ಕೃಷ್ಣ ಮೃಗಗಳ ಸರಣಿ ಸಾವು: ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗದ ಭೀತಿ

ಬೆಳಗಾವಿಯ ಕಿತ್ತೂರು ಚನ್ನಮ್ಮ ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಮೃತಪಟ್ಟಿದ್ದು, ಗಳಲೆ ರೋಗದ ಶಂಕೆ ವ್ಯಕ್ತವಾಗಿದೆ. ಈ ಸಾಮೂಹಿಕ ಸಾವು ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಸೃಷ್ಟಿಸಿದೆ. ಅರಣ್ಯ ಇಲಾಖೆ ಪಶುಪಾಲನಾ ಇಲಾಖೆಯನ್ನು ಎಚ್ಚರಿಸಿದ್ದು, ಜಾನುವಾರು ಮಾಲೀಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಕೃಷ್ಣ ಮೃಗಗಳ ಸರಣಿ ಸಾವು: ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗದ ಭೀತಿ
ಕೃಷ್ಣಮೃಗ
Edited By:

Updated on: Nov 18, 2025 | 9:02 AM

ಬೆಳಗಾವಿ, ನವೆಂಬರ್​ 18: ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾಲು ಸಾಲು ಸಾವಿನ ಬೆನ್ನಲ್ಲೇ ಮೃಗಾಲಯದ ಸುತ್ತ ಮುತ್ತಲಿನ ಗ್ರಾಮಗಳಲ್ಲಿಯೂ ಸಾಂಕ್ರಾಮಿಕ ರೋಗದ ಭೀತಿ ಆರಂಭವಾಗಿದೆ. ಹೀಗಾಗಿ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ. ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 38 ಕೃಷ್ಣಮೃಗಳ ಪೈಕಿ 31 ಮೃತಪಟ್ಟಿದ್ದು, ಗಳಲೆ ರೋಗದಿಂದ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸುತ್ತಲಿನ ಗ್ರಾಮದಲ್ಲೂ ಗಳಲೆ ರೋಗ ಹರಡುವ ಸಾಧ್ಯತೆ ಇರುವ ಬಗ್ಗೆ ಪಶುಪಾಲನೆ ಇಲಾಖೆ ಉಪ ನಿರ್ದೇಶಕರಿಗೆ ಅರಣ್ಯ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಸಸ್ಯಾಹಾರದ ಪ್ರಾಣಿಗಳಿಗೂ ಗಳಲೆ ರೋಗ ಹರಡುವ ಸಾಧ್ಯತೆ ಇರುವುದರಿಂದ, ಪ್ರಾಣಿಗಳನ್ನ ಸಾಕಿರುವವರು ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಗಳಲೆ ರೋಗ ಹರಡದಂತೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆಯೂ ಮನವಿ ಮಾಡಲಾಗಿದೆ.

ಮೃತ ಕೃಷ್ಣ ಮೃಗಗಳ ಕಿಡ್ನಿ, ಹಾರ್ಟ್, ಲಿವರ್, ರಕ್ತ ಎಲ್ಲವನ್ನೂ ವೈದ್ಯರು ಈಗಾಗಲೇ ಸ್ಯಾಂಪಲ್ ಪಡೆದಿದ್ದು ಅವನ್ನು ಲ್ಯಾಬ್​​ಗೆ ಕಳುಹಿಸಿಕೊಡಲಾಗಿತ್ತು. ಮರಣೋತ್ತರ ಪರೀಕ್ಷೆಯ  ವರದಿ ಇಂದು ಹೊರಬರಲಿದ್ದು, ಮಧ್ಯಾಹ್ನದ ವೇಳೆಗೆ ಸಾವಿಗೆ ನಿಖರ ಕಾರಣ ಗೊತ್ತಾಗುವ ಸಾಧ್ಯತೆ ಇದೆ. ಅರಣ್ಯ ಇಲಾಖೆ ಮತ್ತು ಸಚಿವರಿಗೆ ವೈದ್ಯರ ತಂಡ ಈ ವರದಿಯನ್ನು ನೀಡಲಿದೆ ಎನ್ನಲಾಗಿದೆ. ವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸಿದ್ದು, ಮೃಗಾಲಯ ಕೂಡ ಪರಿಶೀಲನೆ ಆಗಿದೆ. ಘಟನೆಯಲ್ಲಿ ಸಿಬ್ಬಂದಿ ನಿರ್ಲಕ್ಷ್ಯ ಕಂಡು ಬಂದಿಲ್ಲ. 8 ಕೃಷ್ಣಮೃಗಗಳು ಮೃತಪಟ್ಟ ಸಂದರ್ಭದಲ್ಲಿಯೇ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಅದಾಗಿಯೂ ಎಲ್ಲಿಯಾದರೂ ಸಿಬ್ಬಂದಿ ತಪ್ಪು ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಈಗಾಗಲೇ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷ್ಣಮೃಗಗಳ ಸಾವಿನ ಕೇಸ್​​​, ಗೊಂದಲ ಮೂಡಿಸಿರುವ ಅರಣ್ಯ ಅಧಿಕಾರಿಗಳ ಹೇಳಿಕೆ

ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ

ನವೆಂಬರ್ 13ರಿಂದ ಹಂತ ಹಂತವಾಗಿ ಒಟ್ಟು 31 ಕೃಷ್ಣ ಮೃಗಗಗಳು ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಮೃತಪಟ್ಟಿವೆ. ಕೃಷ್ಣಮೃಗಗಳು ಮೃತಪಟ್ಟ ಪ್ರದೇಶವನ್ನು ಮೃಗಾಲಯದ ಸಿಬ್ಬಂದಿ ನಿರ್ಬಂಧಿಸಿದ್ದು, ಸೋಂಕು ಹರಡದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ. ಆ ಪ್ರದೇಶಕ್ಕೆ ಗ್ರೀನ್ ಮ್ಯಾಟ್ ಕಟ್ಟಿ ಸಾರ್ವಜನಿಕರು ಅಲ್ಲಿ ಓಡಾಡದಂತೆ ನೋಡಿಕೊಳ್ಳಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us