
ಬೆಂಗಳೂರು, ಏಪ್ರಿಲ್ 29: ಬೆಂಗಳೂರು-ಬೆಳಗಾವಿ (Bengaluru-Belagavi) ನಡುವೆ ನೂತನ ವಂದೇ ಭಾರತ್ ರೈಲು (Vande Bharath Train) ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮತಿ ನೀಡಿದ್ದಾರೆ. ಈ ರೈಲು ಸಂಚಾರದ ಅಧಿಕೃತ ದಿನಾಂಕ ಹಾಗೂ ಸಮಯವನ್ನು ಶೀಘ್ರವೇ ತಿಳಿಸಲಾಗುವುದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ (V Somanna) ಟ್ವೀಟ್ ಮಾಡಿದ್ದಾರೆ.
ಈ ಕರಿತು ಟ್ವೀಟ್ ಮಾಡಿದ ಅವರು “ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಬೇಕೆಂದು ಮಾನ್ಯ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಉತ್ತರ ಕರ್ನಾಟ ಭಾಗದ ಜನದಟ್ಟಣೆಯನ್ನು ಅರಿತು ಅಶ್ವಿನಿ ವೈಷ್ಣವ್ ಅವರು ಬೆಂಗಳೂರು-ಬೆಳಗಾವಿ ನಡುವೆ ನೂತನ ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿದ್ದಾರೆ. ಈ ರೈಲು ಸಂಚಾರದ ಅಧಿಕೃತ ದಿನಾಂಕ ಹಾಗೂ ಸಮಯವನ್ನು ಶೀಘ್ರವೇ ತಿಳಿಸಲಾಗುವುದು” ಎಂದಿದ್ದಾರೆ.
“ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿರುವ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಹಾಗೂ ಅಶ್ವಿನಿ ವೈಷ್ಣವ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದ ರೈಲ್ವೆ: ಈ ನಿಲ್ದಾಣದಲ್ಲಿ ವಂದೇ ಭಾರತ್ ನಿಲುಗಡೆಗೆ ಆದೇಶ
ಈಗಾಗಲೇ ಕರ್ನಾಟಕದಲ್ಲಿ ಬೆಂಗಳೂರು ಟು ಧಾರವಾಡ, ಬೆಂಗಳೂರು ಕಂಟೋನ್ಮೆಂಟ್ ಟು ಕೊಯಮತ್ತೂರು, ಮೈಸೂರು ಟು ಚೆನೈ, ಯಶವಂತಪುರ ಟು ಕಾಚಿಗುಡ ಮತ್ತು ಮಂಗಳೂರು ಸೆಂಟ್ರೆಲ್ ಟು ಮಡಗಾಂವ್ಗೆ ವಂದೇ ಭಾರತ್ ರೈಲುಗಳು ಸಂಚಾರ ಮಾಡುತ್ತಿವೆ.
ಇನ್ನು ಈ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೂಡ ಟ್ವೀಟ್ ಮಾಡಿದ್ದು, ಬೆಂಗಳೂರು – ಬೆಳಗಾವಿ ವಂದೇ ಭಾರತ್ ರೈಲಿಗೆ ನನ್ನ ಕೋರಿಕೆಯ ಮೇರಿಗೆ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ವಂದೇ ಭಾರತ್ ರೈಲು ಸಂಪರ್ಕದಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ದೊಡ್ಡ ಉತ್ತೇಜನ ಸಿಗಲಿದೆ ಎಂದು ಹೇಳಿದ್ದಾರೆ.
Published On - 11:06 pm, Tue, 29 April 25