AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಗದ್ದೆಯಲ್ಲಿ ಶವ ಹೂತ ಪತ್ನಿ: 6 ತಿಂಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದೇ ರೋಚಕ!

ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕೆ ಆಕೆ ತನ್ನ ಪ್ರಿಯಕರನ ಜೊತೆ ಸೇರಿ ತಾಳಿ ಕಟ್ಟಿದ್ದ ಪತಿಗೇ ಚಟ್ಟ ಕಟ್ಟಿದ್ದಳು. ಯಾರಿಗೂ ಅನುಮಾನ ಬಾರದಂತೆ ಶವವನ್ನು ಗದ್ದೆಯಲ್ಲಿ ಹೂತು, ಗಂಡ ಪರ ಊರಿಗೆ ಹೋಗಿದ್ದಾನೆ ಎಂದು ಹೇಳುತ್ತಾ ಓಡಾಡಿಕೊಂಡಿದ್ದಳು. ಆದರೆ ಅದೊಂದು ಘಟನೆ ಈಕಯ ಕಪಟ ನಾಟಕವನ್ನು ಕುಟುಂಬಸ್ಥರ ಎದುರು ಬಯಲು ಮಾಡಿದೆ. ತಪ್ಪು ಮಾಡಿದ್ದ ಆರೋಪಿಗಳು ಬರೋಬ್ಬರಿ 6 ತಿಂಗಳ ಬಳಿಕ ಜೈಲು ಸೇರಿದ್ದಾರೆ.

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಗದ್ದೆಯಲ್ಲಿ ಶವ ಹೂತ ಪತ್ನಿ: 6 ತಿಂಗಳ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದೇ ರೋಚಕ!
ಮೃತ ವ್ಯಕ್ತಿ ಮತ್ತು ಆರೋಪಿಗಳುImage Credit source: Tv9 Kannada
ಸಹದೇವ್​ ಮಾನೆ
| Edited By: |

Updated on: Aug 10, 2026 | 12:04 PM

Share

ಮುಖ್ಯಾಂಶಗಳು

  • ನಾಪತ್ತೆ ಪ್ರಕರಣ ಬೆನ್ನತ್ತಿದ್ದ ಪೊಲೀಸರಿಗೇ ಶಾಕ್​​
  • ಪ್ರಿಯಕರನ ಜೊತೆ ಸೇರಿ ಪತಿಗೇ ಚಟ್ಟಕಟ್ಟಿದ್ದ ಪತ್ನಿ!
  • ಕೊಲೆ ನಡೆದು 6 ತಿಂಗಳ ಬಳಿಕ ಆರೋಪಿಗಳ ಬಂಧನ

ಚಿಕ್ಕೋಡಿ, ಆಗಸ್ಟ್​​ 10: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆಂಬ ಕಾರಣಕ್ಕೆ ಪ್ರಿಯಕರನ ಜೊತೆ ಸೇರಿಕೊಂಡು ಗಂಡನನ್ನೇ ಕೊಂದು, ಶವವನ್ನು ಜಮೀನಿನಲ್ಲಿ ಹೂತುಹಾಕಿದ್ದ ಪತ್ನಿ 6 ತಿಂಗಳ ಬಳಿಕ ಪೊಲೀಸರ ಅತಿಥಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ನಡೆದಿದೆ.  ರಾಘು ಗಾವಡೆ(40) ಕೊಲೆಯಾದ ವ್ಯಕ್ತಿಯಾಗಿದ್ದು, ಇವರ ಪತ್ನಿ ಬಂಗಾರಿ ಗಾವಡೆ, ಪ್ರಿಯಕರ ರಾಮು ರಾಣಗೆ ಬಂಧಿತ ಆರೋಪಿಗಳಾಗಿದ್ದಾರೆ. ಫೆ.7ರಂದೇ ರಾಘು ಗಾವಡೆ ಕೊಲೆ ನಡೆದಿದ್ದು, ಪತಿ ಪರ ಊರಿಗೆ ಹೋಗಿದ್ದಾನೆಂಬ ಪತ್ನಿಯ ನಾಟಕವನ್ನು ಪೊಲೀಸರು ಕುಟುಂಬಸ್ಥರ ಎದುರು ಕೊನೆಗೂ ಬಯಲು ಮಾಡಿದ್ದಾರೆ.

ಘಟನೆ ಏನು?

ಬಂಗಾರಿ ಗಾವಡೆಗೆ ರಾಮು ರಾಣ ಎಂಬಾತನ ಜೊತೆ ಅಕ್ರಮ ಸಂಬಂಧವಿತ್ತು. ಹೀಗಾಗಿ ಪತ್ನಿ ಮೇಲೆ ಸಂಶಯ ವ್ಯಕ್ತಪಡಿಸಿ ರಾಘು ಜಗಳ ಮಾಡುತ್ತಿದ್ದ. ಈ ನಡುವೆ ಫೆ.7ರಂದು ರಾತ್ರಿಯೂ ಕುಡಿದು ಬಂದು ಗಲಾಟೆ ಮಾಡಿದ್ದ. ಇದರಿಂದ ಕೋಪಗೊಂಡು ಪ್ರಿಯಕರ ರಾಮುಗೆ ಕರೆ ಮಾಡಿ ಮನೆಗೆ ಕರೆಸಿಕೊಂಡಿದ್ದ ಬಂಗಾರಿ, ಮಲಗಿದ್ದಾಗ ರಾಘುವಿನ ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಳು. ನಂತರ ಮಧ್ಯರಾತ್ರಿ ಟಾಟಾಏಸ್​ ವಾಹನದಲ್ಲಿ ಜಮೀನಿಗೆ ಶವ ಸಾಗಾಟ ಮಾಡಿದ್ದ ಆರೋಪಿಗಳು, ಫೆ.8ರಂದು ರಾತ್ರಿ‌ ಕಬ್ಬಿನ ಗದ್ದೆಯಲ್ಲಿ ಶವ ಹೂತಿದ್ದರು ಎಂಬುದು ತನಿಖೆ ವೇಳೆ ಗೊತ್ತಾಗಿದೆ.

ಇದನ್ನೂ ಓದಿ: ಶಿವಾನಂದ ನೀಲಣ್ಣನವರ್​​ಗೆ ಇಡಿ ಶಾಕ್! ಬೆಳಗಾವಿಯಲ್ಲಿ ಮೂರು ಕಡೆಗಳಲ್ಲಿ ದಾಳಿ

ಕೊಲೆ ವಿಚಾರ ಬಯಲಾಗಿದ್ದೇಗೆ?

ಗಂಡನನ್ನು ಪ್ರಿಯಕರನ ಜೊತೆ ಸೇರಿ ಕೊಂದ ಬಳಿಕ ಅದನ್ನು ಮರೆಮಾಚಲು ಆತ ಕುರಿ ಕಾಯಲು ಬೇರೆ ಊರಿಗೆ ಹೋಗಿದ್ದಾನೆಂದು ಪತ್ನಿ ಬಂಗಾರಿ ಹೇಳಿಕೊಂಡು ತಿರುಗಾಡಿದ್ದಳು. ಆದರೆ ಕೆಲ ತಿಂಗಳ ಹಿಂದೆ ರಾಘುವಿನ ತಾಯಿ ಅನಾರೋಗ್ಯದಿಂದ ಮೃತಪಟ್ಟಿದ್ದರೂ, ಅಂತ್ಯಕ್ರಿಯೆಗೆ ಆತ ಬಾರದಿದ್ದಾಗ ಸಹೋದರನಿಗೆ ಸಂಶಯ ಬಂದಿದೆ. ಇದೇ ಕಾರಣಕ್ಕೆ ಖಡಕಲಾಟ ಠಾಣೆಗೆ ಹೋಗಿ ಆತ ಮಿಸ್ಸಿಂಗ್ ಕೇಸ್ ದಾಖಲಿಸಿದ್ದ. ಜೊತೆಗೆ ಅಣ್ಣನ ಪತ್ನಿ ಬಂಗಾರಿ ಮೇಲೆಯೇ ಸಂಶಯ ವ್ಯಕ್ತಪಡಿಸಿದ್ದ. ಹೀಗಾಗಿ ಬಂಗಾರಿಯನ್ನ ಕರೆದು ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆ ಮಾಡಿರೋದಾಗಿ ಆಕೆ ತಪ್ಪೊಪ್ಪಿಕೊಂಡಿದ್ದು, ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಘಟನೆ ಸಂಬಂಧ ಖಡಕಲಾಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ