಹೊರಗಿನಿಂದ ಪೂರೈಕೆಯಾಗುತ್ತಿರುವುದು ಬಹಿರಂಗಗೊಂಡಿದೆ.

ಜೈಲಿನ ಸರ್ಕಲ್ ನಂಬರ್ 2ರ ಎರಡನೇ ಬ್ಯಾರಕ್​ನಲ್ಲಿ ಕೈದಿಗಳು ಐಷಾರಾಮಿ ಜೀವನ ನಡೆಸುತ್ತಿದ್ದು, ರಾಜಾರೋಷವಾಗಿ ಹಣವಿಟ್ಟು ಇಸ್ಪೀಟ್ ಆಡುತ್ತಿರುವ ವಿಡಿಯೋ ವೈರಲ್ ಆಗಿದೆ. ಇಲ್ಲಿ ಹಣ ಕೊಟ್ಟರೆ ಕೈದಿಗಳಿಗೆ 20 ಸಾವಿರ ರೂ. ಬೆಲೆಯ ಆಂಡ್ರಾಯ್ಡ್ ಮೊಬೈಲ್ ಕೂಡ ಸಿಗುತ್ತದಂತೆ! ಶಿಕ್ಷೆ ಅನುಭವಿಸುತ್ತಿರುವ ಕೈದಿಯಿಂದಲೇ ಐಷಾರಾಮಿ ಜೀವನ ಅನಾವರಣಗೊಂಡಿದೆ. ಹಣ ಕೊಟ್ಟರೆ ಜೈಲು ಅಧೀಕ್ಷಕ ಕೃಷ್ಣಮೂರ್ತಿ ಎಲ್ಲಾ ವ್ಯವಸ್ಥೆ ಮಾಡ್ತಾರೆ ಎಂಬ ಆರೋಪ ಕೇಳಿಬಂದಿದೆ.

ಹಣ ಇಟ್ಟು ಇಸ್ಪೀಟ್ ಆಡುತ್ತಿರುವ ಕೈದಿಗಳು!

ನೆಲಮಂಗಲ ಮೂಲದ ಮುಬಾರಕ್​ ಎಂಬ ಕೈದಿ ಇಸ್ಪೀಟ್ ಆಡುವ ವಿಡಿಯೋ ಮಾಡಿದ್ದಾನೆ ಎನ್ನಲಾಗಿದೆ. ಮೊಬೈಲ್ ಇಟ್ಟುಕೊಂಡು ಇಸ್ಪೀಟ್ ಆಡುತ್ತಿರುವ ವಿಡಿಯೋ ಈಗ ವೈರಲ್​ ಆಗುತ್ತಿದೆ. ಬೆಳಗಾವಿಯ ಕೈದಿ ಸುರೇಶ್, ಶಾಹಿದ್ ಖುರೇಶಿ, ಆನಂದ್ ನಾಯಕ್ ಸೇರಿ ಹಲವರು ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಎಣ್ಣೆ ಪಾರ್ಟಿ: ವಿಡಿಯೋ ವೈರಲ್

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿನ ಕರ್ಮಕಾಂಡವನ್ನು ಇತ್ತೀಚೆಗಷ್ಟೇ ‘ಟಿವಿ9’ ಬಟಾಬಯಲು ಮಾಡಿತ್ತು. ಅದಾದ ಬೆನ್ನಲ್ಲೇ, ಜೈಲಿನಲ್ಲಿ ಕೈದಿಗಳು ಮದ್ಯ ಸೇವಿಸುತ್ತಿರುವ ಎರಡು ತಿಂಗಳ ಹಿಂದಿನ ವಿಡಿಯೋ ಶನಿವಾರ ವೈರಲ್ ಆಗಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ