ಚಿಕ್ಕೋಡಿ: ರಜೆ ಮುಗಿಸಿ ಕರ್ತವ್ಯಕ್ಕೆ ವಾಪಸ್ ಆಗಿದ್ದ ಯೋಧ (Soldier) ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. ಪಂಜಾಬ್ನಲ್ಲಿ (Punjab) ನಿಪ್ಪಾಣಿ ತಾಲೂಕಿನ ಭೋಜ ಗ್ರಾಮದ ಯೋಧ ಸಾವನ್ನಪ್ಪಿದ್ದಾರೆ. ಪಠಾಣ್ ಕೋಟ ರೈಲು ನಿಲ್ದಾಣದಲ್ಲಿ ವಿನಯ್ ಬಾಬಾಸಾಹೇಬ ಭೋಜೆ (37) ಹೃದಯಾಘಾತದಿಂದ ಮೃತಪಟ್ಟಿದ್ದು, ಸಾವಿನ ಸುದ್ದಿ ಕೇಳಿ ಭೋಜ ಗ್ರಾಮ ಶೋಕ ಸಾಗರದಲ್ಲಿ ಮುಳುಗಿದೆ. ಯೋಧ ಹದಿನೇಳು ವರ್ಷಗಳ ಹಿಂದೆ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದರು. ಕಳೆದ ಹತ್ತು ವರ್ಷಗಳಿಂದ ಮಹಾರಾಷ್ಟ್ರದ ಹಾತಕಣಂಗಲೆ ತಾಲೂಕಿನ ತಿಲವಾಣಿ ಗ್ರಾಮದಲ್ಲಿ ನೆಲೆಸಿದ್ದರು.
ಕಳೆದ ವಾರ ರಜೆಗೆಂದು ಮಹಾರಾಷ್ಟ್ರದ ಹಾತಕಣಂಗಲೆ ತಾಲೂಕಿನ ತಿಲವಾಣಿಗೆ ಬಂದು ರಜೆ ಮುಗಿಸಿ ಪಠಾಣ್ ಕೋಟಗೆ ವಾಪಸಾಗಿದ್ದರು. ರೈಲು ನಿಲ್ದಾಣದಲ್ಲಿ ಇಳಿಯುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತ ಸೈನಿಕ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕೊರೊನಾ ಹಿನ್ನೆಲೆ ಯೋಧನ ಅಂತಿಮ ಸಂಸ್ಕಾರವನ್ನು ಪಂಜಾಬ್ನಲ್ಲೇ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತೀಚೆಗೆ ಹೃದಯಾಘಾತದಿಂದ ಹೆಚ್ಚು ಜನ ಮೃತರಾಗುತ್ತಿದ್ದಾರೆ. ಅದರಲ್ಲೂ ಯೋಧರೂ ಕೂಡಾ ಹೃದಯಾಘಾತದಿಂದ ಉಸಿರು ನಿಲ್ಲಿಸುತ್ತಿದ್ದಾರೆ. ಈ ಹಿಂದೆ ಅಂದರೆ ಜನವರಿ 07ಕ್ಕೆ ಹೃದಯಾಘಾತದಿಂದ ಕರ್ತವ್ಯನಿರತ ಸಿಆರ್ಪಿಎಫ್(CRPF) ಯೋಧ ಸಾವನ್ನಪ್ಪಿದ್ದರು. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅನಿಗಾನಹಳ್ಳಿಯ ಯೋಧ ಸುರೇಶ್(45) ಮೃತಪಟ್ಟಿದ್ದರು. ಜಾರ್ಖಂಡ್ನ ಮಿಲಿಟರಿ ಕ್ಯಾಂಪ್ನಲ್ಲಿ ತರಬೇತಿ ನೀಡುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದರು.
ಇದನ್ನೂ ಓದಿ
weight Loss Tips: ಕಡಿಮೆ ಕ್ಯಾಲೋರಿಯಿರುವ ಈ ಆಹಾರಗಳನ್ನು ಸೇವಿಸಿ: ದೇಹದ ಅತಿಯಾದ ತೂಕ ಇಳಿಸಿಕೊಳ್ಳಿ
Published On - 1:12 pm, Tue, 18 January 22