AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕೋಡಿ ಭೂದಾಖಲೆಗಳ ಸಹಾಯಕ ನಿರ್ದೇಶಕ

ಸರ್ವೆ ಕಾರ್ಯ ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಚಿಕ್ಕೋಡಿ ಭೂದಾಖಲೆಗಳ ಸಹಾಯಕ ನಿರ್ದೇಶಕ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕೋಡಿ ಭೂದಾಖಲೆಗಳ ಸಹಾಯಕ ನಿರ್ದೇಶಕ
ಬೆಳಗಾವಿಯಲ್ಲಿ ಲೋಕಾಯುಕ್ತ ದಾಳಿ
Rakesh Nayak Manchi
|

Updated on: May 19, 2023 | 8:16 PM

Share

ಬೆಳಗಾವಿ: ಸರ್ವೆ ಕಾರ್ಯ ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಭೂದಾಖಲೆಗಳ ಸಹಾಯಕ ನಿರ್ದೇಶಕ ಲೋಕಾಯುಕ್ತ (Lokayukta Raid) ಪೊಲೀಸರ ಕೈಗೆ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಎಸ್​ಎಂ ಕಲ್ಯಾಣ ಶೆಟ್ಟಿ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕೋಡಿ ಭೂದಾಖಲೆ‌ ಇಲಾಖೆ (Chikkodi Land Records Department) ಅಧಿಕಾರಿ. ಸಿದ್ದಪ್ಪ ಹಾಲಪ್ಪ ಪೂಜಾರಿ ಎಂಬುವರಿಂದ ಲಂಚ ಸ್ವೀಕರಿಸುವಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಕಲ್ಯಾಣ ಶೆಟ್ಟಿ ಅವರನ್ನು ಬಂಧಿಸಿದ್ದಾರೆ.

ತಮ್ಮ ಜಾಗದ ಸರ್ವೆ ಕಾರ್ಯ ಮಾಡಿಕೊಂಡುವಂತೆ ರೈತ ಸಿದ್ದಪ್ಪ ಹಾಲಪ್ಪ ಪೂಜಾರಿ ಎಂಬವರು ಅರ್ಜಿ ಸಲ್ಲಿಸಿದ್ದರು. ಆದರೆ ಸರ್ವೆ ಕಾರ್ಯಕ್ಕೆ ಭೂದಾಖಲೆಗಳ ಸಹಾಯಕ ನಿರ್ದೇಶಕ ಕಲ್ಯಾಣ ಶೆಟ್ಟಿ ಅವರು 6 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಸಿದ್ದಪ್ಪ ಅವರು ಲೋಕಾಯುಕ್ತ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ದೂರಿನ ಅನ್ವಯ ಭ್ರಷ್ಟ ಅಧಿಕಾರಿಯ ಚಳಿ ಬಿಡಿಸಲು ಟ್ರ್ಯಾಪ್ ನಡೆಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ಗದಗ ನಗರಸಭೆ ಮೇಲೆ ಲೋಕಾಯುಕ್ತ ದಾಳಿ, ಅಸಿಸ್ಟೆಂಟ್ ಇಂಜಿನಿಯರ್ ಬಲೆಗೆ

ಅದರಂತೆ ಸಿದ್ದಪ್ಪ ಹಾಲಪ್ಪ ಪೂಜಾರಿ ಅವರಿಂದ ಲಂಚದ ಹಣವಾಗಿ 6 ಸಾವಿರ ರೂಪಾಯಿ ಪಡೆಯುವಾಗ ಎಂಟ್ರಿ ಕೊಟ್ಟ ಲೋಕಾಯುಕ್ತ ಪೊಲೀಸರು ಹಣದ ಸಹಿತ ಕಲ್ಯಾಣ ಶೆಟ್ಟಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್​​ಪಿ ಅನಿತಾ ಹದ್ದನ್ನವರ್ ಅವರ ನೇತೃತ್ವದಲ್ಲಿ ನಡೆದ ದಾಳಿ ಇದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ