Hassan Politics: ಹಾಸನಕ್ಕೆ ಭವಾನಿ ರೇವಣ್ಣ ಅನಿವಾರ್ಯ ಅಲ್ಲ; ಹೆಚ್​ಡಿ ಕುಮಾರಸ್ವಾಮಿ

ಹಾಸನ ಕ್ಷೇತ್ರದಲ್ಲಿ ಭವಾನಿ ರೇವಣ್ಣ ನಮಗೆ ಅನಿವಾರ್ಯ ಅಲ್ಲ. ಪಕ್ಷದ ಚೌಕಟ್ಟಿನಲ್ಲಿ ನಾವು ಎಲ್ಲವನ್ನು ಚರ್ಚಿಸುತ್ತೇವೆ. ಹಾಸನ ಕ್ಷೇತ್ರದ ವಿಚಾರದಲ್ಲಿ ಗೊಂದಲಕ್ಕೆ ಎಡೆಮಾಡಿ ಕೊಳ್ಳುವುದಿಲ್ಲ.

Hassan Politics: ಹಾಸನಕ್ಕೆ ಭವಾನಿ ರೇವಣ್ಣ ಅನಿವಾರ್ಯ ಅಲ್ಲ; ಹೆಚ್​ಡಿ ಕುಮಾರಸ್ವಾಮಿ
ಭವಾನಿ ರೇವಣ್ಣ ಮತ್ತು ಹೆಚ್ ಡಿ ಕುಮಾರಸ್ವಾಮಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 10, 2023 | 1:50 PM

ಬೆಳಗಾವಿ: ಹಾಸನದಿಂದ ಸ್ಪರ್ಧಿಸುವುದಾಗಿ ಹೆಚ್.ಡಿ. ರೇವಣ್ಣ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನದಲ್ಲಿ ಗೆಲ್ಲುವ ದೃಷ್ಟಿಯಿಂದ ಏನೂ ತೀರ್ಮಾನ ಮಾಡಬೇಕು ಅಂತಾ ಈಗಾಗಲೇ ಕುಳಿತು ಚರ್ಚೆ ಮಾಡಿದ್ದೇವೆ. ಮುಂದಿನ ಒಂದು ವಾರದಲ್ಲಿ ಹಾಸನದ ವಿಷಯದಲ್ಲಿ ಯಾವುದೇ ಗೊಂದಲಕ್ಕೆ ಎಡೆಮಾಡಿಕೊಡದೆ. ಎಲ್ಲ ಸುಗಮವಾದ ರೀತಿಯಲ್ಲಿ ತೀರ್ಮಾನಗಳು ಆಗುತ್ತವೆ. ಹಾಸನ ಕ್ಷೇತ್ರದಲ್ಲಿ ಭವಾನಿ ರೇವಣ್ಣ ನಮಗೆ ಅನಿವಾರ್ಯ ಅಲ್ಲ, ಪಕ್ಷದ ಚೌಕಟ್ಟಿನಲ್ಲಿ ನಾವು ಎಲ್ಲವನ್ನು ಚರ್ಚಿಸುತ್ತೇವೆ ಎಂದ ಕುಮಾರಸ್ವಾಮಿ ತಿಳಿಸಿದ್ದಾರೆ.

ಇನ್ನು ಬೆಳಗಾವಿಯಲ್ಲಿ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದಾರೆ. ರಾಜ್ಯದ 65 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದೇನೆ. ನಾಳೆ ರಾಯಭಾಗ, ಕುಡಚಿ ಸಭೆ ಬಳಿಕ ಅರಸೀಕೆರೆಗೆ ಹೋಗ್ತೇನೆ. ನಾಳೆ ಅರಸೀಕೆರೆ ಜೆಡಿಎಸ್​ ಅಭ್ಯರ್ಥಿಯನ್ನು ಘೋಷಿಸುತ್ತೇವೆ. ಫೆ.21ರಿಂದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದ ಹೆಚ್​ಡಿಕೆ ಮಾಹಿತಿ ನೀಡಿದರು.

ಉತ್ತರ ಕನ್ನಡ ಜಿಲ್ಲೆ 4 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಆಯ್ಕೆ ನಡೆಯಬೇಕಿದೆ. ವಿಶ್ರಾಂತಿ ತೆಗೆದುಕೊಳ್ಳದೇ ನಾಡಿನ ಜನರ ನಡುವೆ ಇರಲು ಬಯಸುತ್ತೇನೆ. ಕಲಬುರಗಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಖರ್ಗೆಗೆ ಮೋದಿ ಪ್ರಶ್ನಿಸಿದ್ದಾರೆ. ಹಾಗಾದ್ರೆ ರಾಜ್ಯ ಬಿಜೆಪಿ ಸರ್ಕಾರದ ಕೊಡುಗೆ ಏನೆಂದು ಸಿಎಂ ಹೇಳಬೇಕಿದೆ. ರಾಜ್ಯದಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಪಂಚರತ್ನ ರಥಯಾತ್ರೆಯ ಯೋಜನೆಗಳನ್ನು ನಾವು ಜಾರಿಗೊಳಿಸುತ್ತೇವೆ. ಎಲ್ಲ ಕ್ಷೇತ್ರಗಳಲ್ಲೂ ನನಗೆ ಉತ್ತಮ ಸ್ಪಂದನೆ ಸಿಗ್ತಿದೆ. ನಾಡಿನ ಜನರ ಕಷ್ಟವನ್ನು ಬಗೆಹರಿಸಲು ನಮಗೆ ಬಹುಮತ ನೀಡಲಿ. ಜೆಡಿಎಸ್​ 123 ಸ್ಥಾನಗಳನ್ನು ಗುರಿ ತಲುಪಲು ಶ್ರಮ ಹಾಕುತ್ತಿದ್ದೇನೆ. ಕೊನೆಯ ಕ್ಷಣದಲ್ಲಿ ಕೂಡ ಅಭ್ಯರ್ಥಿಗಳ ಬದಲಾವಣೆ ಆಗಬಹುದು. ಜನರು ಎಲ್ಲಿ ಹೆಚ್ಚು ಕಾಳಜಿ, ಪ್ರೀತಿ ತೋರಿಸುತ್ತಾರೆ ಆ ಕ್ಷೇತ್ರದಲ್ಲಿ ಬದಲಾವಣೆಯಾಗಲಿದೆ. ಗೆಲುವಿನ ಸಮೀಪವಿರುವ ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳಿಗೆ ಟಿಕೆಟ್ ನೀಡ್ತೇವೆ. ಜನತಾ ಜಲಧಾರೆ, ಪಂಚರತ್ನ ರಥಯಾತ್ರೆಯಿಂದ ಬಿಜೆಪಿ, ಕಾಂಗ್ರೆಸ್​ಗೆ ಭಯ ಶುರುವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ರು.

ಇದನ್ನೂ ಓದಿ: Hassan Politics: ಹಾಸನ ಟಿಕೆಟ್ ದೇವೇಗೌಡರು ಡಿಸೈಡ್ ಮಾಡ್ತಾರೆ; ಎಚ್​ಡಿಕೆಗೆ ಟಾಂಗ್​ ಕೊಟ್ಟ ಸೂರಜ್ ರೇವಣ್ಣ

ಹಾಸನ ಕ್ಷೇತ್ರದ ವಿಚಾರದಲ್ಲಿ ಗೊಂದಲಕ್ಕೆ ಎಡೆಮಾಡಿ ಕೊಳ್ಳುವುದಿಲ್ಲ

ಬಿಜೆಪಿ ಕೆಟ್ಟ ಆಡಳಿತದ ಬಗ್ಗೆ ಸಾಕ್ಷಿ ಸಮೇತ ಜನರ ಮುಂದೆ ಮಾತಾಡ್ತೇನೆ. ಸಮಗ್ರವಾದ ವಿಷಯಗಳನ್ನು ಇಟ್ಟುಕೊಂಡೇ ನಾನು ಮಾತನಾಡುತ್ತೇನೆ. 14 ವರ್ಷಗಳಿಂದ ಕಳಸಾ ಬಂಡೂರಿ, ಮಹದಾತಿ ಯೋಜನೆ ನೆನೆಗುದಿಗೆ ಬಿದ್ದಿದೆ. ಬಿಜೆಪಿ ನಾಯಕರು ಯೋಜನೆಯಾಗಿದೆ ಅಂತಾ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಡಬಲ್ ಇಂಜಿನ್ ಅಲ್ಲ, ತ್ರಿಬಲ್ ಇಂಜಿನ್ ಸರ್ಕಾರದಿಂದ ಸಮಸ್ಯೆ ಆಗ್ತಿದೆ. ರಾಷ್ಟ್ರೀಯ ಪಕ್ಷಗಳಿಗೆ ಜನರ ಸಮಸ್ಯೆ ಬಗೆಹರಿಸುವುದು ಬೇಕಿಲ್ಲ. ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳಿಗೆ ಸಮಸ್ಯೆಗಳನ್ನು ಚರ್ಚೆಯಲ್ಲಿರಬೇಕು. ಹೊಳೆನರಸೀಪುರದಲ್ಲಿ ನಾವು ತೀರ್ಮಾನ ಮಾಡ್ತೀವಿ. ಹಾಸನ ಕ್ಷೇತ್ರದಲ್ಲಿ ಭವಾನಿ ರೇವಣ್ಣ ನಮಗೆ ಅನಿವಾರ್ಯ ಅಲ್ಲ. ಪಕ್ಷದ ಚೌಕಟ್ಟಿನಲ್ಲಿ ನಾವು ಎಲ್ಲವನ್ನು ಚರ್ಚಿಸುತ್ತೇವೆ. ಹಾಸನ ಕ್ಷೇತ್ರದ ವಿಚಾರದಲ್ಲಿ ಗೊಂದಲಕ್ಕೆ ಎಡೆಮಾಡಿ ಕೊಳ್ಳುವುದಿಲ್ಲ. ಎಲ್ಲವೂ ಸೂಸುತ್ರವಾಗಿ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳುತ್ತೇವೆ ಎಂದರು.

ಸಿಡಿಗಳ ಬಗ್ಗೆ ನಾನು ತಲೆಕೆಡಿಕೊಳ್ಳುವುದಿಲ್ಲ ಎಂದ ಕುಮಾರಸ್ವಾಮಿ

ಸಿಡಿ ಕಥೆ ಕಟ್ಟಿಕೊಂಡು ಏನ್ ಮಾಡ್ತಿರಿ, ಅವು ಇಟ್ಟುಕೊಂಡು ಏನ್ಮಾಡ್ತಿರಿ. ಜನರ ಸಮಸ್ಯೆ ಬಗೆಹರಿಸುವ ಕಡೆ ಜನಪ್ರತಿನಿಧಿಗಳ ಗಮನವಿರಲಿ. ಸಿಡಿ ಬಗ್ಗೆ ಚರ್ಚೆ ನಡೆವುದರಿಂದ ಯಾರಿಗೂ ಉಪಯೋಗವಿಲ್ಲ. ಸಿಡಿಯಿಂದ ಎರಡೂ ಮೂರು ದಿನ ಮನೋರಂಜನೆ ಸಿಗಬಹುದು ಅಷ್ಟೇ ಎಂದು ಹೆಚ್​ಡಿ ಕುಮಾರಸ್ವಾಮಿ ಸಿಡಿ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನಿರುದ್ಯೋಗಿ ಯುವಕರಿಗೆ ಹೆಚ್​.ಡಿ.ಕುಮಾರಸ್ವಾಮಿ ಕಿವಿಮಾತು

ಕುಟುಂಬ ರಾಜಕಾರಣ ಅನ್ನೋದು ಅಪ್ರಸ್ತುತ. ಜನತಾದಳ ಎಂಬುದು ನಾಯಕರನ್ನು ಸೃಷ್ಟಿಸುವ ಕಾರ್ಖಾನೆ. ನಾವು ತಯಾರಿ ಮಾಡಿ ಮಾರುಕಟ್ಟೆಗೆ ಬಿಡ್ತಾ ಇರುತ್ತೇವೆ. ಅವ ವ್ಯಾಪಾರ ಆಗ್ತಾ ಇರ್ತಾವೆ. ಜೆಡಿಎಸ್​ಗೆ 30-40 ಕ್ಷೇತ್ರಗಳಲ್ಲಿ ಸಮಸ್ಯೆ ಇದೆ. ಇನ್ನು ಆತ್ಮಹತ್ಯೆ ಮಾಡಿಕೊಳ್ಳುವುದು ಪರಿಹಾರ ಅಲ್ಲ. ಈ ಚುನಾವಣೆಯಲ್ಲಿ ಒಳ್ಳೆಯ ತೀರ್ಮಾನ ಮಾಡಿ. ನಾವು ಅಧಿಕಾರಕ್ಕೆ ಬಂದರೆ ನಿರುದ್ಯೋಗ ಸಮಸ್ಯೆ ಪರಿಹರಿಸುತ್ತೇವೆ ಎಂದು ಈ ವೇಳೆ ನಿರುದ್ಯೋಗಿ ಯುವಕರಿಗೆ ಹೆಚ್​.ಡಿ.ಕುಮಾರಸ್ವಾಮಿ ಕಿವಿಮಾತು ಹೇಳಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:42 pm, Fri, 10 February 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್