Belagavi News: ಜೈನ ಸಾಧು-ಸಂತ, ಮಠಾಧೀಶರಿಗೆ ಸರ್ಕಾರ ರಕ್ಷಣೆ ಕೊಡಬೇಕು; 108ನೇ ಸಿದ್ದಸೇನ ಮಹಾರಾಜ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಖಂಡಿಸಿ ಸುವರ್ಣ ವಿಧಾನಸೌಧದ ಮುಂದೆ ಜೈನ ಸಮುದಾಯದ ಮುಖಂಡರು ಹಾಗೂ ಮುನಿಗಳು ಹಲಗಾ ಗ್ರಾಮದ 108ನೇ ಸಿದ್ದಸೇನ ಮಹಾರಾಜರ ನೇತೃತ್ವದಲ್ಲಿ ಇಂದು (ಜು.09) ಪ್ರತಿಭಟನೆ ಮಾಡಿದ್ದಾರೆ.

Belagavi News: ಜೈನ ಸಾಧು-ಸಂತ, ಮಠಾಧೀಶರಿಗೆ ಸರ್ಕಾರ ರಕ್ಷಣೆ ಕೊಡಬೇಕು; 108ನೇ ಸಿದ್ದಸೇನ ಮಹಾರಾಜ
ಜೈನ ಸಮುದಾಯ ಪ್ರತಿಭಟನೆ
Follow us
TV9 Web
| Updated By: ವಿವೇಕ ಬಿರಾದಾರ

Updated on: Jul 09, 2023 | 2:44 PM

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿಯ (Chikodi) ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಖಂಡಿಸಿ ಸುವರ್ಣ ವಿಧಾನಸೌಧದ (Suvarna Soudha) ಮುಂದೆ ಜೈನ ಸಮುದಾಯದ (Jain community) ಮುಖಂಡರು ಹಾಗೂ ಮುನಿಗಳು ಹಲಗಾ ಗ್ರಾಮದ 108ನೇ ಸಿದ್ದಸೇನ ಮಹಾರಾಜರ ನೇತೃತ್ವದಲ್ಲಿ ಇಂದು (ಜು.09) ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ಶ್ರಾವಕ್, ಶ್ರಾವಿಕೆಯರು ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆ. ಪ್ರತಿಭಟನೆಗೆ ಶಾಸಕ ಅಭಯ್ ಪಾಟೀಲ್, ಮಾಜಿ ಶಾಸಕ ಸಂಜಯ್ ಪಾಟೀಲ್ ಸಾಥ್ ನೀಡಿದರು. ಈ ಪ್ರತಿಭಟನೆ ಜಾತಿ, ಧರ್ಮ, ಸರ್ಕಾರದ ವಿರುದ್ಧ ಅಲ್ಲ. ಅಂಹಿಸಾ ಪರಮೋ ಧರ್ಮದ ಅಡಿಯಲ್ಲಿ ಹೋರಾಟ ಮಾಡುತ್ತಿದ್ದೇವೆ. ಸಾಧು-ಸಂತರ ಮೇಲೆ ಅನ್ಯಾಯ ಆದಾಗ ನಾವೆಲ್ಲರೂ ಹೊರ ಬರಬೇಕು. ಧರ್ಮ ರಕ್ಷಣೆ, ಸಾಧು ಸಂತರ ರಕ್ಷಣೆಗೆ ಜನರು ಇಂದು ಬೀದಿಗಿಳಿದಿದ್ದಾರೆ ಎಂದು ಪ್ರತಿಭಟನೆಯಲ್ಲಿ ಸಿದ್ದಸೇನ ಮಹಾರಾಜರು ಹೇಳಿದರು.

ಲಕ್ಷ್ಮೀ ಹೆಬ್ಬಾಳ್ಕರ್ ಒಂದಲ್ಲಾ ಐದು ಸಾರಿ ಕರೆ ಮಾಡಿ ಮಾತಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಇಂದು ಬೆಳಗ್ಗೆ ಕರೆ ಮಾಡಿ ಮಾತಾಡಿದ್ದಾರೆ‌. ಸರ್ಕಾರ ಜೈನ ಸಮುದಾಯದ ಜತೆಗಿದೆ ಅಂತಾ ಸಿಎಂ ಹೇಳಿದ್ದಾರೆ. ಒಂದು ಬಟ್ಟೆಯನ್ನೂ ತ್ಯಾಗ ಮಾಡಿದ ಏಕೈಕ ಸಮುದಾಯ ಜೈನ ಸಮುದಾಯ. ಜೈನ ಮುನಿಗಳ ಹೆಸರಿನಲ್ಲಿ ಆಸ್ತಿ ಇಲ್ಲ, ಅಕೌಂಟ್ ಇಲ್ಲ. ಜೈನ ಸಾಧು ಸಂತರ, ಮಠಾಧೀಶರಿಗೆ ಸರ್ಕಾರ ರಕ್ಷಣೆ ಕೊಡಬೇಕು. ಎಲ್ಲ ಧರ್ಮದ ರಕ್ಷಣೆ ಆಗಬೇಕು, ಈ ಧರ್ಮ ಉಳಿಯಲು ಸಾಧು ಸಂತರ ರಕ್ಷಣೆ ಆಗಬೇಕು ಎಂದರು.

ಇದನ್ನೂ ಓದಿ: ಜೈನಮುನಿ ಹತ್ಯೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ: ಸಮಗ್ರ ತನಿಖೆ ಸೂಚನೆ

ಈ ಹಿಂದೆ ಬೆಳಗಾವಿಯಲ್ಲಿ ವಿಹಾರ ಮಾಡುವಾಗ ಮುಸ್ಲಿಂರಿರುವ ಏರಿಯಾದಲ್ಲಿ ನಮಗೆ ಹೋಗಲು ಬಿಟ್ಟಿಲ್ಲ. ಈ ರೀತಿ ಆಗಬಾರದು ಜೈನ ಸಾಧು ಸಂತರಿಗೆ ಸುರಕ್ಷೆ ಕೊಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹ

ಇನ್ನು ಕಲಬುರಗಿ ಜಿಲ್ಲೆಯಲ್ಲಿ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಖಂಡಿಸಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಜೈನ್​ ಸಮಾಜ ಪ್ರತಿಭಟನಾ ಮೆರವಣಿಗೆ ನಡೆಸಿತು. ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ