ಬೆಳಗಾವಿ: ರಾಜಕೀಯ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ಜಿದ್ದಿಗೆ ಬಿದ್ದ ಸಾಹುಕಾರ್

ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಮೂಲಕ ಮತದಾರರನ್ನು ಸೆಳೆಯುತ್ತಿದ್ದಾರೆ.

ಬೆಳಗಾವಿ: ರಾಜಕೀಯ ಬದ್ಧವೈರಿ ಲಕ್ಷ್ಮೀ ಹೆಬ್ಬಾಳ್ಕರ್ ಸೋಲಿಸಲು ಜಿದ್ದಿಗೆ ಬಿದ್ದ ಸಾಹುಕಾರ್
ರಮೇಶ್​ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್​
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 05, 2022 | 9:15 AM

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಫುಲ್ ಆ್ಯಕ್ಟೀವ್ ಆಗಿದ್ದು. ಲಕ್ಷ್ಮೀ ಹೆಬ್ಬಾಳ್ಕರ್​ನ್ನು ಸೋಲಿಸಲು ಪಣ ತೊಟ್ಟಂತೆ ಕಾಣುತ್ತಿದೆ. ಬಡಸದ ಕೆ.ಹೆಚ್ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಯುವಕ ಮಂಡಳಿ ಉದ್ಘಾಟನೆ ಮಾಡುವ ಮೂಲಕ ಮರಾಠಾ ಸಮುದಾಯದ ಓಲೈಕೆಗೆ ರಮೇಶ್ ಜಾರಕಿಹೊಳಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಇನ್ನು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮರಾಠಾ ಸಮುದಾಯದ ಮತಗಳು ನಿರ್ಣಾಯಕವಾಗಲಿದೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಆ್ಯಕ್ಟೀವ್ ವಿಚಾರವಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ ಮೈದಾನ್ ಓಪನ್ ಹೈ, ಖುಲ್ಲಾ ಹೈ, ಹಮ್ ಬಿ ತಯಾರ್ ಹೈ, ಆಪ್ ಬೀ ಖುದೋ ಮೈದಾನ್ ಮೇ (ಅಖಾಡ ತೆರೆದಿದೆ, ನಾವೂ ತಯಾರಿದ್ದೇವೆ ನೀವು ಅಖಾಡಕ್ಕೆ ಧುಮುಕಿ) ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ ಮಾಡಿದ್ದಾರೆ.

ನಾನು ಎಲೆಕ್ಷನ್ ಗೆದ್ದ ಮಾರನೇ ದಿನದಿಂದ ಮುಂದಿನ ಎಲೆಕ್ಷನ್‌‌ಗೆ ತಯಾರಿ ನಡೆಸಿದ್ದೇನೆ. ಈಗ ಚುನಾವಣೆಗೆ 90 ದಿನ ಇದೆ ಎಂದು ತಯಾರಿ ನಡೆಸಿಲ್ಲ. ಈಗ ಬಂದು ನಾನು ಬಿಲ್ಲು, ಬಾಣ, ಬತ್ತಲಿಕೆ ಅಂತೆಲ್ಲ ಇಲ್ಲ. ಚುನಾವಣೆ ಗೆದ್ದ ಮಾರನೇ ದಿನವೇ ನನಗೆ ಪುನರ್ಜನ್ಮ ಕೊಟ್ಟ ಕ್ಷೇತ್ರ ಎಂದು ನನ್ನ ಹುಟ್ಟಿದ ದಿನಾಂಕ ಮತದಾರರಿಗೊಸ್ಕರ ಚೇಂಜ್ ಮಾಡಿಕೊಂಡೆ. ಜನರ ಮನಸ್ಸು ಯಾವ ರೀತಿ ಗೆಲ್ಲಬೇಕೆಂದು ನಾಲ್ಕೂವರೆ ವರ್ಷಗಳಿಂದ ಕೆಲಸ ಮಾಡಿಕೊಂಡು ಬಂದಿದ್ದೇನೆ. ಗ್ರಾಮೀಣ ಕ್ಷೇತ್ರದ ಮೇಲೆ ಹಲವರ ಕಣ್ಣು ಹಾಕಿದ್ದಾರೆ ಎಂದು ಭವಿಷ್ಯ ಅಂತೂ ನಾನು ಹೇಳಲ್ಲ. ಮುಂದೆ ನೀವೇ ನೋಡ್ತಿರಿಲ್ಲ ಎಲೆಕ್ಷನ್ ರಿಸಲ್ಟ್, ಇನ್ನೂ ಕಾವು ಏರಬೇಕು ಎಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.

ಇನ್ನು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತ್ತೆ ರಮೇಶ್ ಜಾರಕಿಹೊಳಿ ಆ್ಯಕ್ಟೀವ್ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಪಾರ್ಟ್ ಟೈಮ್ ಪ್ಲೇಯರ್ ಎಂದಿದ್ದಾರೆ. ಅಕ್ಕ ಲಕ್ಷ್ಮೀ ಹೆಬ್ಬಾಳ್ಕರ್​ ಪಾರ್ಟ್ ಟೈಮ್ ಪ್ಲೇಯರ್ ಅಲ್ಲ, ಫುಲ್ ಟೈಮ್ ಪ್ಲೇಯರ್. ನಮ್ಮ ಅಕ್ಕ ಹೋರಾಟದಿಂದ ರಾಜಕೀಯಕ್ಕೆ ಬಂದವರು. ನಿತ್ಯ ಜನರ ಕಷ್ಟಗಳಿಗೆ ಸ್ಪಂದನೆ ಮಾಡುವ ಕೆಲಸಗಾರರು. ದಿನವೂ ಜನರಿಗೆ ಸಿಗುತ್ತಾರೆ, ಕೆಲಸ ಮಾಡುತ್ತಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅಂತ ಅಷ್ಟೇ ಅಲ್ಲ ರಾಜ್ಯದಲ್ಲಿ ಕೆಲಸಗಾರರಿಗೆ ಯಾವತ್ತೂ ಸೋಲಿಲ್ಲ.

ಇದನ್ನೂ ಓದಿ:Belagavi: ಕುಂದಾನಗರಿಯಲ್ಲಿ ಗಿಫ್ಟ್ ಪಾಲಿಟಿಕ್ಸ್ ; ಚುನಾವಣೆಗೂ ಮುನ್ನವೇ ಬೆಳಗಾವಿಯಲ್ಲಿ ಜೋರಾಯ್ತು ಓಲೈಕೆ ರಾಜಕಾರಣ

ಈ ಪಾರ್ಟ್ ಟೈಮ್ ಪ್ಲೇಯರ್ಸ್‌ದ್ದೆ ಸಮಸ್ಯೆ ನಮ್ಮ ಪಕ್ಷದ ಕೆಲಸ ನಾವು ಮಾಡುತ್ತಿದ್ದೇವೆ, ಅವರ ಪಕ್ಷದ ಕೆಲಸ ಅವರು ಮಾಡುತ್ತಿದ್ದಾರೆ. ಅದಕ್ಕೆ ಅವರ ಪಕ್ಷದ ನಾಯಕರು ಚಿಂತನೆ ಮಾಡಲಿ. ರಾಜಕೀಯದಲ್ಲಿ ಯಾವತ್ತು ಶಿಸ್ತಿನಿಂದ ರಾಜಕೀಯ ಮಾಡಬೇಕು. ಅವರ ಶಿಸ್ತಿನಿಂದ ಅವರು ರಾಜಕೀಯ ಮಾಡಲಿ, ನಮ್ಮ ಶಿಸ್ತಿನಿಂದ ನಾವು ರಾಜಕೀಯ ಮಾಡುತ್ತಿವಿ. ಆ ಶಿಸ್ತು ಎಲ್ಲಾದರೂ ಏನಾದರೂ ಆದಾಗ ನಾವು ಉತ್ತರ ಕೊಡುತ್ತೆವೆ ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಟಾಂಗ್ ಕೊಟ್ಟಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ