ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಖಾಸಗಿ ಸಾರಿಗೆ ಬಂದ್; ಬೆಂಬಲ ಸೂಚಿಸಿದ ಓಲಾ, ಉಬರ್ ಚಾಲಕರು

ಸೋಮವಾರ ಖಾಸಗಿ ಸಾರಿಗೆ ಸಂಘಟನೆ ಬಂದ್​ಗೆ ಸಂಬಂಧಿಸಿದಂತೆ ಓಲಾ, ಉಬರ್ ಚಾಲಕರು ಮತ್ತು ಮಾಲೀಕರ ಸಂಘದಿಂದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಧ್ಯಕ್ಷ ತನ್ವೀರ್ ಪಾಷಾ ‘ರ್ಯಾಪಿಡೋ ವಿಚಾರದಲ್ಲಿ ನಮಗೆ ಸಾಕಷ್ಟು ನೋವಿದೆ. ಹೀಗಾಗಿ ನಾವು ಬಂದ್​ಗೆ ಬೆಂಬಲ ಕೊಡುತ್ತಿದ್ದೇವೆ. ಆದ್ರೆ, ಯಾರಿಗೂ ಒತ್ತಡ ಹೇರುವ ಕೆಲಸ ಮಾಡುತ್ತಿಲ್ಲ ಎಂದಿದ್ದಾರೆ.

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಖಾಸಗಿ ಸಾರಿಗೆ ಬಂದ್; ಬೆಂಬಲ ಸೂಚಿಸಿದ ಓಲಾ, ಉಬರ್ ಚಾಲಕರು
ಪ್ರಾತಿನಿಧಿಕ ಚಿತ್ರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 09, 2023 | 2:43 PM

ಬೆಂಗಳೂರು, ಸೆ.09: ಕಾಂಗ್ರೆಸ್​ ನೀಡಿದ್ದ 5 ಗ್ಯಾರೆಂಟಿಗಳಲ್ಲೊಂದಾದ ಶಕ್ತಿ ಯೋಜನೆಗೆ ರಾಜ್ಯದ್ಯಾಂತ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಆದರೆ, ಆಟೋ (Auto), ಟ್ಯಾಕ್ಸಿ(Taxi), ಕ್ಯಾಬ್​​ ವಾಹನಗಳಿಗೆ ನಷ್ಟವಾಗಿದೆ. ಈ ಹಿನ್ನಲೆ ಸೋಮವಾರ(ಸೆ.11) ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ವಾಹನಗಳ ಸಂಘದಿಂದ ಬಂದ್​ಗೆ ಕರೆ ನೀಡಲಾಗಿದೆ. ಇನ್ನು ಈ ಹೋರಾಟಕ್ಕೆ ಓಲಾ, ಉಬರ್ ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಅವರು ಕೂಡ ಬಂದ್​ಗೆ ಬೆಂಬಲ ವ್ಯಕ್ತಪಡಿಸಿದ್ದೇವೆ ಎಂದಿದ್ದಾರೆ.

ಬಂದ್​ಗೆ ಬೆಂಬಲ ಸೂಚಿಸಿದ ಓಲಾ, ಉಬರ್

ಸೋಮವಾರ ಖಾಸಗಿ ಸಾರಿಗೆ ಸಂಘಟನೆ ಬಂದ್​ಗೆ ಸಂಬಂಧಿಸಿದಂತೆ ಓಲಾ, ಉಬರ್ ಚಾಲಕರು ಮತ್ತು ಮಾಲೀಕರ ಸಂಘದಿಂದ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಧ್ಯಕ್ಷ ತನ್ವೀರ್ ಪಾಷಾ ‘ಹಲವು ಸಂಘಟನೆ ಒಕ್ಕೂಟದ ಮುಖಾಂತರ ಸೋಮವಾರ ಬೆಂಗಳೂರು ಬಂದ್ ಗೆ ಕರೆ ನೀಡಿದ್ದಾರೆ. ಸಾವಿರಾರು ಆಟೋ ಕಮ್ ಟ್ಯಾಕ್ಸಿ ಇರುವ ಕ್ಯೂಟ್ ವಾಹನ ಸಂಸ್ಥೆ. ಆಟೋ ಘಟಕ, ಓಲಾ ಉಬರ್, MNC ಚಾಲಕರ ಸಂಘ ಇಲ್ಲಿದೆ. ಮುಖ್ಯವಾಗಿ ಈ ಬಂದ್​ಗೆ ನಮ್ಮ ಬೆಂಬಲ ಇದೆ ಎಂದಿದ್ದಾರೆ.

ಇದನ್ನೂ ಓದಿ:ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್​ಗೆ ಕರೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ರ್ಯಾಪಿಡೋ ವಿಚಾರದಲ್ಲಿ ಸಾಕಷ್ಟು ನೋವಿದೆ

ರ್ಯಾಪಿಡೋ ವಿಚಾರದಲ್ಲಿ ನಮಗೆ ಸಾಕಷ್ಟು ನೋವಿದೆ. ಹೀಗಾಗಿ ನಾವು ಬಂದ್​ಗೆ ಬೆಂಬಲ ಕೊಡುತ್ತಿದ್ದೇವೆ. ಆದ್ರೆ, ಯಾರಿಗೂ ಒತ್ತಡ ಹೇರುವ ಕೆಲಸ ಮಾಡುತ್ತಿಲ್ಲ. ಸೇವೆ ನೀಡೋದು ಬಿಡೋದು ಅವರಿಗೆ ಬಿಟ್ಟಿರುವ ವಿಚಾರ. ಅನಧಿಕೃತವಾಗಿ ರನ್ ಆಗುತ್ತಿರುವ ರ್ಯಾಪಿಡೋ ಬ್ಯಾನ್ ಬೇಡಿಕೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸುದ್ದಿಗೋಷ್ಠಿಯಲ್ಲಿ ಬೆಂಬಲ ಸೂಚಿಸಿದ್ದಾರೆ.

ಇನ್ನು ಖಾಸಗಿ ವಾಹನಗಳ ಬೇಡಿಕೆಗಳು ಈ ಕೆಳಗಿನಂತಿದೆ.

1) ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಧನ

2) ರ್ಯಾಪಿಡ್ ಬೈಕ್ ಟ್ಯಾಕ್ಸಿಗಳ ಸಂಪೂರ್ಣ ನಿಷೇಧ

3) ಅಸಂಘಟಿತ ವಾಣಿಜ್ಯ ಚಾಲಕರ ಮತ್ತು ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ, ಸೌಲಭ್ಯ ಯೋಜನೆಯಡಿ ಆಟೋ, ಟ್ಯಾಕ್ಸಿ ಚಾಲಕರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಬೇಕು

4)ವೈಟ್ ಬೋರ್ಡ್ ವಾಹನದಲ್ಲಿ ಬಾಡಿಗೆ ಮಾಡೋದಕ್ಕೆ ಬ್ರೇಕ್

5) ಚಾಲಕರ ಮಕ್ಕಳಿಗೆ ವಿದ್ಯಾರ್ಥಿವೇತನ

6) ಓಲಾ, ಊಬರ್ ಆಪ್ ಆಧಾರಿತ ಸೇವೆಗಳ ನಿರ್ಬಂಧ

7) ಖಾಸಗಿ ಬಸ್​ಗಳಿಗೂ ಶಕ್ತಿ ಯೋಜನೆ ಅಡಿ ಸೇವೆಗೆ ಅವಕಾಶ

8) ಖಾಸಗಿ ವಾಹನಗಳನ್ನ ಕಿ.ಮೀ ಆಧಾರದಲ್ಲಿ ಸರ್ಕಾರ ಬಾಡಿಗೆಗೆ ಪಡೆಯುವುದು

9) ನಿಯಮ ಬಾಹಿರವಾಗಿ ವಾಹನ ವಶಕ್ಕೆ ಪಡೆಯುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಬೇಕು

ಇನ್ನಿತರ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಬಂದ್​ಗೆ ಕರೆ ನೀಡಲಾಗಿದೆ. ಇನ್ನು ಸೆಪ್ಟೆಂಬರ್ 10 ರ ಮಧ್ಯರಾತ್ರಿಯಿಂದಲೇ ಬಂದ್ ಶುರುವಾಗಲಿದೆ. ಈ ಹಿನ್ನಲೆ ಇಂದು ಬಂದ್​ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Sat, 9 September 23

ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?
ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?