Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.4ರಂದು ಅಧಿವೇಶನದ ಮೊದಲ ದಿನವೇ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ: ಕೊಡಿಹಳ್ಳಿ ಚಂದ್ರಶೇಖರ್

ಡಿಸೆಂಬರ್ 4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಆದ್ರೆ, ಇತ್ತ ಕರ್ನಾಟಕ ರಾಜ್ಯ ರೈತ ಸಂಘ, ಅಧಿವೇಶನ ಆರಂಭದ ದಿನವೇ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಡಿ.4ರಂದು ಅಧಿವೇಶನದ ಮೊದಲ ದಿನವೇ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ: ಕೊಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್
Follow us
Sahadev Mane
| Updated By: ರಮೇಶ್ ಬಿ. ಜವಳಗೇರಾ

Updated on: Dec 02, 2023 | 3:47 PM

ಬೆಳಗಾವಿ, ಡಿಸೆಂಬರ್ 02): ಇದೇ ಡಿಸೆಂಬರ್ 4ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ (Belagavi Winter Session) ಶುರುವಾಗಲಿದೆ. ಆದ್ರೆ, ಇತ್ತ ಕರ್ನಾಟಕ ರಾಜ್ಯ ರೈತ ಸಂಘ, ಅಧಿವೇಶನ ಆರಂಭದ ದಿನವೇ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಿದೆ. ಈ ಬಗ್ಗೆ ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್(Kodihalli chandrashekar), ಅಧಿವೇಶನದ ಮೊದಲ ದಿನ ಡಿಸೆಂಬರ್ 4 ರಂದು ಬೆಳಿಗ್ಗೆ 11 ಗಂಟೆಗೆ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಹೋಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದ್ದಾರೆ.

ರೈತರ ವಿವಿಧ ಬೇಡಿಕೆ ಗಳ ಈಡೇರಿಸಲು ಒತ್ತಾಯಿಸಿ ಪಾದಯಾತ್ರೆ ಮೂಲಕ ತೆರಳಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಜಾರಿಗೊಳಿಸಿ ಬಳಿಕ ಅದನ್ನು ವಾಪಸ್ ಪಡೆದಿದೆ. ಆದ್ರೆ, ರಾಜ್ಯ ಸರ್ಕಾರ ಕೃಷಿ ಕಾಯ್ದೆ ವಾಪಸ್ ಪಡೆದಿಲ್ಲ. ಆದ್ರೆ, ಬಿಜೆಪಿಯವರು ತಂದಿರುವ ಕೃಷಿ ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗಿ ಎಂದು ಕಿಡಿಕಾರಿದರು.

ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಟ: ಬಿಜೆಪಿಯ ಅಸ್ತ್ರಗಳನ್ನು ಬಿಚ್ಚಿಟ್ಟ ಅಶೋಕ್

ಈ ಹಿಂದೆ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬೆಂಬಲಿಸಿದ್ದರು. ಕಳೆದ ಅಧಿವೇಶನದಲ್ಲಿ ಸಚಿವ ಶಿವಾನಂದ ಪಾಟೀಲ್ ಕೃಷಿ ಕಾಯ್ದೆ ವಾಪಸ್ ಪಡೆಯುವ ಬಿಲ್ ಮಂಡಿಸಲು ಮುಂದಾದ್ರು. ಆಗ ವಿಪಕ್ಷದವರು ವಿರೋಧಿಸಿದ್ದರು. ಬಿಜೆಪಿಯವರು ತಂದಿರೋ ಕೃಷಿ ಕಾಯ್ದೆ ಯಥಾವತ್ತಾಗಿ ಜಾರಿಗೊಳಿಸಲು ಸರ್ಕಾದ ಮುಂದಾಗಿದೆ. ಬಿಜೆಪಿ ಜಾರಿ ತಂದ ಭೂಸುಧಾರಣಾ ಕಾಯ್ದೆಯನ್ನ ಅನುಷ್ಠಾನಗೊಳಿಸುವ ಕೆಲಸವನ್ನ ಕಾಂಗ್ರೆಸ್ ಅಚ್ಚುಕಟ್ಟಾಗಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಹೈನುಗಾರಿಕೆ ಯೋಜನೆಯಲ್ಲಿ ಸರ್ಕಾರ ರೈತರಿಂದ 4 ರೂಪಾಯಿ ಹಗಲು ದರೋಡೆ ಮಾಡುತ್ತಿದೆ. ಬರಗಾಲದಿಂದ ರೈತರು ತತ್ತರಿಸಿದ್ದರೂ ಈವರೆಗೂ ಪರಿಹಾರ ಬಂದಿಲ್ಲ. ಮೋದಿ ಸರ್ಕಾರ ರೈತರಿಗೆ 2 ಸಾವಿರ ಕೊಡುತ್ತಿತ್ತು. ಇದಕ್ಕೆ ರಾಜ್ಯ ಬಿಜೆಪಿ ಸರ್ಕಾರ 2 ಸಾವಿರ ಸೇರಿಸಿ ಕೊಡುತ್ತಿತ್ತು. ಆದ್ರೆ, ಈಗ ಕಾಂಗ್ರೆಸ್ ಸರ್ಕಾರ ಆ 2 ಸಾವಿರ ರೂಪಾಯಿ ಕಟ್ ಮಾಡಿದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಒಂದೇ ಒಂದು ರೈತ ಪರ ಯೋಜನೆ ಮಾಡಿಲ್ಲ.ಕಬ್ಬು ಬೆಳೆಗಾರರಿಗೆ ಈವರೆಗೂ ಸೂಕ್ತ ದರ ಸಿಗುತ್ತಿಲ್ಲ. ಯಾವುದೇ ಕಾರ್ಖಾನೆಗಳು ರೈತರಿಗೆ ಸೂಕ್ತ ದರ ನೀಡುತ್ತಿಲ್ಲ. ಹಾವೇರಿ ರೈತರಿಗೆ ಒಂದ ದರ, ಹುಬ್ಬಳ್ಳಿ ಧಾರವಾಡ, ಕಾರವಾರದ ರೈತರಿಗೆ ಮತ್ತೊಂದು ದರ ಕೊಡುತ್ತಿದ್ದಾರೆ ಆಕ್ರೋಶ ವ್ಯಕ್ತಪಡಿಸಿದರು.

ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್