ಸವದತ್ತಿ ಯಲ್ಲಮ್ಮ ದೇಗುಲದಲ್ಲಿ 2 ವರ್ಷಗಳ ಬಳಿಕ ಭರತ ಹುಣ್ಣಿಮೆ ಸಂಭ್ರಮ: 3 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿ

ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ಬೃಹತ್​ ಜಾತ್ರೆ ನಡೆಯಿತು. ಎತ್ತಿನಗಾಡಿ, ಕಾರು, ಬಸ್​ಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದರು.

ಸವದತ್ತಿ ಯಲ್ಲಮ್ಮ ದೇಗುಲದಲ್ಲಿ 2 ವರ್ಷಗಳ ಬಳಿಕ ಭರತ ಹುಣ್ಣಿಮೆ ಸಂಭ್ರಮ: 3 ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿ
ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಪಾಳಿಯಲ್ಲಿ ನಿಂತ ಭಕ್ತರು.
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 16, 2022 | 10:07 PM

ಬೆಳಗಾವಿ: ಸವದತ್ತಿ ಪಟ್ಟಣದ ಹೊರವಲಯದಲ್ಲಿರುವ ಯಲ್ಲಮ್ಮ ದೇವಸ್ಥಾನದಲ್ಲಿ ಎರಡು ವರ್ಷಗಳ ಬಳಿಕ ಬುಧವಾರ (ಫೆ 16) ಭರತ ಹುಣ್ಣಿಮೆ ಸೇವೆ ಸಡಗರ ಸಂಭ್ರಮದಿಂದ ನಡೆಯಿತು. ಕರ್ನಾಟಕದ ವಿವಿಧ ಜಿಲ್ಲೆಗಳು ಸೇರಿದಂತೆ ನೆರೆಯ ಮಹಾರಾಷ್ಟ್ರ ಮತ್ತು ಗೋವಾದಿಂದ ಭಕ್ತರು ಬೃಹತ್ ಸಂಖ್ಯೆಯಲ್ಲಿ ಆಗಮಿಸಿದ್ದರು. ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ಬೃಹತ್​ ಜಾತ್ರೆ ನಡೆಯಿತು. ಎತ್ತಿನಗಾಡಿ, ಕಾರು, ಬಸ್​ಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದರು. ಉಗರಗೋಳ, ಜೋಗುಳಬಾವಿ, ನೂಲಿನ ಗಿರಣಿ ಮಾರ್ಗದಲ್ಲಿ ಬ್ಯಾರಿಕೇಡ್​ ಹಾಕಿ ಪೊಲೀಸರು ಜನದಟ್ಟಣೆ ನಿಯಂತ್ರಿಸಿದರು. 55 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

ಪ್ರತಿವರ್ಷವೂ ಭರತ ಹುಣ್ಣಿಮೆ ಎಂದರೆ ಶ್ರೀ ಕ್ಷೇತ್ರ ಯಲ್ಲಮ್ಮ ದೇವಸ್ಥಾನದಲ್ಲಿ ಜಾತ್ರೆಯ ಸಂಭ್ರಮ ಮನೆ ಮಾಡುವುದು ವಾಡಿಕೆ. ಭರತ ಹುಣ್ಣಿಮೆ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ಮಾತ್ರ ಅವಕಾಶವಿತ್ತು. ಕೊರೊನಾ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಭರತ ಹುಣ್ಣಿಮೆ ಪ್ರಯುಕ್ತ ನಡೆಯಬೇಕಿದ್ದ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದಿರಲಿಲ್ಲ. ಕಳೆದ ವರ್ಷವೂ ಜನರ ಪ್ರವೇಶಕ್ಕೆ ನಿರ್ಬಂಧವಿತ್ತು. ಅಕ್ಕಪಕ್ಕದ ವಿವಿಧ ರಾಜ್ಯಗಳಿಂದಲೂ ಭಕ್ತರು ಶ್ರೀಕ್ಷೇತ್ರಕ್ಕೆ ಬಂದಿದ್ದರು. ಆದರೆ ದೇವಿಯ ದರ್ಶನ ಹೊರತುಪಡಿಸಿ ಬೇರೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ಇರಲಿಲ್ಲ.

ಎತ್ತಿನಗಾಡಿಗಳ ಮೂಲಕವೇ ಭಕ್ತರು ಕ್ಷೇತ್ರಕ್ಕೆ ಬಂದು ಬಿಡಾರ ಹೂಡಿದ್ದರು. ಭಕ್ತರು ಒಲೆ ಹೂಡಿ ತಾವು ತಂದ ಅಡುಗೆ ಪದಾರ್ಥಗಳಿಂದ ಕ್ಷೇತ್ರದ ಆವರಣದಲ್ಲಿಯೇ ಕರಿಕಡಬು, ತರಕಾರಿ ಅನ್ನ ಸೇರಿದಂತೆ ಅಡುಗೆ ಮಾಡಿಕೊಂಡ ಪಡ್ಡಲಗಿ ಮೂಲಕ ನೈವೇದ್ಯ ಅರ್ಪಿಸಿದರು. ಕರ್ಪೂರದ ಆರತಿ ಬೆಳಗಿ ದೇವಿಯ ದರ್ಶನ ಪಡೆದು, ಕೈಮುಗಿದು ನಮಿಸಿದರು. ಕುಂಕುಮವನ್ನೇ ಭಂಡಾರವೆಂದು ಪ್ರಸಾದವಾಗಿ ನೀಡುವುದು ಯಲ್ಲಮ್ಮ ದೇಗುಲವ ವಿಶೇಷ. ಕಳೆದ ಎರಡು ವರ್ಷಗಳಿಂದ ದೇಗುಲ ಆವರಣದಲ್ಲಿ ಜಾತ್ರೆ ನಡೆಯದ ಕಾರಣ ದೇಗುಲ ಆವರಣದ ವ್ಯಾಪಾರಿಗಳು ಕಳಾಹೀನರಾಗಿದ್ದರು. ದೇಗುಲದ ಆದಾಯವೂ ಕುಸಿದಿತ್ತು. ಆದರೆ ಈ ಬಾರಿ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ವ್ಯಾಪಾರಿಗಳು ಉತ್ತಮ ವ್ಯಾಪಾರ ಆಗಬಹುದು ಎಂಬ ನಿರೀಕ್ಷೆ ಇರಿಸಿಕೊಂಡಿದ್ದಾರೆ.

ರೇಣುಕಾ ಯಲ್ಲಮ್ಮ ದೇಗುಲದ ಹುಂಡಿಯಲ್ಲಿ ಸೌದಿ ಅರೇಬಿಯಾದ ನೋಟು ಪತ್ತೆ

ಸವದತ್ತಿ ಪಟ್ಟಣದ ಹೊರವಲಯದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಹುಂಡಿಯಲ್ಲಿ 1.18 ಕೋಟಿ ಹಣ, ₹17 ಲಕ್ಷ ಮೌಲ್ಯದ ಚಿನ್ನ, ₹2 ಲಕ್ಷ ಮೌಲ್ಯದ ಬೆಳ್ಳಿ ಸಂಗ್ರಹ; ಹುಂಡಿಯಲ್ಲಿ ಬ್ಯಾನ್ ಆಗಿರುವ ನೋಟ್‌ಗಳು, ವಿದೇಶಿ ಕರೆನ್ಸಿ ಕೂಡ ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಹುಂಡಿ ಎಣಿಕೆ. ಈ ಬಾರಿಯೂ ಹುಂಡಿ ಎಣಿಕೆಯಲ್ಲಿ ದಾಖಲೆ ಮೊತ್ತದ ಹಣ ಸಂಗ್ರಹ. ಯಲ್ಲಮ್ಮನ ಹುಂಡಿಯಲ್ಲಿ ಸೌದಿ ಅರೇಬಿಯಾದ ಒಂದು ಕರೆನ್ಸಿ ನೋಟು ಪತ್ತೆ. 1.18ಕೋಟಿ ರೂ., 17ಲಕ್ಷ ಮೌಲ್ಯದ ಚಿನ್ನ, 2ಲಕ್ಷ ಮೌಲ್ಯದ ಬೆಳ್ಳಿ ಸಂಗ್ರಹ.

ಬೆಳಗಾವಿಯ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಹುಂಡಿ ಎಣಿಕೆ. ಈ ಬಾರಿಯೂ ಹುಂಡಿ ಎಣಿಕೆಯಲ್ಲಿ ದಾಖಲೆ ಮೊತ್ತದ ಹಣ ಸಂಗ್ರಹ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ಯಲ್ಲಮ್ಮನ ಗುಡ್ಡ. ಯಲ್ಲಮ್ಮನ ಹುಂಡಿಯಲ್ಲಿ ಸೌದಿ ಅರೇಬಿಯಾದ ಒಂದು ಕರೆನ್ಸಿ ನೋಟು ಸೇರಿ. ಬ್ಯಾನ್ ಆದ ಐದನೂರು, ಸಾವಿರ ಮುಖ ಬೆಲೆಯ ನೋಟು ಹುಂಡಿಗೆ ಹಾಕಿರುವ ಭಕ್ತರು. ನವೆಂಬರ್ 2021ರಲ್ಲಿ 1.18 ಕೋಟಿ ಹಣ, 17 ಲಕ್ಷ ಮೌಲ್ಯದ ಚಿನ್ನ, 2 ಲಕ್ಷ ಮೌಲ್ಯದ ಬೆಳ್ಳಿ ಸಂಗ್ರಹಗೊಂಡಿದೆ. ಇಂದಿನಿಂದ ಭಕ್ತರಿಗೆ ಯಲ್ಲಮ್ಮ ದೇವಿ ದರ್ಶನಕ್ಕೆ ನಿಷೇಧವಿದೆ.

ಇದನ್ನೂ ಓದಿ: ಸವದತ್ತಿ ಯಲ್ಲಮ್ಮನ ಕ್ಷೇತ್ರದ ಭಕ್ತಾದಿಗಳ ಬಹುದಿನಗಳ ಬೇಡಿಕೆಗೆ ಸ್ಪಂದನೆ; ಸಾರಿಗೆ ಇಲಾಖೆಯಿಂದ ಬಸ್ ವ್ಯವಸ್ಥೆ

ಇದನ್ನೂ ಓದಿ: Temple Tour: ಸಂತಾನ ಭಾಗ್ಯ ಕರುಣಿಸುವ ತಾಯಿ ಸವದತ್ತಿ ಯಲ್ಲಮ್ಮ

ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಸೆಟ್ಟೇರಿತು ‘ಎಕ್ಕ’ ಸಿನಿಮಾ; ಖುಷಿ ಖುಷಿಯಲ್ಲಿ ಮಾತನಾಡಿದ ಯುವ ರಾಜ್​ಕುಮಾರ್
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಘಟಸರ್ಪಗಳಿರುವ ಹುತ್ತಕ್ಕೆ ಸಿಪಿ ಯೋಗೇಶ್ವರ್ ಕೈ ಹಾಕಿದ್ದಾರೆ: ಪುಟ್ಟರಾಜು
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಗೃಹ ಲಕ್ಷ್ಮಿ ಹಣದ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ಸಚಿವೆ ಹೆಬ್ಬಾಳ್ಕರ್​
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್​ಗೆ ತರುವಷ್ಟು ತಾಕತ್ತು ನಂಗಿಲ್ಲ: ಬಾಲಕೃಷ್ಣ
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಹೆಬ್ಬಾಳ್ಕರ್ ರಾಜೀನಾಮೆ ನೀಡಿ ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಲಿ: ಯತ್ನಾಳ್
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಮೋದಿ ವಿಡಿಯೋ; ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಅನಾವರಣ
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಆರ್​ಸಿಬಿಯ ಹಿಂದಿ ಖಾತೆ ವಿರುದ್ಧಕೆರಳಿದ ಕನ್ನಡ ಪರ ಸಂಘಟನೆಗಳು
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಕಾಂಗ್ರೆಸ್​ಗೆ ರಾಜ್ಯದಲ್ಲಿ ಮಹಾರಾಷ್ಟ್ರದಂಥ ಸ್ಥಿತಿ ಎದುರಾಗಲಿದೆ: ಯತ್ನಾಳ್
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
ಮೋಕ್ಷಿತಾ ಬಗ್ಗೆ ಉಗ್ರಂ ಮಂಜು ಗೇಲಿ, ಥೂ ಎಂದ ‘ಮಹರಾಣಿ’
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್
‘ಮಂಜು ರೋಗಿಷ್ಟ ರಾಜ’: ಬಿಗ್ ಬಾಸ್ ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ರಜತ್