AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಖಾಸಗಿ ಹೊಟೇಲ್​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ; ರಮೇಶ್ ಜಾರಕಿಹೊಳಿ ಗೈರು

ರಮೇಶ್ ಜಾರಕಿಹೊಳಿ ಮಾತ್ರವಲ್ಲದೆ, ಸರ್ಕಾರಿ ಮುಖ್ಯಸಚೇತಕ ಮಹಾಂತೇಶ್ ಕವಟಗಿಮಠ ಕೂಡ ಗೈರು ಹಾಜರಾಗಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ಗೈರು ಹಾಜರಾಗಿದ್ದಾರೆ ಎಂದು ಹೇಳಲಾಗಿದೆ.

ಬೆಳಗಾವಿ: ಖಾಸಗಿ ಹೊಟೇಲ್​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ; ರಮೇಶ್ ಜಾರಕಿಹೊಳಿ ಗೈರು
ಬಿಜೆಪಿ (ಪ್ರಾತಿನಿಧಿಕ ಚಿತ್ರ)
TV9 Web
| Updated By: ganapathi bhat|

Updated on:Dec 15, 2021 | 11:24 PM

Share

ಬೆಳಗಾವಿ: ನಗರದ ಕಾಕತಿಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಸಭೆಯಲ್ಲಿ ಭಾಗಿ ಆಗಿದ್ದಾರೆ.

ಬಿಎಲ್​ಪಿ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ, ಶೇಕಡಾ 40 ಕಮಿಷನ್ ಆರೋಪ, ಚುನಾವಣೆ ಫಲಿತಾಂಶ ಪರಾಮರ್ಶೆ, ಬೆಳಗಾವಿ ಪರಿಷತ್​​ ಚುನಾವಣೆ ಸೋಲಿನ ಆತ್ಮಾವಲೋಕನ ಕೈಗೊಳ್ಳಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಸಭೆಗೆ ಬಾಲಚಂದ್ರ ಜಾರಕಿಹೊಳಿ ಹಾಜರಾಗಿದ್ದಾರೆ. ಆದರೆ, ರಮೇಶ್ ಜಾರಕಿಹೊಳಿ ಗೈರಾಗಿದ್ದಾರೆ ಎಂದು ತಿಳಿದುಬಂದಿದೆ. ರಮೇಶ್ ಜಾರಕಿಹೊಳಿ ಮಾತ್ರವಲ್ಲದೆ, ಸರ್ಕಾರಿ ಮುಖ್ಯಸಚೇತಕ ಮಹಾಂತೇಶ್ ಕವಟಗಿಮಠ ಕೂಡ ಗೈರು ಹಾಜರಾಗಿದ್ದಾರೆ. ವಿಧಾನಪರಿಷತ್ ಚುನಾವಣೆಯಲ್ಲಿ ಸೋಲಿನ ಹಿನ್ನೆಲೆಯಲ್ಲಿ ಗೈರು ಹಾಜರಾಗಿದ್ದಾರೆ ಎಂದು ಹೇಳಲಾಗಿದೆ.

ಬೆಳಗಾವಿಯ ಖಾಸಗಿ ಹೋಟೆಲ್​ನಲ್ಲಿ ಬಿಎಲ್​ಪಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಸದನದಲ್ಲಿ ಚರ್ಚಿಸಬೇಕಾದ ವಿಷಯಗಳ ಚರ್ಚೆ ನಡೆಸಲಾಗಿದೆ ಎಂದು ಮಾಹಿತಿ ದೊರಕಿದೆ. ಸಭೆ ಆರಂಭದಲ್ಲಿ ರಾಜ್ಯದಲ್ಲಿನ ಅತಿವೃಷ್ಟಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ಮಳೆಯಿಂದಾಗಿ ಸಾಕಷ್ಟು ಸಮಸ್ಯೆ ಆಗಿದೆ, ಬೆಳೆ ಕೂಡ ನಷ್ಟ ಆಗಿದೆ. ಸಚಿವ ಅಶೋಕ್ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಸರ್ಕಾರ ಕೂಡ ಅಗತ್ಯ ಪರಿಹಾರ ಕಾರ್ಯಕ್ರಮ ಮಾಡಿದೆ. 2 ವರ್ಷಗಳ ನಂತರ ಬೆಳಗಾವಿಯಲ್ಲಿ ಅಧಿವೇಶನ ಆಗುತ್ತಿದೆ. ಈ ಅಧಿವೇಶನದಲ್ಲಿ ನಾವೆಲ್ಲ ವಿಪಕ್ಷಗಳ ವಿರುದ್ಧ ನಿಲ್ಲಬೇಕು ಎಂದು ಸಭೆಯಲ್ಲಿ ಶಾಸಕರಿಗೆ ಸಿಎಂ ಬೊಮ್ಮಾಯಿ ಕರೆ ನೀಡಿದ್ದಾರೆ ಎಂದು ಮಾಹಿತಿ ಲಭಿಸಿದೆ.

ಸಭೆಯಲ್ಲಿ ಕ್ಷೇತ್ರಗಳಿಗೆ ಅನುದಾನ ಹಾಗೂ ಸದನಕ್ಕೆ ಹಾಜರಾತಿ, ಮತಾಂತರ ನಿಷೇಧ ಕಾಯ್ದೆ ವಿಚಾರಗಳ ಕುರಿತು ಚರ್ಚೆ ಮಾಡಲಾಗಿದೆ. ಅನುದಾನ ಬೇಕೆಂಬ ಬೇಡಿಕೆಯನ್ನು ಕೆಲ ಶಾಸಕರು ಮುಂದಿಟ್ಟಿದ್ದಾರೆ. ಮತಾಂತರ ನಿಷೇಧ ಕಾಯ್ದೆಯ ಕರಡು ಸಿದ್ಧವಾಗಿದೆ. ಇನ್ನಷ್ಟು ಅಂತಿಮಗೊಳಿಸುವುದು ಬಾಕಿ ಇದೆ ಎಂದು ಸಿಎಂ ಬೊಮ್ಮಾಯಿ ಸಭೆ ಬಳಿಕ ಹೇಳಿದ್ದಾರೆ.

ಬೆಳಗಾವಿ ಪರಿಷತ್​ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಬಿಎಲ್​​ಪಿ ಸಭೆಯಲ್ಲಿ ಪರಿಷತ್ ಫಲಿತಾಂಶದ ಬಗ್ಗೆ ಚರ್ಚೆ ಮಾಡಲಾಗಿದೆ. ಬೆಳಗಾವಿಯಲ್ಲಿ ನಾವು ಒಂದೇ ‌ಅಭ್ಯರ್ಥಿ ಕಣಕ್ಕಿಳಿಸಿದ್ದೆವು. ಬೆಳಗಾವಿಯಲ್ಲಿ ನಾವು ಗೆಲ್ಲಬೇಕಾಗಿತ್ತು ಎಂದು ಬೊಮ್ಮಾಯಿ ಹೇಳಿದ್ದಾರೆ. ಸೋಲಿನ ಬಗ್ಗೆ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು‌ ಎಂದು ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಕೆಲವು ಹಿರಿಯ ಅಧಿಕಾರಿಗಳನ್ನು ಬದಲಾವಣೆ ಮಾಡಿ. ಪ್ರಮುಖ ಇಲಾಖೆಗಳ ಉನ್ನತ ಅಧಿಕಾರಿಗಳ ಬದಲಾವಣೆ ಮಾಡಿ ಎಂದು ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ‌ಯತ್ನಾಳ್ ಆಗ್ರಹ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಪದೇಪದೆ ಸಿಎಂ ಬದಲಾವಣೆ ಮಾತು ಏಕೆ ಕೇಳಿ ಬರುತ್ತಿದೆ? ಹೀಗಾದರೆ ಸರ್ಕಾರಕ್ಕೆ ಸ್ಥಿರತೆ ಇರುವುದಿಲ್ಲ. ಅಧಿಕಾರಿಗಳು ಕೂಡ ಆಗ ಮಾತು ಕೇಳುವುದಿಲ್ಲ. ಮೊದಲು ಅದಕ್ಕೆ ಇತಿಶ್ರೀ ಹಾಡಿ ಎಂದು ಶಾಸಕ ಯತ್ನಾಳ್ ತಿಳಿಸಿದ್ದಾರೆ. ಬಿಜೆಪಿ ಶಾಸಕಾಂಗ ಸಭೆಯಲ್ಲಿ ಕೆಲ ಸಚಿವರ ಕಾರ್ಯವೈಖರಿ ಬಗ್ಗೆ ಶಾಸಕರ ತೀವ್ರ ಅಸಮಾಧಾನ ಕೇಳಿಬಂದಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿಸುವ ಯೋಜನೆ ಇದೆ: ಸಚಿವ ಅಶ್ವತ್ಥ್ ನಾರಾಯಣ ಹೇಳಿಕೆ

ಇದನ್ನೂ ಓದಿ: ಸಿದ್ದರಾಮಯ್ಯಗೆ ಉತ್ತರ ಕೊಟ್ಟರೆ ಕೊಚ್ಚೆಗೆ ಕಲ್ಲು ಹೊಡೆದಂತೆ: ಉಡುಪಿಯಲ್ಲಿ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್

Published On - 9:53 pm, Wed, 15 December 21

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್