ಬೆಳಗಾವಿ: ಬೈಕ್ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ (Ghataprabha river) ಬಿದ್ದು ಇಬ್ಬರು ಸವಾರರು ಕೊಚ್ಚಿಹೋಗಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಬಳಿ ನಡೆದಿದೆ. ಅವರಾದಿ ಗ್ರಾಮದ ಚನ್ನಪ್ಪ(30), ದುರ್ಗವ್ವ(25) ಕೊಚ್ಚಿಹೋದವರು. ಅವರಾದಿ ಗ್ರಾಮದಿಂದ ಮಹಾಲಿಂಗಪುರಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಚನ್ನಪ್ಪ, ದುರ್ಗವ್ವಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಶೋಧ ಕಾರ್ಯ ಆರಂಭಿಸಿದ್ದಾರೆ. ಕುಲಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಘಟಪ್ರಭಾ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿದೆ.
ಬೆಳಗಾವಿ: ಮಗಳಿಗೆ ನೇಣು ಬಿಗಿದು ತಾಯಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ದಿಂಡಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಮಹಾದೇವಿ ಇಂಚಲ (34), ಚಾಂದನಿ ಇಂಚಲ (7) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ಸಹೋದರ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಪುತ್ರಿಯ ಜೊತೆಗೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತಪಡಿಸಲಾಗಿದೆ.
ಇದನ್ನೂ ಓದಿ: 15 ಮಹಿಳೆಯರನ್ನು ಮದುವೆಯಾದ ವ್ಯಕ್ತಿ ಅರೆಸ್ಟ್; ವಯಸ್ಸಾದ ಅವಿವಾಹಿತ ಮಹಿಳೆಯರೇ ಈತನ ಟಾರ್ಗೆಟ್
ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಯೋಧನ ಜತೆಗೆ ವಿವಾಹವಾಗಿದ್ದು, ಏಳು ವರ್ಷಗಳ ಹಿಂದೆ ಪತಿ ಅಕಾಲಿಕ ನಿಧನ ಹೊಂದಿದ್ದಾರೆ. ದಿಂಡಲಕೊಪ್ಪದಲ್ಲಿರುವ ತವರು ಮನೆಯಲ್ಲಿ ಪುತ್ರಿ ಜತೆಗೆ ವಾಸವಿದ್ದರು. ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರ ಮೃತಪಟ್ಟಿರುವಂತಹ ಘಟನೆ ಬೆಳ್ಳದೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕನ್ನಳ್ಳಿ ರಸ್ತೆಯಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ. ಆನಂದ್ (26) ಮೃತ ಬೈಕ್ ಸವಾರ. ಬಳ್ಳಾರಿ ಮೂಲದ ಆನಂದ್ ಖಾಸಗಿ ಕಂಪನಿಯಲ್ಲಿ ಹೌಸ್ ಕಿಂಪಿಗ್ ಕೆಲಸ ಮಾಡುತ್ತಿದ್ದ.
ಇದನ್ನೂ ಓದಿ: Hubballi News: ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಪತಿ
ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಡಿಕ್ಕಿ ಪರಿಣಾಮ ಆನಂದ್ ವಾಹನ ಸಮೇತ ಕೆಳಗೆ ಬಿದ್ದಿದು ತಲೆಗೆ ಮತ್ತು ಮುಖಕ್ಕೆ ತ್ರೀವಗಾಯವಾಗಿದೆ. ಸ್ಥಳೀಯರು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದರು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಬೆಳ್ಳದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.