ಬೆಳಗಾವಿಯ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ಊಟದಲ್ಲಿ ಹುಳು: ವಿದ್ಯಾರ್ಥಿಗಳಿಂದ ದೂರು

ಮೂರು ವರ್ಷದ ಹಿಂದೆ ಎರಡು ಕೋಟಿ ವೆಚ್ಚದಲ್ಲಿ ನಿರ್ಮಿಸಿಲಾದ ವಸತಿ ನಿಲಯವು ಸೋರಿಕೆಯಾಗುತ್ತಿದ್ದು, ಕಟ್ಟಡ ಉದ್ಘಾಟನೆಯಾಗಿ ಕೇವಲ ಒಂದೂವರೆ ವರ್ಷದಲ್ಲಿ ಈ ಸ್ಥಿತಿ ಎದುರಾಗಿದೆ. ನೆಲದ ಟೈಲ್ಸ್​ಗಳು ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಗ್ರಂಥಾಲಯವೂ ಸೋರಿಕೆಯಾಗುತ್ತಿದೆ.

ಬೆಳಗಾವಿಯ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ಊಟದಲ್ಲಿ ಹುಳು: ವಿದ್ಯಾರ್ಥಿಗಳಿಂದ ದೂರು
ಆಹಾರದಲ್ಲಿ ಹುಳು
Follow us
| Updated By: ಗಣಪತಿ ಶರ್ಮ

Updated on: Aug 25, 2023 | 5:10 PM

ಬಾಗಲಕೋಟೆ, ಆಗಸ್ಟ್ 25: ಬೆಳಗಾವಿಯ (Belagavi) ಬೈಲಹೊಂಗಲ ತಾಲೂಕಿನ ಸರ್ಕಾರಿ ವಸತಿ ನಿಲಯದ ಊಟದಲ್ಲಿ ಹುಳುಗಳು ಪತ್ತೆಯಾಗಿವೆ. ತಾಲೂಕಿನ ಎಸ್ಸಿ ಎಸ್ಟಿ (SC, ST) ಪೋಸ್ಟ್ ಮೆಟ್ರಿಕ್ ಬಾಲಕರ ವಸತಿ ನಿಲಯದಲ್ಲಿ (Post-matric SC-ST boys hostel) ನೀಡುವ ಆಹಾರದಲ್ಲಿ ಹುಳುಗಳು ಪತ್ತೆಯಾಗಿವೆ. ಅದಷ್ಟೇ ಅಲ್ಲದೆ ಹಾಸ್ಟೆಲ್​ನಲ್ಲಿ ಹಸಿ ರೊಟ್ಟಿ, ಅರೆಬೆಂದ ಇಡ್ಲಿ, ಮಸಾಲೆಗಳಿಲ್ಲದ ಸಾರನ್ನು ನೀಡಲಾಗುತ್ತದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಅರೆ ಬೆಂದ ಹುಳು ಮಿಶ್ರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹಲವು ಬಾರಿ ವಿದ್ಯಾರ್ಥಿಗಳು ಹೊಟ್ಟೆ ನೋವಿನಿಂದ ಬಳಲುತ್ತಿದ್ದಾರೆ. ಕಳಪೆ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿರುವುದರಿಂದ ಮತ್ತೊಮ್ಮೆ ಸರ್ಕಾರಿ ವಸತಿ ನಿಲಯಗಳ ಗುಣಮುಟ್ಟದ ಕುರಿತು ಪ್ರಶ್ನೆಗಳು ಉದ್ಭವವಾಗಿವೆ. ಇದರ ಕುರಿತು ಹಲವು ಬಾರಿ ವಾರ್ಡನ್ ಗೆ ದೂರು ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ವಿದ್ಯಾರ್ಥಿಗಳು ಅದೇ ಕಳಪೆ ಆಹಾರ ಸೇವಿಸುತ್ತಿದ್ದಾರೆ ಎಂಬುದು ತಿಳಿದು ಬಂದಿದೆ.

ಮೂರು ವರ್ಷದ ಹಿಂದೆ ಎರಡು ಕೋಟಿ ವೆಚ್ಚದಲ್ಲಿ ನಿರ್ಮಿಸಿಲಾದ ವಸತಿ ನಿಲಯವು ಸೋರಿಕೆಯಾಗುತ್ತಿದ್ದು, ಕಟ್ಟಡ ಉದ್ಘಾಟನೆಯಾಗಿ ಕೇವಲ ಒಂದೂವರೆ ವರ್ಷದಲ್ಲಿ ಈ ಸ್ಥಿತಿ ಎದುರಾಗಿದೆ. ನೆಲದ ಟೈಲ್ಸ್​ಗಳು ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಗ್ರಂಥಾಲಯವೂ ಸೋರಿಕೆಯಾಗುತ್ತಿದೆ. ವಸತಿ ನಿಯಲದ ವ್ಯವಸ್ಥೆಯು ತೀರಾ ಕಳಪೆಯಾಗಿದ್ದು, ವಿದ್ಯಾರ್ಥಿಗಳು ವಾರ್ಡನ್ ಲಕ್ಷ್ಮಣ ಸದಲಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಸತಿ ನಿಲಯದ ಅರಾಜಕತೆಯ ವಿರುದ್ಧ ಹಲವು ಬಾರಿ ಪ್ರಶ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಈ ಕುರಿತು ವಿದ್ಯಾರ್ಥಿಗಳು ತಹಶೀಲ್ದಾರ್ ಕಚೇರಿಗೆ ದೂರು ಸಲ್ಲಿಸಿದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಹಾಸ್ಟೆಲ್​​ನ ಸಮಸ್ಯೆಗಳು ಮುನ್ನೆಲೆಗೆ ಬಾರದಂತೆ ಬೈಲಹೊಂಗಲದ ಕಾಂಗ್ರೆಸ್ ಶಾಸಕ ಶಿವಾನಂದ್ ಮಹಂತೇಶ ಕೌಜಲಗಿ ತಡೆ ಹಿಡಿದಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ.

ಇದನ್ನೂ ಓದಿ: ಬೆಂಗಳೂರು: 100ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ ಎಂದು ಘೋಷಣೆ; ಕೃಷಿ ಸಚಿವ ಎನ್ ಚಲುವರಾಯಸ್ವಾಮಿ

ಬೆಳಗಾವಿ ಮಾತ್ರವಲ್ಲದೆ ಚಿತ್ರದುರ್ಗದಲ್ಲಿಯೂ ಈ ರೀತಿ ಘಟನೆಗಳು ನಡೆದಿವೆ. ವಸತಿ ನಿಲಯದ ಕೊರತೆಯನ್ನು ಚಿತ್ರದುರ್ಗದ ಶಾಸಕ ಕೆಸಿ ವಿರೇಂದ್ರ ಅವರಿಗೆ ತಿಳಿಸಿದಾಗ, ಕಾನೂನು ವಿದ್ಯಾರ್ಥಿಗೆ ವಸತಿ ನಿಲಯದ ಆಹಾರದಲ್ಲಿ ಏರುಪೇರಾದರೆ ನಿಲಯ ಪಾಲಕನಿಗೆ ಹೊಡೆದು ಬುದ್ಧಿಕಲಿಸಿ ಎಂದಿದ್ದಾರೆ. ಈ ಕುರಿತು ವಿಡಿಯೋ ವೈರಲ್ ಆಗಿದ್ದು, ‘ನೀವೇನು ಭಯಪಡಬೇಡಿ, ನಾವಿದ್ದೇವೆ. ಪರಿಸ್ಥಿತಿ ಕೈ ಮೀರಿ ಹೋಗುತ್ತಿದೆ. ಇನ್ನೊಮ್ಮೆ ಹೀಗಾಗದಂತೆ ಮಾಡಲು ವಾರ್ಡನ್​​ಗೆ ಹೊಡೆಯುವುದೊಂದೆ ಮಾರ್ಗ’ ಎಂದು ಅವರು ಹೇಳಿರುವುದು ವೈರಲ್ ವಿಡಿಯೋದಲ್ಲಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ