ತ್ಯಾಜ್ಯ ವಿಲೇವಾರಿ ಮಾಡದಿದ್ದಕ್ಕೆ ಆಕ್ರೋಶ; ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮಹಾನಗರ ಪಾಲಿಕೆ ಆಯುಕ್ತರ ಮನೆ ಮುಂದೆ ಸುರಿದ ಬಿಜೆಪಿ ಶಾಸಕ ಅಭಯ್ ಪಾಟೀಲ್

ಕಳೆದ ಮೂರು ತಿಂಗಳ ಹಿಂದೆ ಮಹಾನಗರ ಪಾಲಿಕೆ ಆಯುಕ್ತರಿಗೆ ಎಚ್ಚರಿಕೆ ಸಹ ನೀಡಿದ್ದೆ.ಆದರೆ ಯಾವುದೇ ಕ್ರಮ ಕೈಗೊಳ್ಳದಿದ್ದಕ್ಕೆ ಪಾಲಿಕೆ ಆಯುಕ್ತರ ಮನೆ ಎದುರು ಕಸ ಸುರಿದ್ದೇನೆ. ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಡಿಸಿ ಮನೆ ಎದುರು ಕೂಡ ಕಸ ಸುರಿಯುವೆ ಎಂದು ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

ತ್ಯಾಜ್ಯ ವಿಲೇವಾರಿ ಮಾಡದಿದ್ದಕ್ಕೆ ಆಕ್ರೋಶ; ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮಹಾನಗರ ಪಾಲಿಕೆ ಆಯುಕ್ತರ ಮನೆ ಮುಂದೆ ಸುರಿದ ಬಿಜೆಪಿ ಶಾಸಕ ಅಭಯ್ ಪಾಟೀಲ್
ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮಹಾನಗರ ಪಾಲಿಕೆ ಆಯುಕ್ತರ ಮನೆ ಮುಂದೆ ಸುರಿಯುತ್ತಿರುವ ದೃಶ್ಯ

ಬೆಳಗಾವಿ: ನಗರದಲ್ಲಿ ಸೂಕ್ತ ತ್ಯಾಜ್ಯ ವಿಲೇವಾರಿ ಮಾಡದಿದ್ದಕ್ಕೆ ರೊಚ್ಚಿಗೆದ್ದ ಬಿಜೆಪಿ ಶಾಸಕ ಅಭಯ್ ಪಾಟೀಲ್, ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ಮಹಾನಗರ ಪಾಲಿಕೆ ಆಯುಕ್ತರ ಮನೆ ಎದುರು ಸುರಿದಿದ್ದಾರೆ. ಶಾಸಕ ಅಭಯ್ ಪಾಟೀಲ್, ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಹೆಚ್‌. ನಿವಾಸದ ಎದುರು ಕಸ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ಜಗದೀಶ್ ಕೆ.ಹೆಚ್. ನಿವಾಸಕ್ಕೆ, ಖುದ್ದು ತಾವೇ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಬಂದು ಮನೆ ಎದುರು ಕಸ ಸುರಿದಿರುವ ಶಾಸಕ ಅಭಯ್ ಪಾಟೀಲ್​, ಬೆಳಗಾವಿ ನಗರದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಒತ್ತಾಯಿಸಿದ್ದೆ. ಆದರೆ ಮಹಾನಗರ ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಈ ರೀತಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಕಳೆದ ಮೂರು ತಿಂಗಳ ಹಿಂದೆ ಮಹಾನಗರ ಪಾಲಿಕೆ ಆಯುಕ್ತರಿಗೆ ಎಚ್ಚರಿಕೆ ಸಹ ನೀಡಿದ್ದೆ.ಆದರೆ ಯಾವುದೇ ಕ್ರಮ ಕೈಗೊಳ್ಳದಿದ್ದಕ್ಕೆ ಪಾಲಿಕೆ ಆಯುಕ್ತರ ಮನೆ ಎದುರು ಕಸ ಸುರಿದ್ದೇನೆ. ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಡಿಸಿ ಮನೆ ಎದುರು ಕೂಡ ಕಸ ಸುರಿಯುವೆ ಎಂದು ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ನಗರದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳದ ಮಹಾನಗರ ಪಾಲಿಕೆ ಆಯುಕ್ತರ ಮನೆ ಎದುರು ಕಸ ಚೆಲ್ಲಿದ ವಿಚಾರವಾಗಿ ಇಂದು ಸಿಎಂ ಗಮನಕ್ಕೆ ತರುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಬಿಜೆಪಿ ಶಾಸಕ ಅಭಯ್ ಪಾಟೀಲ್ ಉತ್ತರಿಸಿದ್ದು, ಯಾರ ಗಮನಕ್ಕೆ ತರಬೇಕೋ ಅವರ ಗಮನಕ್ಕೆ ತಂದಿರುವೆ ಎಂದು ತಿಳಿಸಿದ್ದಾರೆ. ಬಳಿಕ ಮಾತನಾಡಿದ ಅವರು ನೆರೆಯಿಂದ ಹೆಚ್ಚು ಹಾನಿಯಾದ ಪ್ರದೇಶಕ್ಕೆ ಸಿಎಂ ಬಿಎಸ್‌ವೈ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ ಬೆಳಗಾವಿಯ ಪ್ರವಾಸಿ ಮಂದಿರಕ್ಕೆ ಬಂದು ಸಭೆ ನಡೆಸಲಿದ್ದಾರೆ. ಈ ವೇಳೆ ನನ್ನ ಕ್ಷೇತ್ರಕ್ಕೂ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:
ರಾಜ್ಯಸಭೆ ಸದನ ನಾಯಕರಾಗಿ ಪಿಯೂಶ್ ಗೋಯಲ್ ನೇಮಕ; ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರಾಗ್ತಾರಾ ರಾಹುಲ್ ಗಾಂಧಿ?

ಅಕಿರಾ ಮಿಯಾವಾಕಿ ಕಿರು ಅರಣ್ಯ ಪದ್ಧತಿ ಅನುಷ್ಠಾನ: ಅರಣ್ಯ ಬೆಳೆಸುವ ಯೋಜನೆಗೆ ಮುಂದಾದ ಹು-ಧಾ ಮಹಾನಗರ ಪಾಲಿಕೆ

Click on your DTH Provider to Add TV9 Kannada