‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತರಾಗಿದ್ದ ಚಿಕ್ಕೋಡಿ ಚಿಂಚಣಿ ಸಿದ್ಧಪ್ರಭು ಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ಲಿಂಗೈಕ್ಯ

ಡಿಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿಯಾಗಿದ್ದ ಚಿಂಚಣಿ ಸಿದ್ದಸಂಸ್ಥಾನ ಮಠದ ಪೀಠಾಧಿಕಾರಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (63) ಅವರು ಭಾನುವಾರ ಲಿಂಗೈಕ್ಯರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿ ಅವರು ಅಪಾರ ಭಕ್ತರನ್ನು, ಅನುಯಾಯಿಗಳನ್ನು ಹೊಂದಿದ್ದರು. ಹಲವಾರು ದಶಕಗಳಿಂದ ಹತ್ತು ಹಲವಾರು ಕನ್ನಡದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ರಾಜ್ಯದ ಗಮನ ಸೆಳೆದಿದ್ದರು.

‘ಕನ್ನಡದ ಸ್ವಾಮೀಜಿ’ ಎಂದೇ ಖ್ಯಾತರಾಗಿದ್ದ ಚಿಕ್ಕೋಡಿ ಚಿಂಚಣಿ ಸಿದ್ಧಪ್ರಭು ಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ಲಿಂಗೈಕ್ಯ
ಚಿಕ್ಕೋಡಿ ಚಿಂಚಣಿ ಸಿದ್ಧಪ್ರಭು ಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ
Follow us
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Updated By: ಆಯೇಷಾ ಬಾನು

Updated on:Nov 12, 2023 | 2:04 PM

ಚಿಕ್ಕೋಡಿ, ನ.12: ಗಡಿಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಖ್ಯಾತಿಯಾಗಿದ್ದ ಚಿಂಚಣಿ ಸಿದ್ದಸಂಸ್ಥಾನ ಮಠದ ಪೀಠಾಧಿಕಾರಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ (Sri Allamaprabhu Swamiji) (63) ಅವರು ಭಾನುವಾರ ಲಿಂಗೈಕ್ಯರಾಗಿದ್ದಾರೆ. ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಮಹಾಸ್ವಾಮೀಜಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿಗಳ ಅಗಲಿಕೆಯಿಂದ ಭಕ್ತ ವೃಂದ ಶೋಕಸಾಗರದಲ್ಲಿ ಮುಳುಗಿದೆ.

ಗಡಿ ಭಾಗದಲ್ಲಿ ಕನ್ನಡದ ಮಠ, ಕನ್ನಡದ ಸ್ವಾಮೀಜಿ ಎಂದೇ ಚಿಂಚಣಿ ಶ್ರೀಗಳು ಖ್ಯಾತರಾಗಿದ್ದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿ ಅವರು ಅಪಾರ ಭಕ್ತರನ್ನು, ಅನುಯಾಯಿಗಳನ್ನು ಹೊಂದಿದ್ದರು. ಹಲವಾರು ದಶಕಗಳಿಂದ ಹತ್ತು ಹಲವಾರು ಕನ್ನಡದ ಕಾರ್ಯಕ್ರಮಗಳನ್ನು ಮಾಡುವ ಮೂಲಕ ರಾಜ್ಯದ ಗಮನ ಸೆಳೆದಿದ್ದರು. ಕೆಲ ದಿನಗಳಿಂದ ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿ ಅಗಲಿಕೆಯಿಂದ ಸಾವಿರಾರು ಭಕ್ತರು ಶೋಕಸಾಗರದಲ್ಲಿ ಮುಳುಗಿದ್ದಾರೆ.

ಇಂದೇ ಸ್ವಾಮೀಜಿಯವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಾಹಿತಿ ಸಿಕ್ಕಿದೆ. ಮಠದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ನೂರಾರು ಭಕ್ತರು ಮಠದ ಬಳಿ ಜಮಾಯಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ನ ಹಿರಿಯ ನಾಯಕ, ಮಾಜಿ ಶಾಸಕ ಸಿ.ವೆಂಕಟೇಶಪ್ಪ ನಿಧನ

ಅಂಗಡಿ ಮುಂಗಟ್ಟು ಬಂದ್

ಚಿಂಚಣಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ಅಲ್ಲಮಪ್ರಭು ಸ್ವಾಮೀಜಿ ಪಾರ್ಥಿವ ಶರೀರ ಚಿಂಚಣಿ ಗ್ರಾಮಕ್ಕೆ ಆಗಮಿಸಿದ್ದು ಮಠಾಧೀಶರು, ರಾಜಕೀಯ ನಾಯಕರು ಶ್ರೀಗಳ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಗದಗ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ನಿಡಸೋಸಿ ಸ್ವಾಮೀಜಿ ಸೇರಿ ವಿವಿಧ ಮಠಾಧೀಶರು ಅಂತಿಮ ನಮನ ಸಲ್ಲಿಸಿದ್ದಾರೆ. ಚಿಕ್ಕೋಡಿ ಕಾಂಗ್ರೆಸ್ ಶಾಸಕ ಗಣೇಶ್ ಹುಕ್ಕೇರಿ, ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಮಾಜಿ ಎಂಎಲ್ ಸಿ ಮಹಾಂತೇಶ ಕವಟಗಿಮಠ ಸೇರಿ ವಿವಿಧ ರಾಜಕೀಯ ನಾಯಕರು ಅಂತಿಮ ದರ್ಶನ ಮಾಡಿದರು. ಕೆಲಹೊತ್ತಿನಲ್ಲೇ ಚಿಂಚಣಿ ಗ್ರಾಮದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಮಾಡಿ ಬಳಿಕ ಗದಗ ಜಿಲ್ಲೆ ನರಗುಂದ ತಾಲೂಕಿನ ಶಿರೋಳ ಗ್ರಾಮಕ್ಕೆ ರವಾನಿಸಲಾಗುತ್ತೆ. ಸ್ವಾಮೀಜಿಗಳು ಶಿರೋಳ ತೋಂಟದಾರ್ಯ ಮಠದ ಪೀಠಾಧಿಪತಿಗಳೂ ಆಗಿದ್ದರು. ಹೀಗಾಗಿ ಇಂದು ಸಂಜೆಯೇ ಶಿರೋಳ ಗ್ರಾಮದಲ್ಲಿ ಅಲ್ಲಮಪ್ರಭು ಸ್ವಾಮೀಜಿಗಳ ಅಂತ್ಯಕ್ರಿಯೆ ನಡೆಯಲಿದೆ.

ಕರ್ನಾಟಕ ಮಹಾರಾಷ್ಟ್ರ ಗಡಿಭಾಗದಲ್ಲಿ ಕನ್ನಡದ ಸ್ವಾಮೀಜಿ ಎಂದೇ ಅಲ್ಲಮಪ್ರಭು ಶ್ರೀ ಪ್ರಸಿದ್ಧರಾಗಿದ್ದರು.  ಕಳೆದ 30 ವರ್ಷದಿಂದ ಗಡಿಭಾಗದಲ್ಲಿ ಕನ್ನಡ ಬೆಳವಣಿಗೆಗೆ ಪ್ರಮುಖ ಪಾತ್ರ ವಹಿಸಿದ್ದರು. ಪ್ರತಿ ವರ್ಷ ಚಿಂಚಣಿಯ ಮಠದಲ್ಲಿ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದರು. ಶ್ರೀಮಠದಿಂದ 45ಕ್ಕೂ ಹೆಚ್ಚು ಕನ್ನಡ ಗ್ರಂಥಗಳನ್ನು ಪ್ರಕಟಿಸಿದ್ದ ಖ್ಯಾತಿ ಇವರಿಗೆ ಸಲ್ಲುತ್ತದೆ. ಮಠದಿಂದ ಸಿರಿಗನ್ನಡದ ತೇರು ಸಿದ್ಧಪಡಿಸಿದ್ದರು. ಆ ರಥದಲ್ಲಿ ವಿವಿಧ ಕನ್ನಡ ಸಾಹಿತಿಗಳು, ಕನ್ನಡ ಘೋಷಣೆ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಫೋಟೋ ಕೆತ್ತನೆ ಮಾಡಿದ್ದ ವಿಶಿಷ್ಟ ಕನ್ನಡದ ರಥ. ಕಳೆದೊಂದು ದಶಕದಿಂದ ಜಾತ್ರೆಯ ಸಂದರ್ಭದಲ್ಲಿ ಸಿರಿಗನ್ನಡದ ತೇರು ಎಳೆಯುವ ಸಂಪ್ರದಾಯ ರೂಢಿಯಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:34 am, Sun, 12 November 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ