ಇಂದಿನಿಂದ ಮತ್ತೆ ಬಿಜೆಪಿ ನಾಯಕರ ಜನಸಂಕಲ್ಪ ಯಾತ್ರೆ: ನ.9ರಂದು ಬೆಳಗಾವಿಯ ಮೂರು ಕಡೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ

ಎರಡನೇ ಹಂತದ ಜನ ಸಂಪರ್ಕ ಸಭೆ ಬೆಳಗಾವಿ ಜಿಲ್ಲೆಯಲ್ಲಿ 9ರಂದು ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಮೂರು ಕಡೆಗಳಲ್ಲಿ ಸಭೆ ನಡೆಯಲಿದೆ.

ಇಂದಿನಿಂದ ಮತ್ತೆ ಬಿಜೆಪಿ ನಾಯಕರ ಜನಸಂಕಲ್ಪ ಯಾತ್ರೆ: ನ.9ರಂದು ಬೆಳಗಾವಿಯ ಮೂರು ಕಡೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ
ಬಸವರಾಜ ಬೊಮ್ಮಾಯಿ, ಸಿಎಮ್
Follow us
TV9 Web
| Updated By: ಆಯೇಷಾ ಬಾನು

Updated on:Nov 07, 2022 | 8:03 AM

ಬೆಳಗಾವಿ: ಇಂದಿನಿಂದ ಮತ್ತೆ ಬಿಜೆಪಿ ಜನಸಂಕಲ್ಪ(Jana Sankalpa Yatra) ಯಾತ್ರೆ ಆರಂಭವಾಗಲಿದೆ. ಉಡುಪಿ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai), ಬಿಎಸ್ ಯಡಿಯೂರಪ್ಪ(BS Yediyurappa) ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ದೆಹಲಿಯಿಂದ ಬೆಂಗಳೂರಿಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದಾರೆ. ನ.8ರಿಂದ 11ರವರೆಗೆ ಕಲಬುರಗಿ, ಸಿಂದಗಿ, ದಾವಣಗೆರೆ, ತುಮಕೂರಲ್ಲಿ ನಡೆಯುವ ಜನಸಂಕಲ್ಪ ಯಾತ್ರೆಯಲ್ಲಿ ಅರುಣ್​ ಸಿಂಗ್​ ಭಾಗಿಯಾಗಲಿದ್ದಾರೆ.

ಇನ್ನು ಎರಡನೇ ಹಂತದ ಜನ ಸಂಪರ್ಕ ಸಭೆ ಬೆಳಗಾವಿ ಜಿಲ್ಲೆಯಲ್ಲಿ 9ರಂದು ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಮೂರು ಕಡೆಗಳಲ್ಲಿ ಸಭೆ ನಡೆಯಲಿದೆ. ಇದಾದ ಬಳಿಕ ಹೆಲಿಕಾಪ್ಟರ್ ಮೂಲಕ ಎರಡು ಗಂಟೆಗೆ ರಾಯಭಾಗಕ್ಕೆ ತೆರಳಿ ಅಲ್ಲಿ ಜನ ಸಂಪರ್ಕ ಸಭೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಇದೇ ದಿನ ಸಂಜೆ ಖಾನಾಪುರ ಪಟ್ಟಣದಲ್ಲಿ ಸಭೆ ನಡೆಯಲಿದ್ದು ಬಿಜೆಪಿ ನಾಯಕರೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಒಂದೇ ದಿನ ಮೂರು ಕಡೆ ಸಭೆ ಮಾಡುವುದರ ಮೂಲಕ ಜಿಲ್ಲೆಯ ಬಿಜೆಪಿ ಕಾರ್ಯಕರ್ತರನ್ನ ಒಗ್ಗೂಡಿಸಿ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸಿಎಂ ಸಂದೇಶ ನೀಡಲಿದ್ದಾರೆ. ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡಿದ ಕಾರ್ಯಗಳು, ಯೋಜನೆಗಳನ್ನ ಜನರಿಗೆ ತಲುಪಿಸುವ ಸೂಚನೆ ಕೂಡ ನೀಡಲಿದ್ದಾರೆ. ಇನ್ನೂ ಜನ ಸಂಪರ್ಕ ಸಭೆಗೆ ಜಿಲ್ಲೆಯ ನಾಯಕರು ಕೂಡ ಈಗಾಗಲೇ ಸಿದ್ದತೆಯನ್ನ ನಡೆಸಿದ್ದಾರೆ.

ಇದನ್ನೂ ಓದಿ: ಕೃಷಿ ಕಾರ್ಯದಲ್ಲಿ ಆಯುಷ್ಯ ವೃದ್ಧಿ, ಕ್ಯಾನ್ಸರ್ ರೋಗಿಯಲ್ಲಿ ಅಚ್ಚರಿಯ ಬದಲಾವಣೆ

ಬಿಜೆಪಿ ನಾಯಕರ ಜನ ಸಂಕಲ್ಪ ಯಾತ್ರೆ ಮುಂದುವರಿಕೆ

ನಾಳೆಯಿಂದ ಮೂರು ದಿನಗಳ ಕಾಲ ಬೊಮ್ಮಾಯಿ-ಯಡಿಯೂರಪ್ಪ ತಂಡದಿಂದ ಜನ ಸಂಕಲ್ಪ ಯಾತ್ರೆ ನಡೆಯಲಿದೆ. ಉಡುಪಿ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಬೊಮ್ಮಾಯಿ-ಯಡಿಯೂರಪ್ಪ ಜಂಟಿ ಯಾತ್ರೆ ನಡೆಸಲಿದ್ದು ನವೆಂಬರ್ 8 ರಿಂದ 11 ರವರೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಿಂದ ಜನ ಸಂಕಲ್ಪ ಯಾತ್ರೆ ನಡೆಯಲಿದೆ. ಮಂಗಳವಾರ ಗದಗ ಜಿಲ್ಲೆ ಶಿರಹಟ್ಟಿಯಲ್ಲಿ ಬೆಳಗ್ಗೆ 10.30ಕ್ಕೆ ಜನಸಂಕಲ್ಪ ಕಾರ್ಯಕ್ರಮ ನಡೆಯಲಿದೆ. ಮಂಗಳವಾರ ಮಧ್ಯಾಹ್ನ 1.30ಕ್ಕೆ ಹಾವೇರಿಯ ಬ್ಯಾಡಗಿ ತಾಲೂಕು ಕ್ರೀಡಾಂಗಣದಲ್ಲಿ ಜನಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಗೂ ಬುಧುವಾರ ಬೆಳಗ್ಗೆ 10.30ಕ್ಕೆ ಬೆಳಗಾವಿಯಲ್ಲಿ ಜನಸಂಕಲ್ಪ ಕಾರ್ಯಕ್ರಮವಿದ್ದು ಮಧ್ಯಾಹ್ನ 1.30ಕ್ಕೆ ಬೆಳಗಾವಿ ಜಿಲ್ಲೆ ರಾಯಭಾಗದಲ್ಲಿ ಕಾರ್ಯಕ್ರಮವಿರಲಿದೆ.

Published On - 8:03 am, Mon, 7 November 22

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ