AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು; ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹ

ಮುಖ್ಯಮಂತ್ರಿ ಬದಲಾವಣೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರ ಕರ್ನಾಟಕ ಕಾಂಗ್ರೆಸ್​ನಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಒಕ್ಕಲಿಗ ಸ್ವಾಮೀಜಿಯೊಬ್ಬರು ಆಗ್ರಹಿಸಿದ್ದು, ಆದರೆ ಬೆನ್ನಲ್ಲೇ ಇದೀಗ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕೆಂದು ಶ್ರೀಶೈಲ ಜಗದ್ಗುರುಗಳು ಒತ್ತಾಯಿಸಿದ್ದಾರೆ.

ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು; ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹ
ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ
ಸಹದೇವ್​ ಮಾನೆ
| Edited By: |

Updated on: Jun 28, 2024 | 1:13 PM

Share

ಚಿಕ್ಕೋಡಿ, ಜೂನ್ 28: ಡಿಸಿಎಂ ಡಿಕೆ ಶಿವಕುಮಾರ್​​ಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಬೆನ್ನಲ್ಲೇ ಇದೀಗ ವಿವಿಧ ಸಮುದಾಯಗಳ ಸ್ವಾಮೀಜಿಗಳು ಆ ಬಗ್ಗೆ ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ. ಇದೀಗ, ಪಂಚ ಪೀಠದಿಂದ ಲಿಂಗಾಯತ ಮುಖ್ಯಮಂತ್ರಿಗೆ ಬೇಡಿಕೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಮಾತನಾಡಿದ ಶ್ರೀಶೈಲ ಜಗದ್ಗುರುಗಳು, ಮುಖ್ಯಮಂತ್ರಿ ಸ್ಥಾನದಲ್ಲಿ ಬದಲಾವಣೆ ಹಾಗೂ ಡಿಸಿಎಂ ಸ್ಥಾನಗಳನ್ನ ಹೆಚ್ಚುವರಿ ಮಾಡಿದರೆ ಲಿಂಗಾಯತರಿಗೆ ಸ್ಥಾನ ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ. ಎಂಬಿ ಪಾಟೀಲ್, ಈಶ್ವರ ಖಂಡ್ರೆ, ಎಸ್ಎಸ್ ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಇಂತಹವರಿಗೆ ಅವಕಾಶ ನೀಡಬೇಕು. ಕಾಶಿ, ಉಜ್ಜಯಿನಿ ಜಗದ್ಗುರುಗಳ ಜೊತೆಗೂ ಈ ವಿಚಾರದಲ್ಲಿ ಚರ್ಚೆ ಮಾಡಲಾಗಿದೆ ಎಂದರು.

ಮುಂದುವರಿದು, ಒಂದು ವೇಳೆ ಆರಂಭದಲ್ಲಿ ಮುಖ್ಯಮಂತ್ರಿ ಆಗುವ ಸಂದರ್ಭದಲ್ಲಿ ಒಂಡಂಬಡಕೆ ಮಾಡಿಕೊಂಡಿದ್ದರೆ, ಅದರ ಪ್ರಕಾರ ನಡೆದುಕೊಳ್ಳಲಿ ಎಂದು ಶ್ರೀಶೈಲ ಜಗದ್ಗುರುಗಳು ಹೇಳಿದ್ದಾರೆ.

ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲೇ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ, ಸಿದ್ದರಾಮಯ್ಯರನ್ನು ಉದ್ದೇಶಿಸಿ, ನಿಮಗೆ ಅನುಭವ ಇದೆ, ಈಗ ಡಿಕೆ ಶಿವಕುಮಾರ್​​ಗೆ ಅವಕಾಶ ಮಾಡಿಕೊಡಿ ಎಂದು ಹೇಳಿದ್ದು ಚರ್ಚೆಗೆ ಗ್ರಾಸವಾಗಿತ್ತು. ಪ್ರತಿಪಕ್ಷ ಬಿಜೆಪಿ ಕೂಡ ಈ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿತ್ತು. ಸ್ವಾಮೀಜಿ ಸ್ವಯಂಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಅವರೇ ಹೇಳಿಸಿದರೋ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯನವರೇ ದಯವಿಟ್ಟು ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ: ಚಂದ್ರಶೇಖರಶ್ರೀ ಮನವಿ

ಸ್ವಾಮೀಜಿ ಮನವಿಯಿಂದ ತುಸು ವಿಚಲಿತರಾದಂತೆ ಕಂಡುಬಂದಿದ್ದ ಸಿದ್ದರಾಮಯ್ಯ, ನಂತರ ಆ ಬಗ್ಗೆ ಪ್ರತಿಕ್ರಿಯಿಸಿದ್ದರು. ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ ಎಂದಿದ್ದರು. ಮತ್ತೊಂದೆಡೆ, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರ ಕೂಡ ರಾಜ್ಯ ಕಾಂಗ್ರೆಸ್​ನಲ್ಲಿ ಗೊಂದಲ ಸೃಷ್ಟಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More