ಬೆಳಗಾವಿಯಲ್ಲಿ ಬಸ್​ಗಾಗಿ ಪ್ರತಿಭಟನೆ ನಡೆಸಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ; ಓರ್ವ ವಿದ್ಯಾರ್ಥಿನಿ ಸಾವು, ಇಬ್ಬರಿಗೆ ಗಂಭೀರ ಗಾಯ

| Updated By: ಆಯೇಷಾ ಬಾನು

Updated on: Jan 01, 2023 | 1:54 PM

ಬಸ್ ವ್ಯವಸ್ಥೆ ಇಲ್ಲದಕ್ಕೆ ಈ ಮೂವರು ವಿದ್ಯಾರ್ಥಿನಿಗಳು ನಿನ್ನೆ ಪ್ರತಿಭಟನೆ ನಡೆಸಿದ್ದರು. ಮೃತ ಅಕ್ಕವ್ವ 15 ದಿನದ ಹಿಂದೆ ಶಾಸಕ ಮಹಾಂತೇಶ ದೊಡ್ಡಗೌಡರಿಗೆ ಬಸ್​ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಿದ್ದರು.

ಬೆಳಗಾವಿಯಲ್ಲಿ ಬಸ್​ಗಾಗಿ ಪ್ರತಿಭಟನೆ ನಡೆಸಿದ್ದ ಮೂವರು ವಿದ್ಯಾರ್ಥಿನಿಯರಿಗೆ  ಕಾರು ಡಿಕ್ಕಿ; ಓರ್ವ ವಿದ್ಯಾರ್ಥಿನಿ ಸಾವು, ಇಬ್ಬರಿಗೆ ಗಂಭೀರ ಗಾಯ
ಶಾಸಕ ಮಹಾಂತೇಶ ದೊಡ್ಡಗೌಡರಿಗೆ ಬಸ್​ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಿದ್ದ ಮೃತ ಅಕ್ಕವ್ವ
Follow us on

ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ನಿಚ್ಛಣಿಕೆ ಗ್ರಾಮದಲ್ಲಿ ನಡೆದುಕೊಂಡು ಹೊರಟಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದು ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 8ನೇ ತರಗತಿಯ ವಿದ್ಯಾರ್ಥಿನಿ ಅಕ್ಕವ್ವ ಹೂಲಿಕಟ್ಟಿ ಮೃತ ದುರ್ದೈವಿ.

ಬಸ್ ವ್ಯವಸ್ಥೆ ಇಲ್ಲದಕ್ಕೆ ಈ ಮೂವರು ವಿದ್ಯಾರ್ಥಿನಿಗಳು ನಿನ್ನೆ ಪ್ರತಿಭಟನೆ ನಡೆಸಿದ್ದರು. ಮೃತ ಅಕ್ಕವ್ವ 15 ದಿನದ ಹಿಂದೆ ಶಾಸಕ ಮಹಾಂತೇಶ ದೊಡ್ಡಗೌಡರಿಗೆ ಬಸ್​ ವ್ಯವಸ್ಥೆ ಕಲ್ಪಿಸುವಂತೆ ಮನವಿ ಸಲ್ಲಿಸಿದ್ದರು. ಪ್ರತಿಭಟನೆ ನಡೆಸಿದರೂ ಅಧಿಕಾರಿಗಳು ಬಸ್ ವ್ಯವಸ್ಥೆ ಕಲ್ಪಿಸಿಲ್ಲ. ಬಸ್ ಇಲ್ಲದಿದ್ದಕ್ಕೆ ನಡೆದುಕೊಂಡು ಹೊರಟಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿಯಾಗಿ ಅವಘಡ ಸಂಭವಿಸಿದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಕಾರು-ಟ್ರಕ್ ಡಿಕ್ಕಿಹೊಡೆದು ಅಪಘಾತ: 5 ಮಂದಿ ಸಾವು

ಪಾರ್ಟಿ ವೇಳೆ ಕುಡಿದ ಮತ್ತಿನಲ್ಲಿ ಗಲಾಟೆ; ಯುವಕ ಸಾವು

ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆಯ ಸಂಭ್ರಮದಲ್ಲಿ ಪಾರ್ಟಿ ಮಾಡುವ ವೇಳೆ ಕುಡಿದ ಮತ್ತಿನಲ್ಲಿ ಬಿಯರ್​ ಬಾಟಲಿಯಿಂದ ತಲೆಗೆ ಹೊಡೆದು ಯುವಕನ ಕೊಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಐಮರೆಡ್ಡಿಹಳ್ಳಿ ಗ್ರಾಮದ ಐಮರೆಡ್ಡಿಹಳ್ಳಿಯ ಮಂಜಮ್ಮ ಡಾಬಾದಲ್ಲಿ ಬಿಯರ್ ಬಾಟಲಿಯಿಂದ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ದೊಡ್ಡ ಗಂಜೂರಿನ ನವೀನ್(28)ಕೊಲೆಯಾದ ದುರ್ದೈವಿ.

ನೂತನ ಹೊಸ ವರ್ಷಾಚರಣೆಗೆ ಸ್ನೇಹಿತರೊಂದಿಗೆ ಪಾರ್ಟಿ ಮಾಡುವ ವೇಳೆ ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಪರಸ್ಪರ ಹೊಡೆದಾಡಿಕೊಂಡಿದ್ದು ಈ ವೇಳೆ ಸ್ನೇಹಿತರು ನವೀನ್ ತಲೆಗೆ ಬಿಯರ್ ಬಾಟಲಿಯಿಂದ ಒಡೆದು ಅದೇ ಬಾಟಲಿಯ ಚೂಪಾದ ಗಾಜಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಇನ್ನು ಘಟನೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟೆ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮೂವರು ಕೊಲೆ ಪ್ರಕರಣದ ಆರೋಪಿಗಳು ಎನ್ನಲಾದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:54 pm, Sun, 1 January 23