AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಬೆಳಗಾವಿ ನಡುವೆ ನೂತನ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ಒಪ್ಪಿಗೆ

ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಮತ್ತು ಬೆಳಗಾವಿ ನಡುವೆ ಹೊಸ ವಂದೇ ಭಾರತ್ ರೈಲಿಗೆ ಅನುಮತಿ ನೀಡಿದ್ದಾರೆ. ಸಚಿವ ವಿ. ಸೋಮಣ್ಣ ಅವರು ಈ ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ. ರೈಲಿನ ನಿಖರ ದಿನಾಂಕ ಮತ್ತು ಸಮಯವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದಿದ್ದಾರೆ. ಈ ರೈಲು ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದಗಳು ಎಂದು ಸಚಿವರು ಹೇಳಿದ್ದಾರೆ.

ಬೆಂಗಳೂರು-ಬೆಳಗಾವಿ ನಡುವೆ ನೂತನ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ಒಪ್ಪಿಗೆ
ವಂದೇ ಭಾರತ್​ ರೈಲು
ವಿವೇಕ ಬಿರಾದಾರ
| Updated By: ಗಂಗಾಧರ​ ಬ. ಸಾಬೋಜಿ|

Updated on:Apr 30, 2025 | 7:18 AM

Share

ಬೆಂಗಳೂರು, ಏಪ್ರಿಲ್​ 29: ಬೆಂಗಳೂರು-ಬೆಳಗಾವಿ (Bengaluru-Belagavi) ನಡುವೆ ನೂತನ ವಂದೇ ಭಾರತ್ ರೈಲು (Vande Bharath Train) ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮತಿ ನೀಡಿದ್ದಾರೆ. ಈ ರೈಲು ಸಂಚಾರದ ಅಧಿಕೃತ ದಿನಾಂಕ ಹಾಗೂ ಸಮಯವನ್ನು ಶೀಘ್ರವೇ ತಿಳಿಸಲಾಗುವುದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ (V Somanna) ಟ್ವೀಟ್​ ಮಾಡಿದ್ದಾರೆ.

ಈ ಕರಿತು ಟ್ವೀಟ್​ ಮಾಡಿದ ಅವರು “ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಬೇಕೆಂದು ಮಾನ್ಯ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಉತ್ತರ ಕರ್ನಾಟ ಭಾಗದ ಜನದಟ್ಟಣೆಯನ್ನು ಅರಿತು ಅಶ್ವಿನಿ ವೈಷ್ಣವ್ ಅವರು ಬೆಂಗಳೂರು-ಬೆಳಗಾವಿ ನಡುವೆ ನೂತನ ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿದ್ದಾರೆ. ಈ ರೈಲು ಸಂಚಾರದ ಅಧಿಕೃತ ದಿನಾಂಕ ಹಾಗೂ ಸಮಯವನ್ನು ಶೀಘ್ರವೇ ತಿಳಿಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ
Image
ಶುಭ ಸುದ್ದಿ ನೀಡಿದ ರೈಲ್ವೆ: ಈ ನಿಲ್ದಾಣದಲ್ಲಿ ವಂದೇ ಭಾರತ್ ನಿಲುಗಡೆಗೆ ಆದೇಶ
Image
ಬೆಂಗಳೂರು ಬೆಳಗಾವಿ ವಂದೇ ಭಾರತ್ ರೈಲು ಶೀಘ್ರ: ಅಶ್ವಿನಿ ವೈಷ್ಣವ್ ಸಮ್ಮತಿ
Image
ಮೆಟ್ರೋ ಬರೆ: ಪ್ರಯಾಣಿಕರ ಆಕ್ರೋಶ ಬೆನ್ನಲ್ಲೇ ದರ ಇಳಿಸುವಂತೆ ಬಿಜೆಪಿ ಮನವಿ
Image
ನಮ್ಮ ಮೆಟ್ರೋ ಟಿಕೆಟ್ ದರ ಓನ್​ ಟು ಡಬಲ್ ಏರಿಕೆ ಮಾಡಲಾಗಿದ್ಯಾ?

ಸೋಮಣ್ಣ ಟ್ವೀಟ್​

“ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿರುವ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಹಾಗೂ ಅಶ್ವಿನಿ ವೈಷ್ಣವ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದ ರೈಲ್ವೆ: ಈ ನಿಲ್ದಾಣದಲ್ಲಿ ವಂದೇ ಭಾರತ್ ನಿಲುಗಡೆಗೆ ಆದೇಶ

ಈಗಾಗಲೇ ಕರ್ನಾಟಕದಲ್ಲಿ ಬೆಂಗಳೂರು ಟು ಧಾರವಾಡ, ಬೆಂಗಳೂರು ಕಂಟೋನ್ಮೆಂಟ್​ ಟು ಕೊಯಮತ್ತೂರು, ಮೈಸೂರು ಟು ಚೆನೈ, ಯಶವಂತಪುರ ಟು ಕಾಚಿಗುಡ ಮತ್ತು ಮಂಗಳೂರು ಸೆಂಟ್ರೆಲ್ ಟು ಮಡಗಾಂವ್​ಗೆ​​ ವಂದೇ ಭಾರತ್ ರೈಲುಗಳು ಸಂಚಾರ ಮಾಡುತ್ತಿವೆ.

ಸಚಿವ ಪ್ರಲ್ಹಾದ್​ ಜೋಶಿ ಟ್ವೀಟ್

ಇನ್ನು ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಕೂಡ ಟ್ವೀಟ್ ಮಾಡಿದ್ದು, ಬೆಂಗಳೂರು – ಬೆಳಗಾವಿ ವಂದೇ ಭಾರತ್ ರೈಲಿಗೆ ನನ್ನ ಕೋರಿಕೆಯ ಮೇರಿಗೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ವಂದೇ ಭಾರತ್ ರೈಲು ಸಂಪರ್ಕದಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ದೊಡ್ಡ ಉತ್ತೇಜನ ಸಿಗಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:06 pm, Tue, 29 April 25