AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಡಲಗಿ ಪಟ್ಟಣದಲ್ಲಿ ಏಳು ಭ್ರೂಣಗಳು ಪತ್ತೆ ಪ್ರಕರಣ: ಬೇಜವಾಬ್ದಾರಿ ತೋರಿದ್ದ ಅಧಿಕಾರಿ ರಕ್ಷಣೆಗೆ ನಿಂತ ಆರೋಗ್ಯ ಇಲಾಖೆ

ಜೂನ್.24ರಂದು ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹಳ್ಳದಲ್ಲಿ ಭ್ರೂಣಗಳು ಪತ್ತೆಯಾಗಿದ್ದವು. ಆಸ್ಪತ್ರೆ ಹಾಗೂ ಸ್ಕ್ಯಾನ್ ಸೆಂಟರ್‌ಗಳಲ್ಲಿ ದಾಖಲೆಗಳನ್ನ ನಿರ್ವಹಣೆ ಮಾಡದೇ ಗರ್ಭಕ್ಕೆ ಕತ್ತರಿ ಹಾಕಲಾಗಿತ್ತು.

ಮೂಡಲಗಿ ಪಟ್ಟಣದಲ್ಲಿ ಏಳು ಭ್ರೂಣಗಳು ಪತ್ತೆ ಪ್ರಕರಣ: ಬೇಜವಾಬ್ದಾರಿ ತೋರಿದ್ದ ಅಧಿಕಾರಿ ರಕ್ಷಣೆಗೆ ನಿಂತ ಆರೋಗ್ಯ ಇಲಾಖೆ
ಮೂಡಲಗಿ ಪಟ್ಟಣದಲ್ಲಿ ಏಳು ಭ್ರೂಣಗಳು ಪತ್ತೆ ಪ್ರಕರಣ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 01, 2022 | 11:41 AM

Share

ಬೆಳಗಾವಿ: ಮೂಡಲಗಿ ಪಟ್ಟಣದಲ್ಲಿ ಏಳು ಭ್ರೂಣಗಳು (Embryos) ಪತ್ತೆ ವಿಚಾರ ಪ್ರಕರಣದಲ್ಲಿ ಬೇಜವಾಬ್ದಾರಿ ತೋರಿದ್ದ ಅಧಿಕಾರಿ ರಕ್ಷಣೆಗೆ ಆರೋಗ್ಯ ಇಲಾಖೆ ನಿಂತ್ತಿದೆ. ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎ.ವಿ ಕಿವುಡಸನ್ನವರ್‌ಗೆ ಇಲಾಖೆಯಿಂದಲೇ ಶ್ರೀರಕ್ಷೆ ದೊರೆತಿದ್ದು, ಕೆಪಿಎಂಇ, ಪಿಸಿ ಆ್ಯಂಡ್ ಪಿಎನ್‌ಡಿಟಿ ಜವಾಬ್ದಾರಿಯನ್ನ ಇಲಾಖೆ ವಾಪಾಸ್ ಪಡೆದಿದೆ. ಸ್ಕ್ಯಾನ್ ಸೆಂಟರ್ ಮತ್ತು ಆಸ್ಪತ್ರೆಗಳ ಪರಿಶೀಲನೆ ಮಾಡದೇ ಅಧಿಕಾರಿಗಳು ಬೇಜವಾಬ್ದಾರಿ ತೋರಿದ್ದರು. ಅಧಿಕಾರಿ ಬೇಜವಾಬ್ದಾರಿ ಹಿನ್ನೆಲೆ ವೆಂಕಟೇಶ ಆಸ್ಪತ್ರೆಯಲ್ಲಿ ಏಳು ಭ್ರೂಣ ಪತ್ತೆಯಾಗಿದ್ದವು. ಏಳು ಭ್ರೂಣಗಳನ್ನ ಒಂದು ವರ್ಷದಿಂದ ಸಿಬ್ಬಂದಿಗಳು ತೆಗೆದಿಟ್ಟು ಹಳ್ಳಕ್ಕೆ ಎಸೆದಿದ್ದರು. ಜೂನ್.24ರಂದು ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಹಳ್ಳದಲ್ಲಿ ಭ್ರೂಣಗಳು ಪತ್ತೆಯಾಗಿದ್ದವು. ಆಸ್ಪತ್ರೆ ಹಾಗೂ ಸ್ಕ್ಯಾನ್ ಸೆಂಟರ್‌ಗಳಲ್ಲಿ ದಾಖಲೆಗಳನ್ನ ನಿರ್ವಹಣೆ ಮಾಡದೇ ಗರ್ಭಕ್ಕೆ ಕತ್ತರಿ ಹಾಕಲಾಗಿತ್ತು. ಇದರಿಂದ ಲಿಂಗಪತ್ತೆ ಮಾಡಿ ಆಪರೇಷನ್ ಮಾಡಲಾಗುತ್ತಿದೆ ಅನ್ನೋ ಅನುಮಾನ ಕೂಡ ವ್ಯಕ್ತವಾಗಿತ್ತು.

ಇದನ್ನೂ ಓದಿ: Translated Story: ನೆರೆನಾಡ ನುಡಿಯೊಳಗಾಡಿ; ‘ನೀನು ನಿನ್ನ ಹೊಸ ತಾಯಿಯನ್ನು ನೋಡಿರುವೆಯಾ?’

ಸಿಎಂ ಬಸವರಾಜ ಬೊಮ್ಮಾಯಿ ಕೂಡ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಇದೀಗ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ ಅಧಿಕಾರಿಯ ಬೆನ್ನಿಗೆ ಆರೋಗ್ಯ ಇಲಾಖೆ ನಿಂತ್ತಿದೆ. ಆಸ್ಪತ್ರೆ, ಸ್ಕ್ಯಾನ್ ಸೆಂಟರ್‌ಗಳಲ್ಲಿ ಪರಿಶೀಲನೆ ಮಾಡದೇ ಇರುವುದರಿಂದ, ಈ ಘಟನೆ ಸಂಭವಿಸಿದೆ ಅಂತಾ ಜವಾಬ್ದಾರಿ ವಾಪಸ್ ಪಡೆದ ಆದೇಶ ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ. ಆದೇಶ ಪತ್ರದಲ್ಲೇ ಘಟನೆ ಕಾರಣ ಕಿವುಡಸನ್ನವರ್ ಅಂತಿದ್ರೂ ಇಲಾಖೆ ಕ್ರಮ ಕೈಗೊಂಡಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮುಂದುವರೆಯುವಂತೆ ಆದೇಶಿಸಲಾಗಿದೆ. ಕೆಪಿಎಂಇ-ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆ 201ರ ಅದಿನೀಯಮದ ಪ್ರಕಾರ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಬಿ.ಎನ್.ತುಕ್ಕಾರ ಅವರನ್ನ ಕೆಪಿಎಂಇ ಅಧಿಕಾರಿಯಾಗಿ ನೇಮಕಗೊಳಿಸಿ ಆದೇಶಿಸಲಾಗಿದೆ.

ಏನಿದು ಪ್ರಕರಣ?

ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಸಮೀಪ ಇರುವ ಹಳ್ಳದಲ್ಲಿ ನಾಲ್ಕು ನವಜಾತ ಶಿಶುಗಳ ಮೃತ ದೇಹ ಶುಕ್ರವಾರ ಪತ್ತೆಯಾಗಿತ್ತು. ಒಟ್ಟು ಐದು ಬಾಟಲ್​ಗಳಲ್ಲಿ ಏಳು ಭ್ರೂಣಗಳನನ್ನು ಹಾಕಿ ಹಳ್ಳದಲ್ಲಿ ಬಿಟ್ಟಿದ್ದರು. ಇದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ತಿಳಿಸಿದ್ದು, ಸ್ಥಳಕ್ಕೆ ಭೇಡಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದರು.

185ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ರೇಡ್:

ಬೆಳಗಾವಿ ಜಿಲ್ಲೆಯಾದ್ಯಂತ ಒಂದೇ ದಿನ 185ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ರೇಡ್ ಮಾಡಲಾಗಿದೆ. ಬೆಳಗಾವಿ ತಾಲೂಕು 64, ಅಥಣಿ 24, ಸವದತ್ತಿ 8, ರಾಯಬಾಗ 8, ಚಿಕ್ಕೋಡಿ 18, ಖಾನಾಪುರ 8, ರಾಮದುರ್ಗ 6, ಗೋಕಾಕ್ 40, ಬೈಲಹೊಂಗಲ 6 ಮತ್ತು ಹುಕ್ಕೇರಿ ಪಟ್ಟಣದಲ್ಲಿ 3 ಸ್ಕ್ಯಾನಿಂಗ್ ಸೆಂಟರ್ ಮೇಲೆ ದಾಳಿ ಮಾಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲಾಗಿದೆ.

ಇದನ್ನೂ ಓದಿ: ಎಟಿಎಫ್, ಡೀಸೆಲ್, ಪೆಟ್ರೋಲ್ ರಫ್ತಿನ ಮೇಲೆ ಸರ್ಕಾರದ ತೆರಿಗೆ ಹೆಚ್ಚಳ; ದೇಶೀಯ ಕಚ್ಚಾ ತೈಲಕ್ಕೆ ಭಾರೀ ತೆರಿಗೆ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್