AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕೋಡಿ: ನಿಪ್ಪಾಣಿ ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಪತ್ರ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಶ್ರೀರಾಮ ಮಂದಿರವನ್ನು ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ ಎಂದು ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ದುಷ್ಕರ್ಮಿಗಳು ಬೆದರಿಕೆ ಪತ್ರ ಬರೆದಿದ್ದಾರೆ. ಕಳೆದ ತಿಂಗಳು ಫೆಬ್ರವರಿ 7 ಹಾಗೂ 28ನೇ ತಾರೀಖಿನಂದು ಪತ್ರಗಳು ಬಂದಿವೆ.

ಚಿಕ್ಕೋಡಿ: ನಿಪ್ಪಾಣಿ ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ ಪತ್ರ
ಬಾಂಬ್​ ಬೆದರಿಕೆ ಪತ್ರ
ಸಹದೇವ್​ ಮಾನೆ
| Edited By: ವಿವೇಕ ಬಿರಾದಾರ|

Updated on:Mar 09, 2024 | 2:16 PM

Share

ಚಿಕ್ಕೋಡಿ, ಮಾರ್ಚ್ 09: ನಿಪ್ಪಾಣಿ ಪಟ್ಟಣದ (Nippani) ಶ್ರೀರಾಮ ಮಂದಿರವನ್ನು (Sri Ram Mandir) ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ ಎಂದು ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ದುಷ್ಕರ್ಮಿಗಳು ಬೆದರಿಕೆ ಪತ್ರ (Bomb Threat Letter) ಬರೆದಿದ್ದಾರೆ. ಕಳೆದ ತಿಂಗಳು ಫೆಬ್ರವರಿ 7 ಹಾಗೂ 28 ರಂದು ಹಿಂದಿ ಭಾಷೆಯಲ್ಲಿ ಎರಡು ಪತ್ರಗಳು ಬಂದಿದ್ದು, ಮುಂದಿನ 20, 21 ತಾರೀಖಿನ ಒಳಗಡೆ ರಾಮ‌ ಮಂದಿರವನ್ನ ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ. ಎಂದು ಅನಾಮಧೇಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ. ದುಷ್ಕರ್ಮಿಗಳ ಪತ್ರ ಸದ್ಯ ಸಂಚಲನ ಸೃಷ್ಟಿಸಿದೆ.

ಶ್ರೀರಾಮ ಮಂದಿರ 101 ವರ್ಷಗಳ ಇತಿಹಾಸ ಹೊಂದಿದೆ. ಮೊದಲನೆಯ ಪತ್ರ ರಾಮ ಮಂದಿರ ಗರ್ಭ ಗುಡಿಯಲ್ಲಿ ಪತ್ತೆಯಾಗಿದೆ. ಎರಡೆನೇ ಪತ್ರ ಮಂದಿರದ ಆವರಣದ ಹನುಮಾನ ಮಂದಿರದಲ್ಲಿ ಪತ್ತೆಯಾಗಿವೆ. ಬೆದರಿಕೆ ಪತ್ರ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪೋಲಿಸ್ ಹೈ ಅಲರ್ಟ್ ಆಗಿದ್ದು, ಮಂದಿರದ ಆವರಣದಲ್ಲಿ 14 ಸಿಸಿಟಿವಿಗಳನ್ನು ಅಳವಡಿಸಿಲಾಗಿದೆ. ಒಂದು ಡಿಆರ್ ಪೋಲಿಸ್ ತುಕಡಿಯನ್ನು ಬಂದೋಬಸ್ತ್​​ಗೆ ನಿಯೋಜಿಸಲಾಗಿದೆ. ನಿಪ್ಪಾಣಿ ಶಹರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬೆಂಗಳೂರು ‘ಸ್ಫೋಟ’ಕ ಸುದ್ದಿ: ಕೆಫೆಯಲ್ಲಿ ಬಾಂಬ್‌ ಇಟ್ಟವನಿಗೆ ಇದ್ಯಾ ಇ-ಮೇಲ್ ನಂಟು?

ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ಗೆ ಬೆದರಿಕೆ ಪತ್ರ

ಕೆಲ ದಿನಗಳ ಹಿಂದೆ 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದರೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿತ್ತು. ​ಹಾಗೆ ಬಸ್ , ರೈಲು ನಿಲ್ದಾಣ ಸೇರಿದಂತೆ ಹಲವಾರು ಕಡೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು.

ರಾಮೇಶ್ವರಂ ಕೆಫೆ ಬಾಂಬ್​ ಸ್ಫೋಟ

ಸರಿಯಾಗಿ ಎಂಟು ದಿನಗಳ ಹಿಂದೆ ಮಾರ್ಚ್​​ 01 ರಂದು ಬೆಂಗಳೂರಿನ ವೈಟ್​ಫೀಲ್ಡ್​ ಬಳಿಯ ಕುಂದಹಳ್ಳಿಯಲ್ಲಿ ಬಾಂಬ್​ ಬ್ಲಾಸ್ಟ್​​ ಆಗಿತ್ತು. ಪ್ರಕರಣದ ತನಿಖೆಯನ್ನು ಎನ್​ಐಎ ಅಧಿಕಾರಿಗಳು ನಡೆಸುತ್ತಿತ್ತು, ಆರೋಪಿ ಜಾಡು ಹಿಡಿದು ಹೊರಟಿದ್ದಾರೆ. ಸದ್ಯ ಅಧಿಕಾರಿಗಳು ಆರೋಪಿಗಾಗಿ ಕಲಬುರಗಿ ಜಿಲ್ಲೆಯಲ್ಲಿ ತಲಾಷ್​ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:48 pm, Sat, 9 March 24

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ