ಈಶ್ವರಪ್ಪ, ರಮೇಶ್ ಜೊತೆ ದೂರವಾಣಿಯಲ್ಲಿ ಮಾತಾನಾಡಿದ್ದೇನೆ, ಅವರ ವಿಚಾರ ನನ್ನ ತಲೆಯಲ್ಲಿದೆ – ಸಿಎಂ ಬೊಮ್ಮಾಯಿ

ಶಾಸಕ ರಮೇಶ್ ಜಾರಕಿಹೊಳಿ ಮತ್ತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈಶ್ವರಪ್ಪ, ರಮೇಶ್ ಜೊತೆ ದೂರವಾಣಿಯಲ್ಲಿ ಮಾತಾನಾಡಿದ್ದೇನೆ, ಅವರ ವಿಚಾರ ನನ್ನ ತಲೆಯಲ್ಲಿದೆ - ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Edited By: ವಿವೇಕ ಬಿರಾದಾರ

Updated on: Dec 20, 2022 | 5:18 PM

ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ. ಕೆ.ಎಸ್.ಈಶ್ವರಪ್ಪ (K. S. Eshwarappa) ಅವರೊಂದಿಗೆ ದೂರವಾಣಿ ಮೂಲಕ ಸುಮಾರು 13 ನಿಮಿಷಗಳ ಕಾಲ ಮಾತಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರೂ ಕೂಡ ಸಕಾರಾತ್ಮಕವಾಗಿದ್ದಾರೆ. ಮಿಕ್ಕ ವಿಚಾರಗಳನ್ನು ವೈಯಕ್ತಿಕವಾಗಿ ಹೇಳಲಾಗುವುದು. ಕೆಲವು ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು.

ಸಿಬಿಐ ದಾಳಿ

ಸಿಬಿಐ ದಾಳಿ ಬಗ್ಗೆ ಡಿ.ಕೆ ಶಿವಕುಮಾರ್ ಅವರ ಹೇಳಿಕೆಗೆ ಉತ್ತರಿಸಿದ ಅವರು ಸಂವಿಧಾನಾತ್ಮಕವಾಗಿ ಸ್ವಾಯತ್ತವಾಗಿರುವ ಸಂಸ್ಥೆ ಅವರ ಬಳಿ ಇರುವ ಪ್ರಕರಣ ಇದೆ. ಅದರ ಮೇಲೆ ಅವರು ಕ್ರಮ ಕೈಗೊಳ್ಳುತ್ತಾರೆ. ಇದು ಡಿ.ಕೆ.ಶಿವಕುಮಾರ್ ಅವರಿಗೂ ತಿಳಿದಿರುವ ವಿಚಾರ ಎಂದು ಹೇಳಿದರು.

ಹಾಲಾಲ್ ಕಟ್

ಹಾಲಾಲ್ ಕುರಿತು ಸುದ್ದಿದಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ ಹಾಲಾಲ್ ವಿಷಯಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Web

TV9 Kannada

Read More
Loading...
Unable to load recommendations.
Follow Us