AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಹಳ್ಳದಲ್ಲಿ ಎತ್ತಿನ ಗಾಡಿ ಮಗುಚಿ ಬಿದ್ದು ಇಬ್ಬರು ಮಕ್ಕಳು ಸಾವು

ಭಾರಿ ಮಳೆಯಿಂದ ಅಥಣಿ ತಾಲೂಕಿನ ನಾಗನೂರ ಪಿಎ ಗ್ರಾಮದಲ್ಲಿನ ಹಳ್ಳ ತುಂಬಿ ಹರಿಯುತ್ತಿದೆ. ತುಂಬಿದ ಹಳ್ಳದಲ್ಲಿ ಸಾಗುತ್ತಿದ್ದ ಎತ್ತಿನ ಗಾಡಿ ಮಗುಚಿ ಬಿದ್ದು ಇಬ್ಬರು ಮಕ್ಕಳು ಮತ್ತು ಒಂದು ಎತ್ತು ಮೃತಪಟ್ಟಿದೆ. ಹಳ್ಳಕ್ಕೆ ಸೇತುವೆ ಇಲ್ಲದಿರುವುದು ದುರಂತಕ್ಕೆ ಕಾರಣವಾಗಿದೆ. ಇದಲ್ಲದೆ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಳೆ ಸಂಬಂಧಿತ ಘಟನೆಗಳಿಂದ ಮತ್ತಷ್ಟು ಜೀವಹಾನಿಯಾಗಿದೆ.

ಬೆಳಗಾವಿ: ಹಳ್ಳದಲ್ಲಿ ಎತ್ತಿನ ಗಾಡಿ ಮಗುಚಿ ಬಿದ್ದು ಇಬ್ಬರು ಮಕ್ಕಳು ಸಾವು
ಮಗುಚಿ ಬಿದ್ದ ಎತ್ತಿನ ಗಾಡಿ
Sahadev Mane
| Updated By: ವಿವೇಕ ಬಿರಾದಾರ|

Updated on:May 27, 2025 | 10:15 PM

Share

ಬೆಳಗಾವಿ, ಮೇ 27: ಬೆಳಗಾವಿ (Belagavi) ಜಿಲ್ಲೆಯ ಅಥಣಿ (Athani) ತಾಲೂಕಿನ ನಾಗನೂರ ಪಿಎ ಗ್ರಾಮದಲ್ಲಿನ ಹಳ್ಳದಲ್ಲಿ ಎತ್ತಿನ ಗಾಡಿ ಮಗುಚಿ ಬಿದ್ದು ಇಬ್ಬರು ಮಕ್ಕಳು ಮತ್ತು ಒಂದು ಎತ್ತು ಮೃತಪಟ್ಟಿದೆ. ಗಣೇಶ್ ಕಾಂಬಳೆ (9), ದೀಪಕ್ ಕಾಂಬಳೆ (11) ಮೃತರು. ಭಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿದೆ. ಹಳ್ಳಕ್ಕೆ ಸೇತುವೆ ಇಲ್ಲದಿರುವುದರಿಂದ, ಸಂಬರಗಿ ಗ್ರಾಮದಿಂದ ನಾಗನೂರ ಪಿಎ ಗ್ರಾಮಕ್ಕೆ ಹರಿಯುತ್ತಿರುವ ನೀರಿನಲ್ಲೇ ಎತ್ತಿನ ಗಾಡಿಯಲ್ಲಿ ತೆರಳಿದ್ದಾರೆ. ಸುತ್ತಲೂ ನೀರು ಇದ್ದಿದ್ದರಿಂದ ದಾರಿ ಕಂಡಿಲ್ಲ. ನೀರಿನ ರಭಸಕ್ಕೆ ಎತ್ತಿನ ಗಾಡಿ ಮಗುಚಿ ಬಿದ್ದಿದೆ. ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಡೆ ಕುಸಿದು ಮಹಿಳೆ ಸಾವು

ಹಾವೇರಿ: ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕಿರವಾಡಿ ಗ್ರಾಮದಲ್ಲಿ ನಡೆದಿದೆ. ಕಿರವಾಡಿ ಗ್ರಾಮದ ನಿವಾಸಿ ಶಾಂತಮ್ಮ ತಳವಾರ (52) ಮೃತ ದುರ್ದೈವಿ. ಕಂದಾಯ ಅಧಿಕಾರಿಗಳು, ಪೊಲೀಸರು ಭೇಟಿ ಸ್ಥಳಕ್ಕೆ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನು, ಹಾನಗಲ್ ತಾಲೂಕಿನ ಕೂಡಲ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತಪಟ್ಟಿದ್ದಾನೆ. ಶಶಾಂಕಗೌಡ ಮುದ್ದಿನಗೌಡ (14) ಮೃತ ಬಾಲಕ. ಮನೆಯ ಪಂಪಸೇಟ್ ಪ್ರಾರಂಭಿಸಲು ಹೋದಾಗ ವಿದ್ಯುತ್ ಶಾಕ್​ ಹೊಡೆದು ಮೃತಪಟ್ಟಿದ್ದಾನೆ. ಸ್ಥಳಕ್ಕೆ ಆಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ
Image
ಕರ್ನಾಟಕದಲ್ಲಿ ಹಲವು ಅವಾಂತರ ಸೃಷ್ಟಿಸಿದ ಮಳೆ: ಕಾರು, ಲಾರಿ ಪಲ್ಟಿ, 3 ಸಾವು
Image
ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ: ಕಾಲೇಜುಗಳಿಗೆ ರಜೆ ಘೋಷಣೆ
Image
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
Image
ಮುಂಗಾರು ಮಳೆ: ಕರವಾಳಿ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಅವಾಂತರ

ಸಿಡಿಲು ಬಡಿದು ಏಳು ಕುರಿಗಳ ಸಾವು

ಕಲಬುರಗಿ: ಆಳಂದ ತಾಲೂಕಿನ ತಡೋಳಾ ಗ್ರಾಮದಲ್ಲಿ ಸಿಡಿಲು ಬಡಿದು ಏಳು ಕುರಿಗಳು ಮೃತಪಟ್ಟಿವೆ. ಸಗಾತೆಯವರಿಗೆ ಸೆರಿರುವ 4 ಕುರಿಗಳು ಹಾಗೂ ಚಂದ್ರಕಾಂತ್ ಗಾವಡೆಗೆ ಸೇರಿದ ಮೂರು ಕುರಿಗಳು ಮೃತಪಟ್ಟಿವೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಪ್ರವಾಸಿಗರ ಗಮನಕ್ಕೆ: ಭಾರಿ ಮಳೆಯಿಂದ ಕರ್ನಾಟಕದ ಈ ಎರಡು ಕಡೆ ಅರಣ್ಯ ಸಫಾರಿ ರದ್ದು

80ಕ್ಕೂ ಹೆಚ್ಚು ಕುರಿಗಳು ಸಾವು

ದಾವಣಗೆರೆ: ಜೀನಿಹಳ್ಳಿಯಲ್ಲಿ ಸಿಡಿಲು ಬಡಿದು 80ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿರುವ ಘಟನೆ ಹೊನ್ನಾಳಿ ತಾಲೂಕಿನ ಜೀನಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೀನಿಹಳ್ಳಿ ಗ್ರಾಮದ ಮಹೇಶಪ್ಪಗೆ ಸೇರಿದ ಕುರಿಗಳು ಮೃತಪಟ್ಟಿವೆ. ಸೂಕ್ತ ಪರಿಹಾರ ನೀಡಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:32 pm, Tue, 27 May 25