ಬೆಳಗಾವಿ: ಕೊರೊನಾ ಸಮಯದಲ್ಲಿ ವಿದ್ಯುತ್ ಬಿಲ್ ವಿನಾಯಿತಿ ನೀಡಿದ್ದೀರಿ. ಕಾರ್ಖಾನೆಗಳಿಗೆ ವಿನಾಯಿತಿ ನೀಡಿದಂತೆ ದೇವಾಲಯ, ಮಸೀದಿ, ಚರ್ಚ್‌ಗಳ ವಿದ್ಯುತ್ ಬಿಲ್ ಮನ್ನಾ ಮಾಡಲು ಪರಿಷತ್‌ನಲ್ಲಿ ಮನವಿ ಕೇಳಿಬಂದಿದೆ. ವಿಧಾನಪರಿಷತ್‌ನಲ್ಲಿ ಸದಸ್ಯ ತುಳಸಿ ಮುನಿರಾಜುಗೌಡ ಈ ವಿಚಾರ ಮನವಿ ಮಾಡಿದ್ದಾರೆ. ಕೊರೊನಾ ಕಾಲದಲ್ಲಿ ಕಾರ್ಖಾನೆಗಳಿಗೆ ವಿನಾಯಿತಿ ನೀಡಲಾಗಿತ್ತು. ಆದರೆ ಈಗ ಯಾವುದಕ್ಕೂ ವಿನಾಯಿತಿ ನೀಡುವುದಕ್ಕೆ ಆಗಲ್ಲ. ವಿನಾಯಿತಿ ನೀಡಿದರೆ ನಮ್ಮ ಇಲಾಖೆ ನಡೆಯುವುದು ಹೇಗೆ? ಎಂದು ಇಂಧನ ಸಚಿವ ಸುನಿಲ್ ಕುಮಾರ್ ಉತ್ತರ ನೀಡಿದ್ದಾರೆ.
1,227 ಸರ್ಕಾರಿ ಕೋಟಾ ವೈದ್ಯಕೀಯ ಸೀಟ್ ಹಿಂತಿರುಗಿಸಲಾಗಿದೆ. ಅದಕ್ಕೆ ಕಾರಣವೇನು, ಇದರಿಂದ ಸರ್ಕಾರಕ್ಕೆ ಎಷ್ಟು ಲಾಭವಾಗಿದೆ? ವಿದ್ಯಾರ್ಥಿಗಳು ಮೆಡಿಕಲ್ ಸೀಟ್‌ಗಾಗಿ ಹಗಲಿರುಳು ಓದುತ್ತಾರೆ. ಆದರೆ ಇಷ್ಟೊಂದು ಮೆಡಿಕಲ್ ಸೀಟ್ ಹೇಗೆ ಹಿಂತಿರುಗಿಸಲಾಗಿದೆ? ಎಂದು ವಿಧಾನಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಎನ್. ರವಿಕುಮಾರ್ ಪ್ರಶ್ನೆ ಮಾಡಿದ್ದಾರೆ. ರವಿಕುಮಾರ್ ಪ್ರಶ್ನೆಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಉತ್ತರ ನೀಡಿದ್ದಾರೆ.
ಮೂರು ಹಂತದಲ್ಲಿ ಕೌನ್ಸೆಲಿಂಗ್ ನಡೆಯುತ್ತದೆ. ಸೀಟ್ ಹಿಂತಿರುಗಿಸಲು ಬರುವವರಿಗೆ ದಂಡ ಹಾಕುತ್ತೇವೆ. ದೊಡ್ಡ ಮೊತ್ತದ ದಂಡ ವಿಧಿಸಲಾಗುವುದು. ಆದರೆ ಯಾವುದೇ ಸರ್ಕಾರಿ ವೈದ್ಯಕೀಯ ಸೀಟ್ ಹಿಂತಿರುಗಿಸಿಲ್ಲ. ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ ಸೀಟ್ ಹಿಂತಿರುಗಿಸಿಲ್ಲ ಎಂದು ರವಿಕುಮಾರ್ ಪ್ರಶ್ನೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಉತ್ತರ ನೀಡಿದ್ದಾರೆ.
ಶಾಲಾ ಕಾಲೇಜುಗಳ ಶಿಕ್ಷಕರಿಗೆ ಜ್ಯೋತಿ ಸಂಜೀವಿನಿ ಯೋಜನೆ ವಿಸ್ತರಿಸುವಂತೆ ಸರ್ಕಾರಕ್ಕೆ ಬಂದಿರುವ ಮನವಿ ಎಷ್ಟು ಎಂದು ವಿಧಾನಪರಿಷತ್‌ನಲ್ಲಿ ಸದಸ್ಯ ಎಸ್.ಎಲ್. ಬೋಜೇಗೌಡ ಪ್ರಶ್ನೆ ಮಾಡಿದ್ದಾರೆ. ತಕ್ಷಣವೇ ಸಭೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತೇವೆ ಎಂದು ಇದಕ್ಕೆ ಪ್ರತಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ. ಅಶ್ವತ್ಥ್ ನಾರಾಯಣ ಹೇಳಿಕೆಗೆ ಎಸ್.ಎಲ್. ಜೋಬೇಗೌಡ ಗರಂ ಆಗಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ
ಬಿಜೆಪಿಯ ಎಲ್ಲ ನಾಯಕರು ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಬೇಕು ಎನ್ನುತ್ತಿದ್ದಾರೆ. ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ವಿಪಕ್ಷ ನಾಯಕರು ಏನಾದರೂ ಹೇಳಲಿ. ನಾವು ಪ್ರತಿಕ್ರಿಯಿಸುವುದಿಲ್ಲ ಎಂದು ಟಿವಿ9ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಉಭಯ ಸದನಗಳ ಕಲಾಪ ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ. ವಿಧಾನಸಭೆ ಕಲಾಪ ಹಾಗೂ ವಿಧಾನಪರಿಷತ್ ಕಲಾಪವನ್ನು 3 ಗಂಟೆಗೆ ಮುಂದೂಡಲಾಗಿದೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಆರಂಭ; ವಿಧಾನಸಭೆ ಕಲಾಪ ನೇರ ಪ್ರಸಾರ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ; ರಾತ್ರೋರಾತ್ರಿ ಮಹಾಮೇಳ ವೇದಿಕೆ ನಿರ್ಮಿಸಿದ ಎಂಇಎಸ್
Published On - 2:54 pm, Mon, 13 December 21