Border dispute: ನೀತಿಸಂಹಿತೆ ಮಧ್ಯೆಯೂ ಕೊಲ್ಹಾಪುರದಲ್ಲಿ ಪ್ರಭಟನೆಗೆ ಮುಂದಾದ MES, ವಿಕಾಸ್ ಅಘಾಡಿ ದಳ

ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಅಂಟಿಕೊಂಡಿರುವ ಕೊಲ್ಹಾಪುರದ ಶಾಹು ಮಹಾರಾಜ ಸಮಾಧಿ ಸ್ಥಳ ಬಳಿ ಮಹಾರಾಷ್ಟ್ರ ವಿಕಾಸ್ ಅಘಾಡಿ, ಎಂಇಎಸ್​ ಬೃಹತ್​ ಪ್ರತಿಭಟನೆಗೆ ಮುಂದಾಗಿದೆ.

Border dispute: ನೀತಿಸಂಹಿತೆ ಮಧ್ಯೆಯೂ ಕೊಲ್ಹಾಪುರದಲ್ಲಿ ಪ್ರಭಟನೆಗೆ ಮುಂದಾದ MES, ವಿಕಾಸ್ ಅಘಾಡಿ ದಳ
ಗಡಿ ವಿವಾದ ಪ್ರತಿಭಟನೆಗೆ ಸಿದ್ದತೆ ಮಾಡಿಕೊಳ್ಳುತ್ತಿರುವ ಎಮ್​ಇಎಸ್​​ ಮತ್ತು ವಿಕಾಸ ಅಘಾಡಿ
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 10, 2022 | 4:57 PM

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿ ವಿವಾದ (Karnataka-Maharashtra border dispute) ತೀರ್ವ ಸ್ವರೂಪ ಪಡೆದಿದ್ದು, ಬೆಳಗಾವಿ (Belagavi) ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿಯಲ್ಲಿ ಎಂಇಎಸ್ (MES) ಈ ವಿಚರವಾಗಿ ಆಗಾಗ ತಕರಾರು ತೆಗೆಯುತ್ತಿರುತ್ತದೆ. ಅಲ್ಲದೇ ಕಳೆದ ಕೆಲವು ದಿನಗಳ ಹಿಂದೆ ಕರ್ನಾಟಕದ ಬಸ್​ಗಳಿಗೆ (Karnataka Bus) ಮಸಿ ಬಳಿದು ಕ್ಯಾತೆ ತೆಗೆದಿತ್ತು. ಈಗ ಮತ್ತೆ ಮಹಾರಾಷ್ಟ್ರ ವಿಕಾಸ್ ಅಘಾಡಿ, ಮಹಾರಾಷ್ಟ್ರ ಏಕೀಕರಣ ಸಮಿತಿ ಇಂದು (ಡಿ.10) ಕರ್ನಾಟಕ-ಮಹಾರಾಷ್ಟ್ರ ಗಡಿಗೆ ಅಂಟಿಕೊಂಡಿರುವ ಕೊಲ್ಹಾಪುರದ (kollapur) ಶಾಹು ಮಹಾರಾಜ ಸಮಾಧಿ ಸ್ಥಳ ಬಳಿ ಬ್ರಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದವು.

ಇದರಿಂದ ಕರ್ನಾಟಕ ಬಸ್​ಗಳಿಗೆ ಹಾನಿಯಾಗುವ ಸಾಧ್ಯತೆ ಹಿನ್ನೆಲೆ ಸೂಕ್ತ ಭದ್ರತೆ ಒದಗಿಸುವುದಾಗಿ ಪೊಲೀಸ್ ಇಲಾಖೆ ಭರವಸೆ ನೀಡಿದೆ. ಈ ಸಂಬಂಧ ಕೋಗನಹಳ್ಳಿ ಚೆಕ್​ಪೋಸ್ಟ್​​ ಬಳಿ ಪೊಲೀಸ್​ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ.

ಕೋಲ್ಹಾಪುರ ಜಿಲ್ಲೆಯಲ್ಲಿ ನೀತಿಸಂಹಿತೆ ಜಾರಿ

ಆದರೆ ಕೋಲ್ಹಾಪುರ ಜಿಲ್ಲೆಯ 12 ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಜಾರಿಯಾಗಿದೆ. ಇದರಿಂದ ಮಾರಾಠಿಗರ ಪ್ರತಿಭಟನೆಗೆ ಹಿನ್ನಡೆಯಾಗಿದೆ. ಇನ್ನೂ ಡಿಸೆಂಬರ್ 18 ರಂದು ಚುನಾವಣೆ ನಡೆಯಲಿದೆ. ಈ ಸಂಬಂಧ ಡಿ. 9 ರಿಂದ 23 ರವರೆಗೆ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ಹೀಗಾಗಿ ಪ್ರತಿಭಟನೆ ನಡೆಸದಂತೆ ಪೊಲೀಸ್ ಇಲಾಖೆ ಖಡಕ್​ ಸೂಚನೆ ನೀಡಿದೆ.

ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಹಾರಾಷ್ಟ್ರ ಪೊಲೀಸ್ ಅಧಿನಿಯಮ 1951 ಪ್ರಕಾರ ಕೋಲ್ಹಾಪುರ ಪೊಲೀಸ್ ಇಲಾಖೆ ಖಡಕ್ ಆದೇಶ ಜಾರಿಗೊಳಿಸಿದೆ. ಖಡಕ್ ಆದೇಶದ ಮಧ್ಯೆಯೂ ಮರಾಠಿಗರು ಪ್ರತಿಭಟನೆ ತಯಾರಿಯಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?