AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬಿದ್ದ ಬೈಕ್​: ಕೊಚ್ಚಿಹೋದ ಇಬ್ಬರು ಸವಾರರು

ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬೈಕ್​ ಬಿದ್ದ ಪರಿಣಾಮ ಇಬ್ಬರು ಸವಾರರು ಕೊಚ್ಚಿಹೋಗಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಬಳಿ ನಡೆದಿದೆ.

ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬಿದ್ದ ಬೈಕ್​: ಕೊಚ್ಚಿಹೋದ ಇಬ್ಬರು ಸವಾರರು
ಘಟಪ್ರಭಾ ನದಿ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on: Jul 10, 2023 | 6:48 PM

Share

ಬೆಳಗಾವಿ: ಬೈಕ್​​ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ (Ghataprabha river) ಬಿದ್ದು ಇಬ್ಬರು ಸವಾರರು ಕೊಚ್ಚಿಹೋಗಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಬಳಿ ನಡೆದಿದೆ. ಅವರಾದಿ ಗ್ರಾಮದ ಚನ್ನಪ್ಪ(30), ದುರ್ಗವ್ವ(25) ಕೊಚ್ಚಿಹೋದವರು. ಅವರಾದಿ ಗ್ರಾಮದಿಂದ ಮಹಾಲಿಂಗಪುರಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಚನ್ನಪ್ಪ, ದುರ್ಗವ್ವಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶೋಧ ಕಾರ್ಯ ಆರಂಭಿಸಿದ್ದಾರೆ. ಕುಲಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಘಟಪ್ರಭಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿದೆ.

ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ 

ಬೆಳಗಾವಿ: ಮಗಳಿಗೆ ನೇಣು ಬಿಗಿದು ತಾಯಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ದಿಂಡಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಮಹಾದೇವಿ ಇಂಚಲ (34), ಚಾಂದನಿ ಇಂಚಲ (7) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ಸಹೋದರ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಪುತ್ರಿಯ ಜೊತೆಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: 15 ಮಹಿಳೆಯರನ್ನು ಮದುವೆಯಾದ ವ್ಯಕ್ತಿ ಅರೆಸ್ಟ್; ವಯಸ್ಸಾದ ಅವಿವಾಹಿತ ಮಹಿಳೆಯರೇ ಈತನ ಟಾರ್ಗೆಟ್

ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಯೋಧನ ಜತೆಗೆ ವಿವಾಹವಾಗಿದ್ದು, ಏಳು ವರ್ಷಗಳ ಹಿಂದೆ ಪತಿ ಅಕಾಲಿಕ ನಿಧನ ಹೊಂದಿದ್ದಾರೆ. ದಿಂಡಲಕೊಪ್ಪದಲ್ಲಿರುವ ತವರು ಮನೆಯಲ್ಲಿ ಪುತ್ರಿ ಜತೆಗೆ ವಾಸವಿದ್ದರು. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಎರಡು‌ ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು

ಬೆಂಗಳೂರು: ಎರಡು‌ ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಮೃತಪಟ್ಟಿರುವಂತಹ ಘಟನೆ ಬೆಳ್ಳದೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕನ್ನಳ್ಳಿ ರಸ್ತೆಯಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ. ಆನಂದ್ (26) ಮೃತ ಬೈಕ್ ಸವಾರ. ಬಳ್ಳಾರಿ ಮೂಲದ ಆನಂದ್ ಖಾಸಗಿ ಕಂಪನಿಯಲ್ಲಿ ಹೌಸ್ ಕಿಂಪಿಗ್ ಕೆಲಸ ಮಾಡುತ್ತಿದ್ದ.

ಇದನ್ನೂ ಓದಿ: Hubballi News: ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಪತಿ

ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡಿಕ್ಕಿ ಪರಿಣಾಮ ಆನಂದ್ ವಾಹನ ಸಮೇತ ಕೆಳಗೆ ಬಿದ್ದಿದು ತಲೆಗೆ ಮತ್ತು ಮುಖಕ್ಕೆ ತ್ರೀವಗಾಯವಾಗಿದೆ. ಸ್ಥಳೀಯರು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದರು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಬೆಳ್ಳದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?