ಕಾರ್ಖಾನೆಗಳಿಗೆ ವಿದ್ಯುತ್ ಬಿಲ್ ವಿನಾಯಿತಿ ನೀಡಿದಂತೆ ಧಾರ್ಮಿಕ ಕೇಂದ್ರಗಳ ವಿದ್ಯುತ್ ಬಿಲ್ ಮನ್ನಾ ಮಾಡಲು ಪರಿಷತ್​ನಲ್ಲಿ ಮನವಿ

ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ವಿಪಕ್ಷ ನಾಯಕರು ಏನಾದರೂ ಹೇಳಲಿ. ನಾವು ಪ್ರತಿಕ್ರಿಯಿಸುವುದಿಲ್ಲ ಎಂದು ಟಿವಿ9ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಕಾರ್ಖಾನೆಗಳಿಗೆ ವಿದ್ಯುತ್ ಬಿಲ್ ವಿನಾಯಿತಿ ನೀಡಿದಂತೆ ಧಾರ್ಮಿಕ ಕೇಂದ್ರಗಳ ವಿದ್ಯುತ್ ಬಿಲ್ ಮನ್ನಾ ಮಾಡಲು ಪರಿಷತ್​ನಲ್ಲಿ ಮನವಿ
ಪರಿಷತ್‌ ಕಲಾಪ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: ganapathi bhat

Updated on:Dec 13, 2021 | 2:55 PM

ಬೆಳಗಾವಿ: ಕೊರೊನಾ ಸಮಯದಲ್ಲಿ ವಿದ್ಯುತ್ ಬಿಲ್ ವಿನಾಯಿತಿ ನೀಡಿದ್ದೀರಿ. ಕಾರ್ಖಾನೆಗಳಿಗೆ ವಿನಾಯಿತಿ ನೀಡಿದಂತೆ ದೇವಾಲಯ, ಮಸೀದಿ, ಚರ್ಚ್‌ಗಳ ವಿದ್ಯುತ್ ಬಿಲ್ ಮನ್ನಾ ಮಾಡಲು ಪರಿಷತ್‌ನಲ್ಲಿ ಮನವಿ ಕೇಳಿಬಂದಿದೆ. ವಿಧಾನಪರಿಷತ್‌ನಲ್ಲಿ ಸದಸ್ಯ ತುಳಸಿ ಮುನಿರಾಜುಗೌಡ ಈ ವಿಚಾರ ಮನವಿ ಮಾಡಿದ್ದಾರೆ. ಕೊರೊನಾ ಕಾಲದಲ್ಲಿ ಕಾರ್ಖಾನೆಗಳಿಗೆ ವಿನಾಯಿತಿ ನೀಡಲಾಗಿತ್ತು. ಆದರೆ ಈಗ ಯಾವುದಕ್ಕೂ ವಿನಾಯಿತಿ ನೀಡುವುದಕ್ಕೆ ಆಗಲ್ಲ. ವಿನಾಯಿತಿ ನೀಡಿದರೆ ನಮ್ಮ ಇಲಾಖೆ ನಡೆಯುವುದು ಹೇಗೆ? ಎಂದು ಇಂಧನ ಸಚಿವ ಸುನಿಲ್ ಕುಮಾರ್ ಉತ್ತರ ನೀಡಿದ್ದಾರೆ.

1,227 ಸರ್ಕಾರಿ ಕೋಟಾ ವೈದ್ಯಕೀಯ ಸೀಟ್ ಹಿಂತಿರುಗಿಸಲಾಗಿದೆ. ಅದಕ್ಕೆ ಕಾರಣವೇನು, ಇದರಿಂದ ಸರ್ಕಾರಕ್ಕೆ ಎಷ್ಟು ಲಾಭವಾಗಿದೆ? ವಿದ್ಯಾರ್ಥಿಗಳು ಮೆಡಿಕಲ್ ಸೀಟ್‌ಗಾಗಿ ಹಗಲಿರುಳು ಓದುತ್ತಾರೆ. ಆದರೆ ಇಷ್ಟೊಂದು ಮೆಡಿಕಲ್ ಸೀಟ್ ಹೇಗೆ ಹಿಂತಿರುಗಿಸಲಾಗಿದೆ? ಎಂದು ವಿಧಾನಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಎನ್. ರವಿಕುಮಾರ್ ಪ್ರಶ್ನೆ ಮಾಡಿದ್ದಾರೆ. ರವಿಕುಮಾರ್ ಪ್ರಶ್ನೆಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಉತ್ತರ ನೀಡಿದ್ದಾರೆ.

ಮೂರು ಹಂತದಲ್ಲಿ ಕೌನ್ಸೆಲಿಂಗ್ ನಡೆಯುತ್ತದೆ. ಸೀಟ್ ಹಿಂತಿರುಗಿಸಲು ಬರುವವರಿಗೆ ದಂಡ ಹಾಕುತ್ತೇವೆ. ದೊಡ್ಡ ಮೊತ್ತದ ದಂಡ ವಿಧಿಸಲಾಗುವುದು. ಆದರೆ ಯಾವುದೇ ಸರ್ಕಾರಿ ವೈದ್ಯಕೀಯ ಸೀಟ್ ಹಿಂತಿರುಗಿಸಿಲ್ಲ. ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ ಸೀಟ್ ಹಿಂತಿರುಗಿಸಿಲ್ಲ ಎಂದು ರವಿಕುಮಾರ್ ಪ್ರಶ್ನೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಉತ್ತರ ನೀಡಿದ್ದಾರೆ.

ಶಾಲಾ ಕಾಲೇಜುಗಳ ಶಿಕ್ಷಕರಿಗೆ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಿಸುವಂತೆ ಸರ್ಕಾರಕ್ಕೆ ಬಂದಿರುವ ಮನವಿ ಎಷ್ಟು ಎಂದು ವಿಧಾನಪರಿಷತ್‌ನಲ್ಲಿ ಸದಸ್ಯ ಎಸ್.ಎಲ್. ಬೋಜೇಗೌಡ ಪ್ರಶ್ನೆ ಮಾಡಿದ್ದಾರೆ. ತಕ್ಷಣವೇ ಸಭೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇವೆ ಎಂದು ಇದಕ್ಕೆ ಪ್ರತಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ. ಅಶ್ವತ್ಥ್ ನಾರಾಯಣ ಹೇಳಿಕೆಗೆ ಎಸ್.ಎಲ್. ಜೋಬೇಗೌಡ ಗರಂ ಆಗಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ ಬಿಜೆಪಿಯ ಎಲ್ಲ ನಾಯಕರು ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಬೇಕು ಎನ್ನುತ್ತಿದ್ದಾರೆ. ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ವಿಪಕ್ಷ ನಾಯಕರು ಏನಾದರೂ ಹೇಳಲಿ. ನಾವು ಪ್ರತಿಕ್ರಿಯಿಸುವುದಿಲ್ಲ ಎಂದು ಟಿವಿ9ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಉಭಯ ಸದನಗಳ ಕಲಾಪ ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ. ವಿಧಾನಸಭೆ ಕಲಾಪ ಹಾಗೂ ವಿಧಾನಪರಿಷತ್ ಕಲಾಪವನ್ನು 3 ಗಂಟೆಗೆ ಮುಂದೂಡಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಆರಂಭ; ವಿಧಾನಸಭೆ ಕಲಾಪ ನೇರ ಪ್ರಸಾರ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ; ರಾತ್ರೋರಾತ್ರಿ ಮಹಾಮೇಳ ವೇದಿಕೆ ನಿರ್ಮಿಸಿದ ಎಂಇಎಸ್

Published On - 2:54 pm, Mon, 13 December 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್