ಬೆಳಗಾವಿ ಹಿಂಡಲಗಾ ಕಾರಾಗೃಹದಲ್ಲಿ ಗಾಂಜಾಗಾಗಿ ಜೈಲು ಅಧಿಕಾರಿ ಮೇಲೆ ಹಲ್ಲೆ

ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದ ಸಹಾಯಕ ಜೈಲರ್ ಜಿ.ಆರ್. ಕಾಂಬಳೆ ಅವರ ಮೇಲೆ ಕೈದಿ ಶಾಹೀದ್ ಖುರೇಶಿ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಗಾಂಜಾ ವಶಪಡಿಸಿಕೊಳ್ಳುವ ಪ್ರಯತ್ನದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಧಿವೇಶನದ ಹಿನ್ನೆಲೆಯಲ್ಲಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಎನ್‌ಡಿಪಿಎಸ್ ಮತ್ತು ಬಿಎನ್‌ಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಬೆಳಗಾವಿ ಹಿಂಡಲಗಾ ಕಾರಾಗೃಹದಲ್ಲಿ ಗಾಂಜಾಗಾಗಿ ಜೈಲು ಅಧಿಕಾರಿ ಮೇಲೆ ಹಲ್ಲೆ
ಬೆಳಗಾವಿ ಹಿಂಡಲಗಾ ಕಾರಾಗೃಹದಲ್ಲಿ ಗಾಂಜಾಗಾಗಿ ಜೈಲು ಅಧಿಕಾರಿ ಮೇಲೆ ಹಲ್ಲೆ
Follow us
Sahadev Mane
| Updated By: ವಿವೇಕ ಬಿರಾದಾರ

Updated on:Dec 15, 2024 | 10:18 AM

ಬೆಳಗಾವಿ, ಡಿಸೆಂಬರ್​ 15: ಗಾಂಜಾಗಾಗಿ (Drug) ಬೆಳಗಾವಿ ಕೇಂದ್ರ ಕಾರಾಗೃಹದ ಜೈಲಿನ (Hindalaga) ಕೈದಿ ಸಹಾಯಕ ಜೈಲರ್ (Jailar)​ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ಡಿಸೆಂಬರ್ ​11ರಂದು ಸಹಾಯಕ ಜೈಲರ್ ಜಿ.ಆರ್.ಕಾಂಬಳೆ ಅವರ ಮೇಲೆ ವಿಚಾರಣಾಧೀನ ಕೈದಿ ಶಾಹೀದ್ ಖುರೇಶಿ ಹಲ್ಲೆ ಮಾಡಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಮುಚ್ಚಿ ಹಾಕಲು ಜೈಲು ಅಧಿಕಾರಿಗಳು ಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಹಲ್ಲೆಯಿಂದ ಸಹಾಯಕ ಜೈಲರ್ ಜಿ.ಆರ್.ಕಾಂಬಳೆ ಅವರು ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಸಹಾಯಕ ಜೈಲರ್ ಜಿ.ಆರ್.ಕಾಂಬಳೆ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಂದ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಜೈಲು ಮುಖ್ಯಅಧೀಕ್ಷಕ ಕೃಷ್ಣಮೂರ್ತಿ ಅವರು ಬೆಳಗಾವಿ ಗ್ರಾಮಾಂತರ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆಯಡಿ 132, 115(2), 352 ಮತ್ತು ಎನ್‌ಡಿಪಿಎಸ್ ಕಾಯ್ದೆ 42 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು, ಹಿಂಡಲಗಾ ಜೈಲಿನಲ್ಲಿ ಗಾಂಜಾ ಸಿಗುತ್ತಿರುವ ಬಗ್ಗೆ ಈ ಹಿಂದೆ ಟಿವಿ9 ವರದಿ ಮಾಡಿತ್ತು.

ಇದನ್ನೂ ಓದಿ: ಚಾಮರಾಜಪೇಟೆ ಅಂಚೆ ಕಚೇರಿಯಲ್ಲಿ ಡ್ರಗ್ಸ್​​ ಬಾಕ್ಸ್​ ಪತ್ತೆ ಕೇಸ್​: ಸಿಸಿಬಿ ತನಿಖೆಯಲ್ಲಿ ಸ್ಫೋಟಕ ಅಂಶಗಳು ಬಹಿರಂಗ

ಏನಿದು ಪ್ರಕರಣ

ಡಿಸೆಂಬರ್​ 11 ರಂದು ಸಹಾಯಕ ಜೈಲರ್ ಜಿ. ಆರ್. ಕಾಂಬಳೆ ಅವರು ಕೇಂದ್ರ ಕಾರಾಗೃಹದಲ್ಲಿ ಪಹರೆ ಕರ್ತವ್ಯ ಮಾಡುತ್ತಾ ವೃತ್ತ-2ರ ಬ್ಯಾರಕ್ ಸಂಖ್ಯೆ 08 ರ ಹಿಂಭಾಗದ ಗೋಡೆಯ ಕಡೆಗೆ ಹೋಗಿದ್ದಾರೆ. ಗೋಡೆಯ ಪಕ್ಕದಲ್ಲಿ ಜಾಮ‌ರ್ ಕೇಬಲ್‌ಗಳನ್ನು ಅಳವಡಿಸಲು ಅಗೆದಿರುವ ಗುಂಡಿಯಲ್ಲಿ ಪ್ಲಾಸ್ಟಿಕ್ ಸುತ್ತಿದ ಪ್ಯಾಕೇಟ್ ಕಂಡಿದೆ. ಆಗ, ಜಿ. ಆರ್. ಕಾಂಬಳೆ ಅವರು ಪ್ಲಾಸ್ಟಿಕ್ ಸುತ್ತಿದ ಪ್ಯಾಕೇಟ್​ ಅನ್ನು ತೆಗೆದುಕೊಂಡು ಮುಖ್ಯ ಅಧೀಕ್ಷಕರಿಗೆ ವರದಿ ಸಲ್ಲಿಸಲು ಹೋಗುತ್ತಿದ್ದರು.

ಈ ವೇಳೆ ಆರೋಪಿ ಶಾಹೀದ್ ಖುರೇಶಿ ಬಂದು ಸಹಾಯಕ ಜೈಲರ್‌ರವರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವರಿಗೆ ಕೈಯಿಂದ ತಳ್ಳಾಡಿ ಹಲ್ಲೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈಯ್ದಿದ್ದಾನೆ. ಬಳಿಕ ಜಿ.ಆರ್. ಕಾಂಬಳೆ ಅವರ ಕೈಯಲ್ಲಿರುವ ಪ್ಲಾಸ್ಟಿಕ್ ಸುತ್ತಿದ್ದ ಪ್ಯಾಕೆಟ್‌ನ್ನು ಕಿತ್ತುಕೊಂಡು ಓಡಿ ಹೋಗಿ ಕ್ವಾರಂಟೈನ್ ವಿಭಾಗಕ್ಕೆ ಎಸೆದಿದ್ದಾನೆ. ಗಾಂಜಾದಂತಹ ಮಾದಕ ವಸ್ತುಗಳು ಕಾರಾಗೃದಲ್ಲಿ ನಿಷೇಧವಿದೆ ಎಂದು ಗೋತ್ತಿದ್ದರೂ ಈತನು ಅದನ್ನು ಒಳಗೆ ಸಾಗಿಸಲು ಪ್ರಯತ್ನಿಸಿದ್ದು ಅಪರಾಧವೆಂದು ದೂರು ದಾಖಲಿಸಿದ್ದಾರೆ.

ತುಮಕೂರು: ಕೊರಟಗೆರೆ ತಾಲೂಕಿನ ಬೀರದೇನಹಳ್ಳಿ ಬಸ್​ ನಿಲ್ದಾಣದಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರನ್ನು ಬಂಧಿಸಿದ ಕೊರಟಗೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿದ್ದರಬೆಟ್ಟದ ಹೇಮಂತ್, ನೇಗಲಾಲದ ಭೀಮರಾಜು ಗಾಂಜಾ ಮಾರುತ್ತಿದ್ದ ಆರೋಪಿಗಳು. 1.50 ಲಕ್ಷ ಮೌಲ್ಯದ 2 ಕೆಜಿ 400 ಗ್ರಾಂ ಗಾಂಜಾ ಸೊಪ್ಪು ಜಪ್ತಿ ಮಾಡಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:16 am, Sun, 15 December 24