ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಚುನಾವಣಾಧಿಕಾರಿಗೆ ದೂರು

ವಾಯವ್ಯ ಪದವೀಧರ, ಶಿಕ್ಷಕರ ಕ್ಷೇತ್ರದಲ್ಲಿ ಹಣ ಹಂಚಿಕೆ ಆರೋಪದಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ವಿರುದ್ಧ ಬಿಜೆಪಿ ಕಾರ್ಯಕರ್ತರು ಬೆಳಗಾವಿಯ ಆರ್‌ಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ಆದಿತ್ಯಆಮ್ಲಾನ್ ಬಿಸ್ವಾಸ್‌ಗೆ ದೂರು ನೀಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ  ಚುನಾವಣಾಧಿಕಾರಿಗೆ ದೂರು
ಪ್ರಕಾಶ ಹುಕ್ಕೇರಿ Image Credit source: Deccan Chronicle
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 12, 2022 | 10:46 PM

ಬೆಳಗಾವಿ: ವಾಯವ್ಯ ಪದವೀಧರ, ಶಿಕ್ಷಕರ ಕ್ಷೇತ್ರದಲ್ಲಿ (MLC Election) ಹಣ ಹಂಚಿಕೆ ಆರೋಪದಡಿ ಕಾಂಗ್ರೆಸ್ (Congress) ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ (Praksah Hukkeri) ವಿರುದ್ಧ ಬಿಜೆಪಿ ಕಾರ್ಯಕರ್ತರು (BJP Activist) ಬೆಳಗಾವಿಯ ಆರ್‌ಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ಆದಿತ್ಯಆಮ್ಲಾನ್ ಬಿಸ್ವಾಸ್‌ಗೆ ದೂರು ನೀಡಿದ್ದಾರೆ. ಪ್ರಕಾಶ್ ಹುಕ್ಕೇರಿ ಅವರ ಮನೆ, ಸಕ್ಕರೆ ಕಾರ್ಖಾನೆಯನ್ನು ಪರಿಶೀಲಿಸಲು ಮನವಿ ಮಾಡಿದ್ದಾರೆ. ಈಸಂಬಂಧ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಸೇರಿದಂತೆ ಹಲವರು ಕರೆ ಮಾಡಿ ಮಾತನಾಡಿದ್ದಾರೆ. ನಮ್ಮ ಕೆಲಸ ಮಾಡ್ತಿದೀವಿ ಅಂತಾ ಹೇಳಿ ಕಾರ್ಯಕರ್ತರನ್ನ  ಆಮ್ಲಾನ್ ವಾಪಸ್ ಕಳುಹಿಸಿದ್ದಾರೆ. ನಾಳೆ ಪರಿಷತ್‌ನ ವಾಯವ್ಯ ಪದವೀಧರ, ಶಿಕ್ಷಕರ ಕ್ಷೇತ್ರದಲ್ಲಿ ಮತದಾನ ನೆಡೆಯಲಿದೆ.

ಪ್ರಕಾಶ್ ಹುಕ್ಕೇರಿ ವಿರುದ್ಧ ವಾಯುವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಆರೋಪ:

ವಾಯುವ್ಯ ಶಿಕ್ಷಕರ ಮತಕ್ಷೇತ್ರದ  ಚುನಾವಣೆ ಸಂಬಂಧ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಗೆ  ಮತ ಹಾಕುವಂತೆ ಪ್ರಕಾಶ್ ಹುಕ್ಕೇರಿ ಬೆಂಬಗಲಿಗರು ಇಂದು (ಜೂನ್​ 12) ರಂದು  ವಿಜಯಪುರದ ಸೆಟಲೈಟ್ ಬಸ್ ನಿಲ್ದಾಣದ ಬಳಿ ಹಣ ಹಂಚುವ ವೇಳೆ ಫ್ಲೈಂಗ್ ಸ್ಕ್ವಾಡ್ ರೆಡ್ ಹ್ಯಾಂಡ್ ಆಗಿ ಹಿಡಿದುಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ‌ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ ಹಣ ಹಂಚಿಕೆ ಬಗ್ಗೆ ನಮ್ಮ ಬಳಿ ದಾಖಲೆಗಳಿದ್ದು,ಜಿಲ್ಲಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಗಳಿಗೆ ದೂರು ನೀಡುತ್ತೇನೆ. ಪ್ರಕರಣದ ಬಗ್ಗೆ ಪೂರ್ಣ ತನಿಖೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ಅಪಘಾತಕ್ಕೀಡಾದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಖರ್ಚು ವೆಚ್ಚ ಭರಿಸಿ ಮಾನವೀಯತೆ ಮೆರೆದ ಸಂಸದ ಉಮೇಶ್ ಜಾಧವ್‌

ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಸೋಲಿನ ಭೀತಿ ಎದುರಿಸುತ್ತಿದ್ದಾರೆ. ಮಹಾರಾಷ್ಟ್ರ ಪಾಸಿಂಗ್ ಇರುವ ಕಾರಿನಲ್ಲಿ ಹತ್ತು ಸಾವಿರದಂತೆ ಪ್ಯಾಕೇಟ್ ನಲ್ಲಿ ಹಣವಿಟ್ಟು ಹಂಚಲಾಗುತ್ತಿತ್ತು. ಇದೊಂದೆ ವಾಹನ ಅಲ್ಲದೆ ಇನ್ನೂ ಹದಿನಾಲ್ಕು ಕಾರುಗಳು ಹೀಗೆ ಓಡಾಡುತ್ತಿವೆ.  ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಹಣ ಹಂಚುವ ಕೆಲಸ ಮಾಡುತ್ತಿದ್ದಾರೆ. ಚುನಾವಣಾ ಅಧಿಕಾರಿಗಳು ಇದೆಲ್ಲವನ್ನೂ ತಪಾಸಣೆ ಮಾಡಿ, ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಬಂಧಿಸಬೇಕು. ಯಾವುದೇ ವಾಹನದಲ್ಲಿ ಹಣ ಹಂಚಲು ಬಂದರೆ ಅದರ ವಿಡಿಯೋ ಮಾಡಿ ಕಳುಹಿಸಿ. ಯಾರಾದರೂ ಹಣದ ಆಮಿಷ ಒಡ್ಡಿದರೆ ಅಂತಹವರ ವಿರುದ್ಧ ದೂರು ಕೊಡಿ. ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಂದಾಜು ಹದಿನೇಳು ಲಕ್ಷಕ್ಕೂ ಅಧಿಕ ಹಣ ಆ ಕಾರಿನಲ್ಲಿದೆ ಎಂದು ಅರುಣ ಶಹಾಪುರ ಆರೋಪ ಮಾಡಿದ್ದಾರೆ. ಮಾಜಿ‌ ಸಚಿವ ಅಪ್ಪು ಪಟ್ಟಣಶೆಟ್ಟಿ, ಬಿಜೆಪಿ ಮಾಜಿ‌ ಜಿಲ್ಲಾಧ್ಯಕ್ಷ ಚಂದ್ರಶೇಖರ ಕವಟಗಿ ಅರುಣ ಶಹಾಪುರ ಅವರಿಗೆ ಬೆಂಬಲ ನೀಡಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:42 pm, Sun, 12 June 22

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ