ಬೆಳಗಾವಿ: ಹೊಲಕ್ಕೆ ಹೊರಟಿದ್ದ ನಾಲ್ವರು ರೈತರ ಮೇಲೆ ವಾಹನ ಹರಿದು ಇಬ್ಬರ ಸಾವು

ಹೊಲಕ್ಕೆ ಹೊರಟಿದ್ದ ನಾಲ್ವರು ರೈತರ ಮೇಲೆ ಅಪರಿಚಿತ ವಾಹನ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಗೋಧೋಳಿ ಗ್ರಾಮದ ಬಳಿ ಧಾರವಾಡ ರಾಮನಗರ ರಾಜ್ಯ ಹೆದ್ದಾರಿಯಲ್ಲಿ ತಡರಾತ್ರಿ ನಡೆದಿದೆ.

ಬೆಳಗಾವಿ: ಹೊಲಕ್ಕೆ ಹೊರಟಿದ್ದ ನಾಲ್ವರು ರೈತರ ಮೇಲೆ ವಾಹನ ಹರಿದು ಇಬ್ಬರ ಸಾವು
ಸಾಂದರ್ಭಿಕ ಚಿತ್ರ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 21, 2023 | 10:30 AM

ಬೆಳಗಾವಿ: ಹೊಲಕ್ಕೆ ಹೊರಟಿದ್ದ ನಾಲ್ವರು ರೈತರ ಮೇಲೆ ಅಪರಿಚಿತ ವಾಹನ ಹರಿದು ಇಬ್ಬರು ಸಾವನ್ನಪ್ಪಿರುವ ಘಟನೆ ಗೋಧೋಳಿ ಗ್ರಾಮದ ಬಳಿಯ ಧಾರವಾಡ ರಾಮನಗರ ರಾಜ್ಯ ಹೆದ್ದಾರಿಯಲ್ಲಿ ತಡರಾತ್ರಿ ನಡೆದಿದೆ. ಜಿಲ್ಲೆಯ ಖಾನಾಪುರ(Khanapur) ತಾಲೂಕಿನ ಗೋಧೋಳಿ ಗ್ರಾಮದಲ್ಲಿ ತಮ್ಮ ಹೊಲದಲ್ಲಿ ಬೆಳೆದಿದ್ದ ಕಬ್ಬಿಗೆ ನೀರು ಹಾಯಿಸಲು ಹೊರಟಿದ್ದ ನಾಲ್ವರು ರೈತರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದ್ದು, ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೌದು ನಿನ್ನೆ(ಏ.20) ರಾತ್ರಿ ಹೊಲಕ್ಕೆ ಹೊರಟಾಗ ವಾಹನ ಡಿಕ್ಕಿ ಹೊಡೆದು ಗೊಧೋಳಿ ಗ್ರಾಮದ ಮಹಾಬಲೇಶ್ವರ ಶಿಂಧೆ (65), ಪುಂಡಲೀಕ ರೇಡೇಕರ(75) ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಇನ್ನು ಗಂಭೀರ ಗಾಯಗೊಂಡ ಕೃಷ್ಣ ರೇಡೇಕರ(74) ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಮತ್ತೋರ್ವ ರೈತ ಮಂಜುನಾಥ ಕಾಗಿನಕರ (47)ಗೆ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನ ತಿಳಿದ ಶಾಸಕಿ ಅಂಜಲಿ ನಿಂಬಾಳ್ಕರ್ ಖಾನಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಇದನ್ನೂ ಓದಿ:ಮೈಸೂರು: ಕಬಿನಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದ ಆದಿವಾಸಿ ಸಾವು

ಚೆಕ್​ಪೋಸ್ಟ್​ನಲ್ಲಿ ವಾಹನ ತಪಾಸಣೆ ನಡೆಸುವ ವೇಳೆ ಪೊಲೀಸ್ ಕಾನ್ಸ್​ಟೇಬಲ್ ಜೊತೆ ಉದ್ಯಮಿಯ ಕಿರಿಕ್​

ಮಂಡ್ಯ: ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್ ಸಾಗರ ಠಾಣಾ ವ್ಯಾಪ್ತಿಯ ಚೆಕ್​ಪೋಸ್ಟ್​ನಲ್ಲಿ ವಾಹನ ತಪಾಸಣೆ ನಡೆಸುವ ವೇಳೆ ಉದ್ಯಮಿ ನಾಗರಾಜ ರೆಡ್ಡಿ ಎಂಬಾತ ಕಾರು ತಡೆದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಕೆಂಡಾಮಂಡಲನಾಗಿ, ಕಾರಿನಿಂದ ಕೆಳಗೆ ಇಳಿದು ಪೊಲೀಸ್ ಪೇದೆಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಇದೆ ಏಪ್ರಿಲ್ 18 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹಲ್ಲೆ ನಡೆಸಿದ ಆರೋಪಿ ನಾಗರಾಜ ರೆಡ್ಡಿ ಬಂಧನ

ರಾತ್ರಿ 10.30ರ ವೇಳೆ ಕೆ.ಆರ್ ಸಾಗರ ಪೇಪರ್ ಮಿಲ್ ಬಳಿ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿದ ಆರೋಪಿ ನಾಗರಾಜ ರೆಡ್ಡಿಯನ್ನ ಬಂಧಿಸಲಾಗಿದೆ. ಕರ್ತವ್ಯ ನಿರತ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನಲೆ ಐಪಿಸಿ 504, 332, 353 ಕಾಯ್ದೆ ಅಡಿ ಆರೋಪಿಯನ್ನ ಕೆ.ಆರ್ ಸಾಗರ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ