ಪ್ರತಿಯೊಂದು ವಾರ್ಡ್‌ನಲ್ಲಿ ನೂರಾರು ಮಂದಿಗೆ ‘ದಿ ಕಾಶ್ಮೀರ್ ಫೈಲ್ಸ್’ ಫ್ರೀ ಟಿಕೆಟ್ ನೀಡಲು ಮುಂದಾದ ಬಿಜೆಪಿ ಶಾಸಕ ಅಭಯ್ ಪಾಟೀಲ್

ಶುಕ್ರವಾರದಿಂದ ಬೆಳಗಾವಿಯ ಪ್ರಕಾಶ್ ಚಿತ್ರಮಂದಿರದಲ್ಲಿ ನೈಟ್ ಶೋಗೆ ವ್ಯವಸ್ಥೆ ಮಾಡುವುದಾಗಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ 25 ಶೋ ಆರ್ಗನೈಸ್ ಮಾಡುತ್ತೇವೆ. ಪ್ರತಿಯೊಂದು ವಾರ್ಡ್‌ನಲ್ಲಿ 500 ರಿಂದ 1000 ಜನರಿಗೆ ಫ್ರೀ ಟಿಕೆಟ್ ನೀಡಲಾಗುವುದು.

ಪ್ರತಿಯೊಂದು ವಾರ್ಡ್‌ನಲ್ಲಿ ನೂರಾರು ಮಂದಿಗೆ ‘ದಿ ಕಾಶ್ಮೀರ್ ಫೈಲ್ಸ್’ ಫ್ರೀ ಟಿಕೆಟ್ ನೀಡಲು ಮುಂದಾದ ಬಿಜೆಪಿ ಶಾಸಕ ಅಭಯ್ ಪಾಟೀಲ್
ಬಿಜೆಪಿ ಶಾಸಕ ಅಭಯ್ ಪಾಟೀಲ್
Follow us
TV9 Web
| Updated By: ಆಯೇಷಾ ಬಾನು

Updated on:Mar 15, 2022 | 7:32 PM

ಬೆಳಗಾವಿ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’(The Kashmir Files) ದೇಶಾದ್ಯಂತ ಸಖತ್ ಸದ್ದು ಮಾಡುತ್ತಿದೆ. ದೊಡ್ಡ ಮಟ್ಟದ ಚರ್ಚೆಯನ್ನೂ ಹುಟ್ಟುಹಾಕಿದೆ. ಕರ್ನಾಟಕ, ಹರ್ಯಾಣ, ಗುಜರಾತ್, ಮಧ್ಯಪ್ರದೇಶ್, ಗೋವಾ, ತ್ರಿಪುರಾ, ಉತ್ತರಾಖಂಡ್ ಸೇರಿದಂತೆ 8 ರಾಜ್ಯಗಳಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಚಿತ್ರ ವೀಕ್ಷಿಸಿದ ನಂತರ ಸಿಎಂ ಬೊಮ್ಮಾಯಿ ಸಚಿವರು, ಶಾಸಕರಿಗೂ ಚಿತ್ರ ನೋಡುವಂತೆ ಸಲಹೆ ನೀಡಿದ್ದರು. ಅಲ್ಲದೆ ಇದುವರೆಗೂ ಒಂದೋ ಎರಡೂ ಷೋಗಳನ್ನು, ವಿವಿಐಪಿಗಳಿಗಾಗಿ ಆಯೋಜಿಸಲಾಗುತ್ತಿತ್ತು. ಆದರೆ ಮೊದಲ ಬಾರಿಗೆ ಇಡೀ ಊರುಕೇರಿಗೆ ಸಿನಿಮಾ ತೋರಿಸುವ ಊಸಾಬಾರಿ ತೋರಿಸಲಾಗಿದೆ. ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ್ ಪಾಟೀಲ್(Abhay Patil), ಇಡೀ ಊರಿಗೆ ಉಚಿತವಾಗಿ ಚಿತ್ರ ತೋರಿಸಲು ಸಿದ್ಧರಾಗಿದ್ದಾರೆ.

ಶುಕ್ರವಾರದಿಂದ ಬೆಳಗಾವಿಯ ಪ್ರಕಾಶ್ ಚಿತ್ರಮಂದಿರದಲ್ಲಿ ನೈಟ್ ಶೋಗೆ ವ್ಯವಸ್ಥೆ ಮಾಡುವುದಾಗಿ ಬಿಜೆಪಿ ಶಾಸಕ ಅಭಯ್ ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ 25 ಶೋ ಆರ್ಗನೈಸ್ ಮಾಡುತ್ತೇವೆ. ಪ್ರತಿಯೊಂದು ವಾರ್ಡ್‌ನಲ್ಲಿ 500 ರಿಂದ 1000 ಜನರಿಗೆ ಫ್ರೀ ಟಿಕೆಟ್ ನೀಡಲಾಗುವುದು. ಯುವಕ ಮಂಡಳ, ಮಹಿಳಾ ಮಂಡಳ, ಸಾಮಾಜಿಕ ಕಾರ್ಯಕರ್ತರಿಗೆ ಫ್ರೀ ಟಿಕೆಟ್ ನೀಡಲಾಗುವುದು. ಕಾಶ್ಮೀರದಲ್ಲಿ ನಡೆದ ಘಟನೆ ಕೇಳಿದ್ರೆ ನಿಮ್ಮ ರಕ್ತ ಕುದಿಯುತ್ತೆ ಆ ರೀತಿ ಪರಿಸ್ಥಿತಿ ಇದೆ. ಅಲ್ಲಿ ಸಾವಿರಾರು ಹಿಂದೂ ಹೆಣ್ಣು ಮಕ್ಕಳ ಮೇಲೆ ರೇಪ್ ಮಾಡುವಂತದ್ದು, ಸಾವಿರಾರು ಹಿಂದೂ ಮಕ್ಕಳನ್ನು ಕೊಲ್ಲುವಂತದ್ದು, ಹತ್ತಾರು ಸಾವಿರ ಹಿಂದೂ ಯುವಕರನ್ನು ಕೊಂದು ದಫನ್ ಮಾಡುವಂತದ್ದು ಕೆಲವರು ಮಾಡಿದ್ದಾರೆ. 90ರ ದಶಕದಲ್ಲಿ ಆದ ನರಸಂಹಾರ ಇಡೀ ಜಗತ್ತಿನಲ್ಲಿ ನಡೆದ ದುರ್ದೈವ. ಬಹುಸಂಖ್ಯಾತರು ಅನ್ನಿಸಿಕೊಳ್ಳುವ ದೇಶದಲ್ಲಿ ಸ್ಥಾನ ಇಲ್ಲದಿರುವಂತ ಕೆಲಸ ಜಿಹಾದಿಗಳು ಮಾಡಿದ್ದಾರೆ. ಹೀಗಾಗಿ ಪ್ರತಿಯೊಬ್ಬ ಹಿಂದೂ ದಿ ಕಾಶ್ಮೀರ್ ಫೈಲ್ಸ್ ಚಿತ್ರ ನೋಡಿ ಸಮಾಜದ ಮೇಲೆ ಯಾವ ರೀತಿ ಅತ್ಯಾಚಾರ ಮಾಡಿಲಾಗಿದೆ ಎಂಬುವುದನ್ನು ತಿಳಿದುಕೊಳ್ಳಬೇಕು ಎಂದಿದ್ದಾರೆ.

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು? ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಚಿತ್ರ ದೇಶಾದ್ಯಂತ ಸಖತ್ ಸುದ್ದಿಯಾಗಿದೆ. ದೊಡ್ಡ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿರುವ ಈ ಸಿನಿಮಾವನ್ನು ಬಹುತೇಕರು ಇಷ್ಟಪಟ್ಟಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರನ್ನು (PM Narendra Modi) ಚಿತ್ರತಂಡ ಭೇಟಿ ಮಾಡಿತ್ತು. ಈ ವೇಳೆ ಅವರು ಚಿತ್ರದ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಇದೀಗ ಖುದ್ದು ಪ್ರಧಾನಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಬಹಿರಂಗವಾಗಿ ಶಹಬ್ಬಾಸ್ಗಿರಿ ಕೊಟ್ಟಿದ್ದಾರೆ. ದೆಹಲಿಯಲ್ಲಿ ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ಅವರು ಮಾತನಾಡುತ್ತಾ, ‘ದಿ ಕಾಶ್ಮೀರ್ ಫೈಲ್ಸ್’ ಉತ್ತಮ ಚಿತ್ರ. ಅಂತಹ ಸಿನಿಮಾಗಳು ನಿರ್ಮಾಣವಾಗಬೇಕು ಎಂದು ಹೇಳಿದ್ದಾರೆ. ಜತೆಗೆ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಿಸಲು ಬಿಜೆಪಿ ಸಂಸದರಿಗೆ ಪ್ರಧಾನಿ ಸಲಹೆಯನ್ನೂ ನೀಡಿದ್ದಾರೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ ಫೈಲ್ಸ್’ ಮಾರ್ಚ್ 11 ರಂದು ತೆರೆಕಂಡಿತ್ತು. 1990ರ ದಶಕದಲ್ಲಿ ಕಾಶ್ಮೀರ ಕಣಿವೆಯಿಂದ ಕಾಶ್ಮೀರಿ ಪಂಡಿತರ ವಲಸೆಯನ್ನು ಆಧರಿಸಿ ಚಿತ್ರ ತಯಾರಾಗಿದೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರವನ್ನು ವೀಕ್ಷಿಸಿ ಹೊಗಳಿಕೆಯ ಮಾತುಗಳನ್ನಾಡಿದ್ದರು. ಅಲ್ಲದೇ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನೂ ಘೋಷಿಸಿದ್ದರು. ಈ ವೇಳೆ ಅವರು ಚಿತ್ರ ವೀಕ್ಷಿಸಲು ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ತಿಳಿಸಿದ್ದರು. ಇಂದು ವಿಧಾನಸಭೆ ಸಚಿವಾಲಯದ ವತಿಯಿಂದ ರಾಜ್ಯದ ಸಚಿವರು ಹಾಗೂ ಶಾಸಕರಿಗೆ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿಧಾನ ಪರಿಷತ್ನಲ್ಲಿ ಇದೇ ವಿಷಯದ ಕುರಿತಂತೆ ಪ್ರತಿಪಕ್ಷಗಳು ತೀವ್ರ ಗದ್ದಲವನ್ನೂ ನಡೆಸಿವೆ.

ಇದನ್ನೂ ಓದಿ: 5 ವರ್ಷದಲ್ಲಿ 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಧಿಸಲು ಯೋಗಿ ಪಣ, ಸಲಹೆಗಾರರ ನೇಮಕಕ್ಕೆ ಬಿಡ್ ಕರೆದ ಉತ್ತರ ಪ್ರದೇಶ ಸರ್ಕಾರ!

ನಮ್ಮ ದೇಶದ ಮುಸಲ್ಮಾನರು ಕಾನೂನು ಗೌರವಿಸುವ ಜನರು, ಹೈಕೋರ್ಟ್ ಅದೇಶವನ್ನು ಪಾಲಿಸುತ್ತಾರೆ: ರಘುಪತಿ ಭಟ್, ಶಾಸಕ

Published On - 7:25 pm, Tue, 15 March 22

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ