ಬೆಳಗಾವಿ ಗಣೇಶೋತ್ಸವ: ಪೊಲೀಸ್​ ಬಂದೋಬಸ್ತ್​ಗೆ ರ್ಯಾಪಿಡ್ ಆ್ಯಕ್ಷನ್ ಫೋರ್ಸ್, ಡ್ರೋನ್‌ ಬಳಕೆ: ಎಡಿಜಿಪಿ ಅಲೋಕ್​ ಕುಮಾರ್

ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ‌ ಪ್ರಕರಣದಲ್ಲಿ ಕಾನೂನು ಪ್ರಕಾರ ಏನು ಕ್ರಮ ತಗೆದುಕೊಳ್ಳಬೇಕು ತಗೆದುಕೊಳ್ಳುತ್ತೇವೆ ಎಂದು ಬೆಳಗಾವಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

ಬೆಳಗಾವಿ ಗಣೇಶೋತ್ಸವ: ಪೊಲೀಸ್​ ಬಂದೋಬಸ್ತ್​ಗೆ ರ್ಯಾಪಿಡ್ ಆ್ಯಕ್ಷನ್ ಫೋರ್ಸ್, ಡ್ರೋನ್‌ ಬಳಕೆ: ಎಡಿಜಿಪಿ ಅಲೋಕ್​ ಕುಮಾರ್
ಅಲೋಕ್​ ಕುಮಾರ, ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ)
Follow us
TV9 Web
| Updated By: ವಿವೇಕ ಬಿರಾದಾರ

Updated on: Aug 30, 2022 | 3:06 PM

ಬೆಳಗಾವಿ: ಮುರುಘಾ (Muragha Mutt) ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ‌ ಪ್ರಕರಣದಲ್ಲಿ ಕಾನೂನು ಪ್ರಕಾರ ಏನು ಕ್ರಮ ತಗೆದುಕೊಳ್ಳಬೇಕು ತಗೆದುಕೊಳ್ಳುತ್ತೇವೆ ಎಂದು ಬೆಳಗಾವಿಯಲ್ಲಿ (Belagavi) ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಹೇಳಿದ್ದಾರೆ. ಬೆಳಗಾವಿಯಲ್ಲಿ ಅದ್ದೂರಿ ಗಣೇಶೋತ್ಸವ ಹಿನ್ನೆಲೆ ಎಡಿಜಿಪಿ ಅಲೋಕ್‌ಕುಮಾರ್ ಬೆಳಗಾವಿ ವಿಭಾಗ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿದ ಅವರು ಈ ವರ್ಷ ವಿಶೇಷವಾಗಿ ಬಹಳಷ್ಟು ವಿದ್ಯಮಾನಗಳು ನಡೆಯುತ್ತಿವೆ ಎಂದರು.

ಕಳೆದ ಎರಡು ವರ್ಷ ಕೊವಿಡ್ ಹಿನ್ನೆಲೆ ಗಣೇಶೋತ್ಸವ ಆಗಿರಲಿಲ್ಲ. ಈ ವರ್ಷ ಪೂರ್ಣ ಪ್ರಮಾಣದಲ್ಲಿ ಗಣೇಶೋತ್ಸವಕ್ಕೆ ಹುಷಾರಾಗಿರಬೇಕಾಗುತ್ತೆ. ನಮ್ಮ ಅಧಿಕಾರಿಗಳು ಬಹಳಷ್ಟು ಪೂರ್ವತಯಾರಿ ಮಾಡಿದ್ದಾರೆ. ಬೆಳಗಾವಿಗೆ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಬರ್ತಿದೆ. ಈ ಬಾರಿ ಡ್ರೋನ್‌ಗಳನ್ನು ಬಳಕೆ ಮಾಡಲಾಗುತ್ತಿದೆ.ಸಾಕಷ್ಟು ಸಂಖ್ಯೆಯಲ್ಲಿ ಕೆಎಸ್‌ಆರ್‌ಪಿ, ಹೋಮ್‌ಗಾರ್ಡ್ ಸಿಬ್ಬಂದಿ ನೀಡಿದ್ದೇವೆ ಎಂದು ತಿಳಿಸಿದರು.

ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ವಾಟ್ಸಪ್ ಗ್ರೂಪ್ ಮಾಡಿಕೊಂಡು ಸಲಹೆ ಸೂಚನೆ ವಿನಿಮಯ ಮಾಡಲಾಗುತ್ತಿದೆ. ರಾತ್ರಿ ವೇಳೆಯಲ್ಲಿ ರಿಫ್ಲೆಕ್ಟೆಡ್ ಜಾಕೆಟ್ ಬಳಕೆ ಮಾಡುತ್ತೇವೆ. ನಮ್ಮ ಪ್ರಕಾರ ಯಾವುದೇ ಸಮಸ್ಯೆ ಬರಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗಣೇಶೋತ್ಸವ ಪೆಂಡಾಲ್‌ಗಳಲ್ಲಿ ವೀರ್ ಸಾವರ್ಕರ್ ಭಾವಚಿತ್ರ ಅಳವಡಿಕೆ ವಿಚಾರವಾಗಿ ಮಾತನಾಡಿದ ಅವರು ಸಾರ್ವಜನಿಕ ಸ್ಥಳಗಳಲ್ಲಿ ಭಾವಚಿತ್ರ ಹಾಕಲು ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯಬೇಕು. ಖಾಸಗಿ ಜಾಗದಲ್ಲಿ ವೀರ್ ಸಾವರ್ಕರ್, ಭಗತ್ ಸಿಂಗ್, ಬಾಲಗಂಗಾಧರ ತಿಲಕ್ ಭಾವಚಿತ್ರ ಅಳವಡಿಸಿಕೊಳ್ಳಲಿ.ನಮ್ಮದ್ಯಾವುದೇ ಅಭ್ಯಂತರ ಇಲ್ಲ ಎಂದು ಹೇಳಿದರು.

ಆದರೆ ಸಾರ್ವಜನಿಕ ಸ್ಥಳದಲ್ಲಿ ಯಾರೇ ಆಗಲಿ ಜವಾಹರಲಾಲ್ ನೆಹರು ಆಗಲಿ, ಚಂದ್ರಶೇಖರ ಆಜಾದ್ ಆಗಲಿ ವೀರ್ ಸಾವರ್ಕರ್ ಆಗಲಿ, ಯಾರ ಭಾವಚಿತ್ರ ಹಾಕಬೇಕಾದರೂ ಸ್ಥಳೀಯ ಸಂಸ್ಥೆಗಳ ಪರವಾನಗಿ ಪಡೆಯಬೇಕಾಗುತ್ತೆ. ಖಾಸಗಿ ಸ್ಥಳ, ಮನೆಯಲ್ಲಿ ಮಾಡಲಿ ಅದು ಅವರ ವೈಯಕ್ತಿಕ, ನಾವು ಅಡೆ ತಡೆ ಮಾಡಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಏನಾದರೂ ಮಾಡಲು ಪರವಾನಗಿ ಬೇಕಾಗುತ್ತದೆ. ಮಂಟಪದ ಒಳಗೆ ಭಾವಚಿತ್ರ ಅಳವಡಿಕೆಗೆ ಅನುಮತಿ ಪಡೆಯಬೇಕು ಎಂದು ತಿಳಿಸಿದರು.

ಸಾವರ್ಕರ್ ಫೋಟೋ ಮುಟ್ಟಿದ್ರೆ ಕೈ ಕಡೀತಿವಿ ಎಂಬ ಪ್ರಮೋದ್ ಮುತಾಲಿಕ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಯಾರು ಯಾರು ಏನ್ ಮಾತನಾಡ್ತಾರೆ ಅದರ ಬಗ್ಗೆ ಕಮೆಂಟ್ ಮಾಡಲ್ಲ. ಕರ್ನಾಟಕದಲ್ಲಿ ಆರು ಕೋಟಿ ಜ‌ನ ಇದ್ದಾರೆ ಭಾರತದಲ್ಲಿ 180 ಕೋಟಿ ಜನ ಇದ್ದಾರೆ. ಅವರಿಗೆ ಎಲ್ಲರಿಗೂ ಮಾತನಾಡುವ ಹಕ್ಕಿದೆ. ಕೆಲವು ಜನ ಕಾನೂನು ಉಲ್ಲಂಘನೆ ಮಾಡಿ ಮಾತನಾಡ್ತಾರೆ. ಕೆಲವರು ಕಾನೂನು ಇತಿಮಿತಿಗಳಲ್ಲಿ ಮಾತನಾಡ್ತಾರೆ. ಎಲ್ಲರ ಬಗ್ಗೆ ನಾವು ಕಮೆಂಟ್ ಮಾಡೋಕೆ ಆಗಲ್ಲ ಎಂದು ನುಡಿದರು.

ಗಣೇಶೋತ್ಸವದಲ್ಲಿ ಡಿಜೆ, ಸೌಂಡ್ ಸಿಸ್ಟಮ್​ ಬಳಕೆ ಸುಪ್ರೀಂಕೋರ್ಟ್ ಮಾರ್ಗಸೂಚಿ ಅನ್ವಯ ಪ್ರಕಾರ ಅದು ಆಗಬೇಕು. ಮಾರ್ಗಸೂಚಿ ಉಲ್ಲಂಘಿಸಿದ್ರೆ ನಮ್ಮ ಅಧಿಕಾರಿಗಳು ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತಾರೆ. ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷಾ ಹಗರಣ ಪ್ರಕರಣವನ್ನು ನಮ್ಮ ಎಸ್‌ಪಿಯವರು ತೀವ್ರ ತನಿಖೆ ಮಾಡ್ತಿದ್ದಾರೆ. ಗಣೇಶೋತ್ಸವ ಬಳಿಕ ಇನ್ನೂ ತೀವ್ರ ತನಿಖೆ ಮಾಡುತ್ತಾರೆ ಎಂದು ಮಾತನಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ