ವಿಜಯೇಂದ್ರ ಭ್ರಷ್ಟ, ಆತನ ನಾಯಕತ್ವಕ್ಕೆ ನನ್ನ ವಿರೋಧ; ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧವೇ ರಮೇಶ್ ಜಾರಕಿಹೊಳಿ ಕಿಡಿ
ವಿಜಯೇಂದ್ರ ಅವರ ಅಧ್ಯಕ್ಷ ಸ್ಥಾನವನ್ನು ಎಂದೂ ನಾನು ಒಪ್ಪೋದಿಲ್ಲ. ಬಿಜೆಪಿಯ ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ನಮ್ಮ ಪಕ್ಷದಲ್ಲಿ ಜೂನಿಯರ್, ಅವನಿಗೆ ಏನೂ ಐಡಿಯಾಲಜಿ ಇಲ್ಲ. ವಿಜಯೇಂದ್ರ ಬಿಜೆಪಿಯ ಭ್ರಷ್ಟ ಎಂಬ ಲೇಬಲ್‌ಗೆ ಅಷ್ಟೇ ಇದೆ. ಭಾರತೀಯ ಜನತಾ ಪಕ್ಷದ ಭ್ರಷ್ಟ ಅಂತ ಲೇಬಲ್ ವಿಜಯೇಂದ್ರನಿಗಿದೆ. ಅವನು ಅಧ್ಯಕ್ಷ ಆಗಿದ್ದಕ್ಕೆ ನನ್ನ ವಿರೋಧವಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನಾನೆಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, ಅವನಿಗೆ ಏನೂ ಐಡಿಯಾಲಜಿ ಇಲ್ಲ. ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ. ಅವನು ಅಧ್ಯಕ್ಷ ಆಗಿದ್ದಕ್ಕೆ ನನಗೆ ವಿರೋಧವಿದೆ. ಹಾಗಂತ ನಾನೆಂದೂ ಯಡಿಯೂರಪ್ಪನವರಿಗೆ ವಿರೋಧಿ ಅಲ್ಲ. ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ ಎಂದು ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಏಕವಚನದಲ್ಲೇ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ.
ಆರ್ಎಸ್ಎಸ್ ಪ್ರಮುಖ ನಾಯಕರು, ಬಿಜೆಪಿ ನಾಯಕರ ಸಭೆಯ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿನ ಶಾಸಕ ರಮೇಶ್ ಜಾರಕಿಹೊಳಿ, ಸಭೆಯಲ್ಲಿ ಏನು ಚರ್ಚೆಯಾಯಿತು ಎಂದು ಹೇಳುವುದಕ್ಕೆ ಆಗುವುದಿಲ್ಲ. ತಪ್ಪು ಮಾಡಿದವರನ್ನು ಸಭೆಯಲ್ಲಿ ಮುಖಂಡರು ಬೈದಿದ್ದಾರೆ ಅಷ್ಟೇ. 15ರಿಂದ 20 ಜನರ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಸಲಿ ಎಂದು ಬಿಜೆಪಿ, ಆರ್ಎಸ್ಎಸ್ ಪ್ರಮುಖರ ಸಭೆಯಲ್ಲಿ ಮನವಿ ಮಾಡಿದ್ದೇವೆ. ವರಿಷ್ಠರು ನೀವು ಇಂತಿಂಥ ಕೆಲಸ ಮಾಡುವಂತೆ ಟಾಸ್ಕ್ ನೀಡಿದ್ದಾರೆ. 120ರಿಂದ 130 ಕ್ಷೇತ್ರಗಳನ್ನು ಗೆಲ್ಲಿಸಿಕೊಡುವ ಶಕ್ತಿ ನಮ್ಮಲ್ಲಿದೆ. ವರಿಷ್ಠರು ನೀಡಿದ ಟಾಸ್ಕ್ನಲ್ಲಿ ನಾನು ವಿಫಲನಾದರೆ ನನ್ನನ್ನು ಒದ್ದು ಹೊರಹಾಕಿ ಎಂದು ಸಂಘ ಪರಿವಾರದ ಪ್ರಮುಖರ ಸಭೆಯಲ್ಲಿ ಹೇಳಿದ್ದೇನೆ ಎಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಅನಂತ್ ಕುಮಾರ್ ತೀರಿಕೊಂಡ ಮೇಲೆ ಬಿಜೆಪಿಯಲ್ಲಿ ಯಾರೂ ಪ್ರಬಲ ನಾಯಕನಾಗಿಲ್ಲ. ಬಿಜೆಪಿ ಎಂಬುದು ಒಬ್ಬರ ಕೈಯಲ್ಲಿ ಆಡಳಿತ ಕೊಡುವುದು ಬೇಡ. ಸಾಮೂಹಿಕ ನಾಯಕತ್ವಕ್ಕೆ ಒತ್ತು ಕೊಡುವಂತೆ ನಾವು ಮೊನ್ನೆ ಸಭೆಯಲ್ಲಿ ಹೇಳಿದ್ದೇವೆ. ಒಬ್ಬರ ಕೈಗೆ ಪಕ್ಷ ಸಿಕ್ಕರೆ ನಾನು ಕೂಡ ಎರಡನೇ ಯಡಿಯೂರಪ್ಪನಾಗುತ್ತೇನೆ. ಆ ಚೇರ್ ಮೇಲೆ ಕೂತರೆ ಸರ್ವಾಧಿಕಾರ ಧೋರಣೆ ಬರುತ್ತದೆ. 15 ರಿಂದ 20 ಜನರ ಸಾಮೂಹಿಕ ನಾಯಕತ್ವದ ಕೈಯಲ್ಲಿ ಲೀಡರ್ ಶಿಪ್ ಕೊಡುವಂತೆ ಮನವಿ ಮಾಡಿದ್ದೇವೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಇದನ್ನೂ ಓದಿ: 2028ಕ್ಕೆ ಸಿಎಂ ಆಗುವ ತಯಾರಿ ಇದೆ: ಡಿಕೆ ಶಿವಕುಮಾರ್ಗೆ ಶಾಕ್ ಕೊಟ್ಟ ಜಾರಕಿಹೊಳಿ
ಯಡಿಯೂರಪ್ಪನವರ ಬಗ್ಗೆ ನಮಗೆ ಬಹಳ ಗೌರವವಿದೆ. ಯಡಿಯೂರಪ್ಪಗೆ ವಯಸ್ಸಾಗಿದೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ. ನಮಗೆ ಯಡಿಯೂರಪ್ಪನವರ ಸಲಹೆ ಬೇಕಾದರೆ ಅವರ ಮನೆಗೆ ಹೋಗುತ್ತೇವೆ ಎಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಆಕ್ರೋಶ:
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಭಯೋತ್ಪಾದನೆ, ಗಲಭೆ ಇಂತಹ ಹಲವು ವಿಚಾರಗಳು ಹೆಚ್ಚುತ್ತಿವೆ. ಲೋಕಸಭಾ ಚುನಾವಣೆಯಲ್ಲಿ 40 ಸೀಟುಗಳು ಕಡಿಮೆ ಬಂದಿರುವುದಕ್ಕೆ ಈ ರೀತಿ ನಡೆಯುತ್ತಿದೆ. ರಾಹುಲ್ ಗಾಂಧಿ ವಿದೇಶದಲ್ಲಿ ಕುಳಿತು ದೇಶದ ಮಾನ ಕಳೆಯುತ್ತಿದ್ದಾರೆ. ಅಲ್ಲಿ ಮೀಸಲಾತಿ ತೆಗೆಯಲಾಗುವುದು ಎಂದು ಹೇಳಿದರು. ಆದರೆ, ನಮ್ಮ ದೇಶದಲ್ಲಿ ಸಂವಿಧಾನದ ಬುಕ್ ಹಿಡಿದುಕೊಂಡು ತಿರುಗಾಡುತ್ತಾರೆ. ಅಂಬೇಡ್ಕರ್ ಕಂಡಂತಹ ದೇಶಕ್ಕೆ ಸ್ವಾತಂತ್ರ ಇನ್ನೂ ಸಿಕ್ಕಿಲ್ಲ. 40 ಸೀಟ್ ಕಡಿಮೆ ಬಂದಿರುವುದಕ್ಕೆ ದೇಶದಲ್ಲಿ ಇಷ್ಟು ಹಾರಾಡುತ್ತಾರೆ. ಮೋದಿ ಅವರ ಕೈ ಬಲ ಪಡಿಸಬೇಕು. ಆಗ ಮಾತ್ರ ಹಿಂದೂ ಧರ್ಮ ಉಳಿಯುತ್ತದೆ ಎಂದು ಅಥಣಿಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಇದನ್ನೂ ಓದಿ: ಮುನಿರತ್ನ ಅವರ ಇನ್ನೂ ಎರಡು ಆಡಿಯೋ ಇವೆ, ನಾಳೆ ರಿಲೀಸ್ ಮಾಡ್ತೇನೆ: ಚಲುವರಾಜು ಸ್ಫೋಟಕ ಹೇಳಿಕೆ
ಇದೇ ವೇಳೆ, ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ನನ್ನ ಪಕ್ಷ ಬೇರೆ ಇದೆ, ಸತೀಶ್ ಜಾರಕಿಹೊಳಿ ಪಕ್ಷ ಬೇರೆ ಇದೆ. ನಮ್ಮ ನಮ್ಮ ಪಕ್ಷಗಳ ಸಿದ್ದಾಂತ ಅದಲು ಬದಲು. ಅವರ ಪಕ್ಷದಲ್ಲಿ ಏನಾಗುತ್ತದೆ ಎಂಬುವುದು ನಮಗೆ ಗೊತ್ತಿಲ್ಲ. ನಾವು ಮನೆಯಲ್ಲಿ ಮಾತ್ರ ಸಹೋದರರು. ಪಕ್ಷದ ವಿಚಾರಕ್ಕೆ ಬಂದರೆ ನಾವು ಬೇರೆ ಬೇರೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುನಿರತ್ನ ಬಂಧನಕ್ಕೆ ವಿರೋಧ:
ಮುನಿರತ್ನ ಬಂಧನದ ಬಗ್ಗೆ ಸ್ವಪಕ್ಷ ಬಿಜೆಪಿ ನಾಯಕರ ವಿರುದ್ಧ ರಮೇಶ್ ಜಾರಕಿಹೊಳಿ ಕೆಂಡಾಮಂಡಲರಾಗಿದ್ದಾರೆ. ಶಾಸಕ ಮುನಿರತ್ನ ಅವರು ಬೈದಿರುವುದು ಸಾಬೀತೇ ಆಗಿಲ್ಲ. ಆಗಲೇ ನಮ್ಮ BJP ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.FSL ವರದಿ ಬರುವವರೆಗೆ ನಮ್ಮವರು ಮಾತನಾಡಬಾರದು ಎಂದು ಸಂಸದ ಜಿಗಿಜಣಿಗಿ ವಿರುದ್ಧ ಬೇಸರ ವ್ಯಕ್ತಪಡಿಸಿದ ರಮೇಶ್ ಜಾರಕಿಹೊಳಿ, ಮುನಿರತ್ನ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರು ಒತ್ತಾಯ ಮಾಡುತ್ತಿದ್ದಾರೆ. ಹಿಂದೆ ಮುಂದೆ ನೋಡದೆ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಮುನಿರತ್ನ ಬೈದಿರುವುದು ದೃಢವಾಗಿಲ್ಲ. ಮುನಿರತ್ನ ಆಡಿಯೋ ಕಟ್ ಆ್ಯಂಡ್ ಪೇಸ್ಟ್ ಇರಬಹುದು. ನಮ್ಮ ಬಿಜೆಪಿಯ ನಾಯಕರೇ ಬೈಯ್ಯೋದು ಎಷ್ಟು ಸರಿ? ಮುನಿರತ್ನ ವಿಚಾರದಲ್ಲಿ ನಮ್ಮ ಪಕ್ಷದವರು ದುಡುಕಿನ ನಿರ್ಧಾರ ಮಾಡ್ತಿದ್ದಾರೆ. ಅವರ ವಿರುದ್ಧ ವರಿಷ್ಠರು ನೋಟಿಸ್ ಜಾರಿ ಮಾಡಬೇಕು. ಮುನಿರತ್ನ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಕಂಪನಿಯ ಕೈವಾಡ ಇದೆ ಎಂದು ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ. ಹಾಗೇ, ಮುನಿರತ್ನ ಪ್ರಕರಣವನ್ನು ಸಿಬಿಐ ಕೊಡಬೇಕು. ಆಗ ಸತ್ಯಾಸತ್ಯತೆ ಹೊರಗೆ ಬರುತ್ತದೆ ಎಂದು ಒತ್ತಾಯಿಸಿದ್ದಾರೆ.
ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ