ಚುನಾವಣಾ ಪ್ರಚಾರದ ರೋಡ್ ಶೋನಲ್ಲಿ ಕಣ್ಣೀರು ಹಾಕಿದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ

ಇಂದು ಬೆಳಗಾವಿ ಉಪಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಿದ ಸಂದರ್ಭದಲ್ಲಿಯೇ ಸಿಎಂ ಯಡಿಯೂರಪ್ಪ ಮೂಡಲಗಿ ಹೆಲಿಪ್ಯಾಡ್​ನಲ್ಲಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಬಳಿ ಕೆಲ ನಿಮಿಷಗಳ ಕಾಲ ಪ್ರತ್ಯೇಕವಾಗಿ ಚರ್ಚೆ ನಡೆಸಿದರು.

  • TV9 Web Team
  • Published On - 22:01 PM, 14 Apr 2021
ಚುನಾವಣಾ ಪ್ರಚಾರದ ರೋಡ್ ಶೋನಲ್ಲಿ ಕಣ್ಣೀರು ಹಾಕಿದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ
ಬಿಜೆಪಿ ಅಭ್ಯರ್ಥಿಯಾಗಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಿದ ದೃಶ್ಯ (ಸಂಗ್ರಹ ಚಿತ್ರ)

ಬೆಳಗಾವಿ: ಉಪಚುನಾವಣೆಯ ದಿನಾಂಕ ಹತ್ತಿರವಾಗುತ್ತಿದ್ದಂತೆಯೇ ಬೆಳಗಾವಿಯಲ್ಲಿ ಪ್ರಚಾರದ ಕಾವು ಜೋರಾಗಿದೆ. ಇಂದು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಪರ ಸಿಎಂ ಬಿ.ಎಸ್.ಯಡಿಯೂರಪ್ಪ ಗೋಕಾಕ್​ನಲ್ಲಿ ರೋಡ್ ಶೋ ನಡೆಸಿ ಪ್ರಚಾರ ನಡೆಸಿದರು. ಇದೇ ವೇಳೆ ಮಂಗಳಾ ಅಂಗಡಿ ಜನರನ್ನುದ್ದೇಶಿಸಿ ಮಾತನಾಡುವಾಗ ಕಣ್ಣೀರು ಸುರಿಸಿದರು. ಸಚಿವರಾದ ಜಗದೀಶ್ ಶೆಟ್ಟರ್, ‌ಉಮೇಶ್ ಕತ್ತಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮುಂತಾದ ನಾಯಕರು ಪ್ರಚಾರ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಆದರೆ ರೋಡ್ ಶೋನಲ್ಲಿ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ‌ ಗೈರಾಗಿದ್ದು, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ‌ ಉಪಸ್ಥಿತರಿದ್ದರು.

ಇದಕ್ಕೂ ಮೊದಲು ನಡೆದ ಇನ್ನೊಂದು ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಸುರೇಶ್ ಅಂಗಡಿ ನಿಮ್ಮೆಲ್ಲರ ಜೊತೆ ಯಾವ ರೀತಿ ಒಡನಾಟ ಇಟ್ಟುಕೊಂಡಿದ್ದಾರೆ ಎಂದು ನಾನು ನಿಮಗೆ ಹೇಳಬೇಕಾಗಿಲ್ಲ. ದಿವಂಗತ ಸುರೇಶ್ ಅಂಗಡಿಯವರ ಪತ್ನಿಗೆ ಟಿಕೆಟ್ ಕೊಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧಾರ ಮಾಡಿದ್ದಾರೆ. ನಮಗೆ ವೀರಶೈವ ಸಮಾಜ, ಕುರುಬ ಸಮಾಜ ಎಂದು ಯಾವುದೇ ಬೇಧಭಾವ ಇಲ್ಲ. ನೀವು ಕಾಗಿನೆಲೆಗೆ ಹೋಗಿ ನೊಡಿದರೆ ನಾವು ಮಾಡಿದ ಅಭಿವೃದ್ಧಿ ಕಾಣಿಸುತ್ತದೆ. ವೀರಶೈವ ಲಿಂಗಾಯತ ಮತ್ತು ಹಾಲುಮತ ಸಮಾಜಕ್ಕೆ ಹಿಂದೆಯೂ ಅಭಿವೃದ್ಧಿ ಕೆಲಸ ಮಾಡಿದ್ದೇನೆ, ಇಂದಿಗೂ ಮಾಡುತ್ತಿದ್ದೇನೆ. ಮುಂದಿನ ಎರಡೂವರೆ ವರ್ಷ ಕೂಡಾ ಮಾಡುತ್ತೇನೆ ಎಂದು ಹೇಳಿದರು.

ಇಂದು ಬೆಳಗಾವಿ ಉಪಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಿದ ಸಂದರ್ಭದಲ್ಲಿಯೇ ಸಿಎಂ ಯಡಿಯೂರಪ್ಪ ಮೂಡಲಗಿ ಹೆಲಿಪ್ಯಾಡ್​ನಲ್ಲಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಬಳಿ ಕೆಲ ನಿಮಿಷಗಳ ಕಾಲ ಪ್ರತ್ಯೇಕವಾಗಿ ಚರ್ಚೆ ನಡೆಸಿದರು.

ಶಿವಸೇನೆಯಿಂದಲೂ ರೋಡ್ ಶೋ
ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಅಭ್ಯರ್ಥಿ ಶುಭಂ ಶಳಕೆ ಪರ ಶಿವಸೇನೆಯ ವಕ್ತಾರ, ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಬುಧವಾರ (ಏಪ್ರಿಲ್ 14) ರೋಡ್​ ಶೋ ನಡೆಸಿ ಮತಯಾಚಿಸಿದರು. ಬೆಳಗಾವಿಯ ಶಿವಾಜಿ ವೃತ್ತದಿಂದ ಮರಾಠ ಚೌಕ್​ವರೆಗೆ ರಾವುತ್ ರೋಡ್ ಶೋ ನಡೆಯಿತು. ರೋಡ್ ಶೋದಲ್ಲಿ ಎಂಇಎಸ್, ಶಿವಸೇನೆ ಕಾರ್ಯಕರ್ತರು ಭಾಗವಹಿಸಿದ್ದರು.

ಇದಕ್ಕೂ ಮುನ್ನ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ರಾಜ್ಯಸಭಾ ಸದಸ್ಯ, ಶಿವಸೇನೆ ವಕ್ತಾರ ಸಂಜಯ್ ರಾವುತ್ ಆಗಮಿಸಿದಾಗ ಕೆಲ ಕಿಡಿಗೇಡಿಗಳು ನಾಡವಿರೋಧಿ ಘೋಷಣೆಗಳನ್ನು ಕೂಗಿದ್ದರು. ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾವುತ್, ಎಂಇಎಸ್ ಅಭ್ಯರ್ಥಿ ಶುಭಂ ಸುಳಕೆ ಪರ ಪ್ರಚಾರಕ್ಕೆ ನಾನು ಬೆಳಗಾವಿಗೆ ಬಂದಿದ್ದೇನೆ. ಎಂಇಎಸ್, ಶಿವಸೇನೆ ಕಾರ್ಯಕರ್ತರು ಒಟ್ಟಾಗಿ ಶುಭಂ ಶಳಕೆ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಬೆಳಗಾವಿ ಉಪಚುನಾವಣೆ ಬಗ್ಗೆ ಮಹಾರಾಷ್ಟ್ರದಲ್ಲಿ ವ್ಯಾಪಕ ಕುತೂಹಲ: ಶಿವಸೇನೆ ವಕ್ತಾರ ಸಂಜಯ್ ರಾವುತ

ಬೆಳಗಾವಿಯಲ್ಲಿ ಮಂಗಳಾ ಅಂಗಡಿಗೆ ಪ್ರಚಾರ ವೇಳೆ ಮುದ್ದು ಹುಡುಗಿಯಿಂದ ಹೂ ಕೊಟ್ಟು ವಿಷ್‌