ಬೆಳಗಾವಿ: ವಿದ್ಯುತ್ ತಂತಿ ತಗುಲಿ ಕಾಡೆಮ್ಮೆ ಸಾವಿಗೀಡಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಕಾಡೆಮ್ಮೆ ಸಾವನ್ನಪ್ಪಿದೆ ಎಂಬ ಆರೋಪ ಕೇಳಿ ಬಂದಿದ್ದು, ಹೆಸ್ಕಾಂ ಖಾನಾಪುರ ವಿಭಾಗದ ಮೂವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು, ಖಾನಾಪುರ ಹೆಸ್ಕಾಂ ಉಪವಿಭಾಗ ಎಇ, ಸೆಕ್ಷನ್ ಆಫೀಸರ್, ಲೈನ್‌ಮನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನೆಲಕ್ಕೆ ತಾಗುವಂತೆ ಹಾದು ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ ಸಂಭವಿಸಿದೆ. ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ 1972, ಕೋಡ್ ಆಫ್ ಕ್ರಿಮಿನಲ್ ಪ್ರೊಸಿಜರ್ ಆ್ಯಕ್ಟ್ ಅಡಿ ಕೇಸ್ ದಾಖಲಿಸಲಾಗಿದೆ. ಕಣಕುಂಬಿ ವಲಯ ಅರಣ್ಯ ಅಧಿಕಾರಿಗಳ ಕಚೇರಿಯಲ್ಲಿ ಕೇಸ್ ದಾಖಲಾಗಿದೆ.
ಈ ಹಿಂದೆಯೂ ಕೂಡ ಇಂತಹ ಅನೇಕ ಘಟನೆಗಳು ನಡೆದಿವೆ. ಅದರಲ್ಲೂ ಮುಖ್ಯವಾಗಿ ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿಗೆ ಬಂದು ವಿದ್ಯುತ್ ತಂತಿ ತಗುಲಿ ಸಾವೀಗಿಡಾಗುತ್ತಿರುವುದು ನಿಜಕ್ಕೂ ಇತ್ತೀಚೆಗೆ ಹೆಚ್ಚಾಗುತ್ತಲೆ ಇದೆ. ಇದಕ್ಕೆ ಸಾಕ್ಷಿಯಾಗಿ ನಿಂತಿವೆ ಈ ಹಿಂದೆ ನಡೆದ ಅನೇಕ ಘಟನೆಗಳು
ಚಿಕ್ಕಮಗಳೂರು: ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಗಾಳಿ ಪೂಜೆ ಗ್ರಾಮದಲ್ಲಿ ನಡೆದಿದೆ. ಸುಮಾರು 25 ವರ್ಷದ ಒಂಟಿ ಸಲಗ ಸಾವನ್ನಪ್ಪಿದೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸದ್ಯ ಜಮೀನಿನ ಮಾಲೀಕನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಜಮೀನಿಗೆ ಹಾಕಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು: ಮಾಲೀಕನನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ
ಹಾಸನದಲ್ಲಿ ನಿಲ್ಲದ ಕಾಡಾನೆ ಹಾವಳಿ; ಮನೆಯ ಕಾಂಪೌಂಡ್ ಬಳಿ ಬಂದು ಜನರನ್ನ ಅಟ್ಟಾಡಿಸಿದ ಒಂಟಿ ಆನೆಯ ಫೋಟೋಗಳಿವೆ