ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಬಿಗ್ ಶಾಕ್
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಆಘಾತವಾಗುವಂತಹ ಸನ್ನಿವೇಶ ಸೃಷ್ಟಿಯಾಗಿದೆ. ಲೋಕೋಪಯೋಗಿ ಇಲಾಖೆ ತಿನಿಸು ಕಟ್ಟೆಯಲ್ಲಿ ಪತ್ನಿಯ ಹೆಸರಿನಲ್ಲಿ ಮಳಿಗೆ ತೆರೆದು ಅಧಿಕಾರ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಇಬ್ಬರು ಸದಸ್ಯರ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ. ಬಿಜೆಪಿ ಶಾಸಕ ಅಭಯ ಪಾಟೀಲ್ ಆಪ್ತರ ಸದಸ್ಯತ್ವವೇ ರದ್ದಾಗಿರುವುದು ಗಮನಾರ್ಹ.

ಬೆಳಗಾವಿ, ಫೆಬ್ರವರಿ 11: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಲಾಗಿದೆ. ಬಿಜೆಪಿ ಶಾಸಕ ಅಭಯ ಪಾಟೀಲ್ ಆಪ್ತ ಸದಸ್ಯರ ಸದಸ್ಯತ್ವವೇ ರದ್ದಾಗಿದೆ. ಸದಸ್ಯತ್ವ ರದ್ದು ಮಾಡಿ ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟಣ್ಣವರ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ದಕ್ಷಿಣ ಮತಕ್ಷೇತ್ರದ ವಾರ್ಡ್ ನಂಬರ 41 ರ ಸದಸ್ಯ ಮಂಗೇಶ್ ಪವಾರ್, ವಾರ್ಡ್ ನಂಬರ್ 23ರ ಸದಸ್ಯ ಜಯಂತ್ ಜಾಧವ ಅವರೇ ಸದಸ್ಯತ್ವ ರದ್ದಾದವರು.
ಬಿಜೆಪಿ ಸದಸ್ಯರ ಸದಸ್ಯತ್ವ ರದ್ದತಿಗೆ ಕಾರಣವೇನು?
ಲೋಕೋಪಯೋಗಿ ಇಲಾಖೆ ನಿರ್ಮಿಸಿದ್ದ ತಿನಿಸುಕಟ್ಟೆಯಲ್ಲಿ ಬಿಜೆಪಿ ಸದಸ್ಯರು ಪತ್ನಿಯರ ಹೆಸರಿನಲ್ಲಿ ಮಳಿಗೆ ಪಡೆದಿದ್ದರು ಎನ್ನಲಾಗಿದೆ. ಪತ್ನಿ ನೀತಾ ಹೆಸರಿನಲ್ಲಿ ಮಂಗೇಶ್ ಪವಾರ, ಪತ್ನಿ ಸೋನಾಲಿ ಹೆಸರಿನಲ್ಲಿ ಜಯಂತ್ ಜಾಧವ ಮಳಿಗೆ ಪಡೆದಿದ್ದರು. ತಮ್ಮ ಪ್ರಭಾವ ಬೀರಿ ಪತ್ನಿಯರ ಹೆಸರಿನಲ್ಲಿ ಮಳಿಗೆ ಪಡೆದಿದ್ದಾರೆಂದು ಸುಜೀತ್ ಮುಳಗುಂದ ದೂರು ನೀಡಿದ್ದರು. ಈ ದೂರು ಆಧರಿಸಿ ಸುಧೀರ್ಘ ವಿಚಾರಣೆ ನಡೆಸಿ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು ಮಾಡಲಾಗಿದೆ.
ಮನೆಯಿಂದಲೇ ಕಾರ್ಯಾರಂಭ ಮಾಡಿದ ಹೆಬ್ಬಾಳ್ಕರ್
ಇತ್ತೀಚಗೆಎ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇದೀಗ ಮನೆಯಿಂದಲೇ ಕಾರ್ಯ ನಿರ್ವಹಣೆ ಆರಂಭಿಸಿದ್ದಾರೆ. ಕರ್ನಾಟಕವಬಜೆಟ್ ಹಿನ್ನೆಲೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಮಗ ರಾಹುಲ್ ರಾಜಕೀಯಕ್ಕೆ: ಯುವ ಕಾಂಗ್ರೆಸ್ ಘಟಕಕ್ಕೆ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ
ಸದ್ಯ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಅವರು ಸಿಎಂ ಸಿದ್ದರಾಮಯ್ಯ ಜತೆ ಸೋಮವಾರ ವಿಡಿಯೋ ಸಂವಾದದ ಮೂಲಕ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದರು. ಹೆಬ್ಬಾಳ್ಕರ್ ಬೆಳಗಾವಿಯ ಕುವೆಂಪು ನಗರದಲ್ಲಿರುವ ಗೃಹ ಕಚೇರಿಯಲ್ಲೇ ಇಲಾಖೆ ಕಾರ್ಯ ನಿಭಾಯಿಸುತ್ತಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:07 am, Tue, 11 February 25