ಬೆಳಗಾವಿ ಉದ್ಯಮಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಉದ್ಯಮಿ ವಿರುದ್ಧ 2 ಕೋಟಿ ವಂಚನೆ ಆರೋಪ

ಉದ್ಯಮಿ ರವಿಕಿರಣ್ ಭಟ್ ಬಿಟ್ ಕಾಯಿನ್ನಲ್ಲಿ ಹೂಡಿಕೆ ಮಾಡಿ ಹಣ ದ್ವಿಗುಣ ಮಾಡಿಕೊಡುತ್ತೇನೆ ಅಂತಾ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಮಹಾರಾಷ್ಟ್ರದ ಸಾಂಗ್ಲಿಯ ಕರಮಾಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಬೆಳಗಾವಿ ಉದ್ಯಮಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಉದ್ಯಮಿ ವಿರುದ್ಧ 2 ಕೋಟಿ ವಂಚನೆ ಆರೋಪ
ಉದ್ಯಮಿ ರವಿಕಿರಣ್ ಭಟ್, ಖಾಸಗಿ ಬ್ಯಾಂಕ್​ನ ಮಾಜಿ ಮ್ಯಾನೇಜರ್
Follow us
TV9 Web
| Updated By: sandhya thejappa

Updated on:Feb 02, 2022 | 8:47 AM

ಬೆಳಗಾವಿ: ಜಿಲ್ಲೆಯಲ್ಲಿ ನಡೆದ ಉದ್ಯಮಿ ಕಿಡ್ನಾಪ್ (Kidnap) ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಿಡ್ನಾಪ್ ಪ್ರಕರಣಕ್ಕೂ, ಬಿಟ್ ಕಾಯಿನ್ (bitcoin) ದಂಧೆಗೂ ಸಂಬಂಧವಿದೆಯಾ ಎಂಬ ಅನುಮಾನ ಮೂಡಿದ್ದು, ಕಿಡ್ನಾಪ್ ಆಗಿದ್ದ ಉದ್ಯಮಿ ರವಿಕಿರಣ್ ಭಟ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಮಹಾರಾಷ್ಟ್ರದ (Maharashtra) ಸಾಂಗ್ಲಿಯ ಖಾಸಗಿ ಬ್ಯಾಂಕ್​ನ ಮಾಜಿ ಮ್ಯಾನೇಜರ್ ಆರೋಪಿಸಿ, ಎರಡು ಕೋಟಿ ರೂಪಾಯಿ ಪಡೆದು ವಂಚನೆ ಮಾಡಿದ್ದಾರೆ ಎಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಉದ್ಯಮಿ ರವಿಕಿರಣ್ ಭಟ್ ಬಿಟ್ ಕಾಯಿನ್​ನಲ್ಲಿ ಹೂಡಿಕೆ ಮಾಡಿ ಹಣ ದ್ವಿಗುಣ ಮಾಡಿಕೊಡುತ್ತೇನೆ ಅಂತಾ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಮಹಾರಾಷ್ಟ್ರದ ಸಾಂಗ್ಲಿಯ ಕರಮಾಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಲ್ಲದೇ ಕಿಡ್ನಾಪ್ ಮಾಡಿದ್ದ ಪ್ರಮುಖ ಆರೋಪಿಗಳು ಸಾಂಗ್ಲಿ ಮೂಲದವರು. ಆದರೆ ಘಟನೆ ನಡೆದು ಹದಿನೈದು ದಿನ ಕಳೆದರೂ ಆರೋಪಿಗಳ ಸುಳಿವಿಲ್ಲ.

ಸಾಂಗ್ಲಿಯ ಶಹನವಾಜ್ ಚಮನಶೇಖ್, ಅಜ್ಜು ಚಮನಶೇಖ್, ಅಭಿಷೇಕ ಶೆಟ್ಟಿ ಹಾಗೂ ಬೆಳಗಾವಿಯ ಯೂನೂಸ್ ಖಾಜಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪ್ರಕರಣದ ಪ್ರಮುಖ ಆರೋಪಿ ಶಹನವಾಜ್ ಹಾಗೂ ಉದ್ಯಮಿ ರವಿಕಿರಣ್ ಭಟ್ ಇಬ್ಬರೂ ಪರಿಚಯಸ್ಥರು. ರವಿಕಿರಣ್​ಗೆ ರಾಜ್ಯದಲ್ಲಿ ಪ್ರಭಾವಿ ನಾಯಕರ ಸಂಪರ್ಕ ಇರುವ ಹಿನ್ನೆಲೆ ಪೊಲೀಸರು ರವಿಕಿರಣ್ ಭಟ್ನ ವಿಚಾರಣೆ ಮಾಡಿಲ್ಲ ಎಂದು ಹೇಳಲಾಗುತ್ತಿದೆ. ಸದ್ಯ ಉದ್ಯಮಿ ರವಿಕಿರಣ್ ಭಟ್ ಅಪಹರಣ ಪ್ರಕರಣ ಸುತ್ತ ಹಲವು ಸಂಶಯಗಳು ಮೂಡಿವೆ.

ಮೂರು ಕೋಟಿಗೆ ಬೇಡಿಕೆ: ಆರೋಪಿಗಳು ಬೆಳಗಾವಿ ಕೆಎಲ್ಇ ಆಸ್ಪತ್ರೆ ಬಳಿ ಕಾರನ್ನು ತಡೆದಿದ್ದಾರೆ. ಬೈಕ್​ಗೆ ಕಾರು ಟಚ್ ಮಾಡಿ ಎಸ್ಕೇಪ್ ಆಗುತ್ತಿದ್ದೀಯ ಅಂತಾ ನಾಲ್ವರು ವಾಗ್ವಾದ ನಡೆಸಿದ್ದರು. ರವಿಕಿರಣ್ ಜತೆ ಜಗಳವಾಡಿ ಮೂವರು ಕಾರಿನಲ್ಲಿ ಹತ್ತಿದ್ದರು. ಬಳಿಕ ಹಿಂಬದಿಯಿಂದ ರಿವಾಲ್ವರ್ ತೋರಿಸಿ ನಾವು ಹೇಳಿದ ಕಡೆ ಕಾರು ಚಾಲನೆ ಮಾಡುವಂತೆ ಬೆದರಿಕೆ ಹಾಕಿದ್ದಾರೆ. ಅಲ್ಲಿಂದ ನೇರವಾಗಿ ಖಾನಾಪುರ ಬಳಿ ಕೋಳಿ ಫಾರ್ಮ್​ಗೆ ಕರೆದೊಯ್ದಿದ್ದಾರೆ.

ಬಂಧಿತರು ರವಿಕಿರಣ್ನಣ್​ನ ಕುರ್ಚಿ ಮೇಲೆ ಕೂರಿಸಿ ಕೈ, ಕಾಲು ಕಟ್ಟಿ ಹೊಡೆದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲು 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಬಳಿಕ ಆತನ ಬಳಿ ಇದ್ದ 55 ಸಾವಿರ ನಗದು, ಆ್ಯಪಲ್ ವಾಚ್, ಮೊಬೈಲ್, ಚಿನ್ನ ಹಾಗೂ ಬೆಳ್ಳಿಯ ನಾಣ್ಯ, 75 ಸಾವಿರ ಮೌಲ್ಯದ ಯುಎಸ್ ಕರೆನ್ಸಿ ಕಿತ್ತುಕೊಂಡಿದ್ದರು. ಬಳಿಕ ರವಿಕಿರಣ್ ಮೊಬೈಲ್​ನಿಂದ ಪತ್ನಿಗೆ ಕರೆ ಮಾಡಿ 3 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ

ಕೈ ತುಂಬ ಸಂಬಳ ತರುವ ಕೆಲಸ ಬಿಟ್ಟು ಒಂದು ವರ್ಷದಲ್ಲಿ ಏಕಾಂಗಿಯಾಗಿ ಬಾವಿ ತೋಡಿ ಬಂಗಾರ ಬೆಳೆದ ಎಂಟೆಕ್ ಪದವೀಧರ!

Horoscope Today- ದಿನ ಭವಿಷ್ಯ; ಈ ರಾಶಿಯವರು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ನೀವು ಉತ್ತಮ ಲಾಭ ಗಳಿಸುವಿರಿ

Published On - 8:43 am, Wed, 2 February 22

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ